May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಸಾವು

ಬಂಟ್ವಾಳ: ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ 45ವರ್ಷ ಪ್ರಾಯದ  ಜಯರಾಮ‌ ಮೂಲ್ಯ ಮೃತಪಟ್ಟವರಾಗಿದ್ದಾರೆ.

ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವಂಬರ್ 29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ. ಅ ಬಳಿಕ ಇವರು ಇಲಾಖೆಯೊಳಗೆ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಬೆಳಿಗ್ಗೆ ಸುಮಾರು 6.30 ವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಜಯರಾಮ ಅವರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆಯಾದರೂ, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ, ಪರೀಕ್ಷೆ ನಡೆಸಿದಾಗ ಅವರು ಮೃತಪಟ್ಟ ಬಗ್ಗೆ ಇಲ್ಲಿನ ವೈದ್ಯರು ತಿಳಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರು ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page