September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ – ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಅಭಿಮತ

ಮಂಗಳೂರು : ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹೇಳಿದರು.
ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ನವಂಬರ್ 28ರಂದು ಗುರುವಾರ ನಗರದ ನೆಹರು ಮೈದಾನದಲ್ಲಿ  ಏರ್ಪಡಿಸಲಾಗಿದ್ದ ಪೊಲೀಸ್ ಹಾಗೂ ಪತ್ರಕರ್ತರ  ತಂಡದ ಸೌಹಾರ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಘನತೆ ಕಾಪಾಡುವುದು ಎಲ್ಲರ ಕರ್ತವ್ಯ.  ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿರಂತರ ಶ್ರಮ ವಹಿಸುತ್ತಿದ್ದಾರೆ. ಜಿಲ್ಲೆಯ ಮಾಧ್ಯಮಗಳು ಹಾಗೂ ಪ್ರಜ್ಞಾವಂತ ನಾಗರಿಕರು ಇಲಾಖೆಗೆ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ  ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್  ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ ರೈ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್, ಬಿ.ಪಿ. ದಿನೇಶ್ ಕುಮಾರ್, ಉಮೇಶ್ ಪಿ., ಎಸಿಪಿಗಳಾದ ಮನೋಜ್ ಕುಮಾರ್,  ಶ್ರೀಕಾಂತ್, ರವೀಶ್ ನಾಯಕ್, ನಜ್ಮಾ ಫಾರೂಕಿ, ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಉಪಸ್ಥಿತರಿದ್ದರು.


ಪಂದ್ಯಾಟದಲ್ಲಿ ಪೊಲೀಸ್ ತಂಡ ಜಯಗಳಿಸಿತು. ಪೊಲೀಸ್ ತಂಡದ ಮನೋಜ್ ನಾಯಕ್ ಉತ್ತಮ ಬ್ಯಾಟ್ಸ್‌ಮನ್ ಹಾಗೂ ಸಾಗರ್ ಉತ್ತಮ ಬೌಲರ್ ವೈಯಕ್ತಿಕ ಪ್ರಶಸ್ತಿ ಪಡೆದರು.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page