May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿಯ ಖಾಸಗಿ ಕಾಲೇಜ್ ವಿದ್ಯಾರ್ಥಿ ಜೋಯೆಲ್ ಡಾಯಾಸ್ ನೀರಿನಲ್ಲಿ ಮುಳುಗಿ ಸಾವು

ಕಾರ್ಕಳ ದುರ್ಗಾ ಫಾಲ್ಸ್ ಗೆ 7 ವಿದ್ಯಾರ್ಥಿಗಳು ಈಜಲು ಹೋದ ಸಂದರ್ಭ ನಡೆದ ದುರ್ಘಟನೆ

ಉಡುಪಿ: ದುರ್ಗಾ ಫಾಲ್ಸ್‌ಗೆ ಈಜುಲು ಇಳಿದ ವಿದ್ಯಾರ್ಥಿಯೋರ್ವ ನೀರು ಪಾಲಾದ ಆಘಾತಕಾರಿ ಘಟನೆ ನವಂಬರ್ 28ರಂದು ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು 19 ವರ್ಷ ಪ್ರಾಯದ ಜೋಯೆಲ್ ಡಾಯಾಸ್ ಎಂದು ಗುರುತಿಸಲಾಗಿದೆ. ಈತ ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

7 ಮಂದಿ ವಿದ್ಯಾರ್ಥಿಗಳ ತಂಡ ಕಾರ್ಕಳದ ದುರ್ಗಾ ಫಾಲ್ಸ್‌ ಗೆ ತೆರಳಿ, ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಜೋಯೆಲ್ ಡಾಯಾಸ್ ಆಯ ತಪ್ಪಿ ನೀರು ಪಾಲಾಗಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಕಳ ನಗರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page