May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇರ್ವತ್ತೂರು ಪದವು – ವಾರ್ಷಿಕ ಬದ್ರ್ ಮೌಲಿದ್ ಪೋಸ್ಟರ್ ಬಿಡುಗಡೆ.

ಬಂಟ್ವಾಳ : ಇರ್ವತ್ತೂರು ಪದವು ಬದ್ರಿಯಾ ಜುಮಾ ಮಸೀದಿ ಹಾಗೂ ಬದ್ರಿಯಾ ಯಂಗ್ ಮೆನ್ಸ್ ಅಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ವಾರ್ಷಿಕ ಬದ್ರ್ ಮೌಲಿದ್ ಪ್ರಯುಕ್ತ ಏಕದಿನ ಮತ ಪ್ರಭಾಷಣ ಹಾಗೂ ಸನ್ಮಾನ ಕಾರ್ಯಕ್ರಮ ದಶಂಬರ್  17ರಂದು ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಅಲ್ ಹಾಫಿಳ್ ಉಸ್ತಾದ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಕೇರಳ ಭಾಗವಹಿಸಲಿದ್ದಾರೆ.

ಈ ಪ್ರಯುಕ್ತ ಜಮಾಅತ್ ಖತೀಬ ಉಮರ್ ಮದನಿ ನೇತೃತ್ವದಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಮಸೀದಿ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಲ್ ಖಾದಿಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಹಂಝ ಸಖಾಫಿ, ಶಿಕ್ಷಕ ರಫೀಕ್ ಮದನಿ, ಬದ್ರಿಯಾ ಜುಮಾ ಮಸೀದಿಯ  ಅಧ್ಯಕ್ಷ  ಸೇವಾ ಹಾಮದಾಕ,  ಮಾಜಿ ಅಧ್ಯಕ್ಷ ಪಿ.ಕೆ. ಇದ್ದಿನಬ್ಬ, ಅಬ್ದುಲ್ ಲತೀಫ್ ಕಲಾ ಬಾಗಿಲು, ಪಂಜೋಡಿ ಅಬ್ದುಲ್ ಹಮೀದ್, ಕಾರ್ಯದರ್ಶಿ ಮುನೀರ್ ಅಹ್ಮದ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಪಿ. ಮೊಹಮ್ಮದ್ ರಫೀಕ್, ಸದಸ್ಯರಾದ ಅಬ್ದುಲ್ ರಹಿಮಾನ್, ಅಬೂಬಕ್ಕರ್ ಅಂಕರ್ಜಾಲ್, ನಿಸಾರ್ ಅಹಮದ್ ಇರ್ವತ್ತೂರು, ಟಿ.ಕೆ. ನವಾಝ್, ಬದ್ರಿಯಾ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಹಾಫಿಳ್, ಅನಿವಾಸಿ ಭಾರತೀಯ ಕತ್ತಾರ್ ಉದ್ಯಮಿ ಝಹೀರ್ ಅಹ್ಮದ್ ಮತ್ತಿತರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page