May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಲ್ಕಿಯ ಕಿಲ್ಪಾಡಿ ಬೆಥನಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ

ಮುಲ್ಕಿ : ವಿದ್ಯಾರ್ಥಿಗಳು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವಾಂಗೀನ ಬೆಳವಣಿಗೆಯಲ್ಲಿ ಸಹಕರಿಸಬೇಕು ಎಂದು ಮುಲ್ಕಿ ಪೊಲೀಸ್ ಠಾಣಾಧಿಕಾರಿ ಅನಿತಾ ಹೇಳಿದರು.

ಕಿಲ್ಪಾಡಿ ಬೆಥನಿ ಇಂಗ್ಲೀಷ್ ಮೀಡಿಯಂ ಸ್ಕೂಲ್  ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಹೆತ್ತವರು ಸದಾ ವಿದ್ಯಾರ್ಥಿಗಳ ಬೆನ್ನೆಲುಬಾಗಿದ್ದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕಾಗಿ ಹಾಗೂ ಮೊಬೈಲ್ ಗಳನ್ನು ತಮ್ಮ ಮಗುವಿಗೆ ನೀಡದೆ ತಮ್ಮ ಅಮೂಲ್ಯ ಸಮಯವನ್ನು ತಮ್ಮ ಮಕ್ಕಳೊಂದಿಗೆ ಕಳೆಯುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಲ್ಕಿ ಮೆಡಲಿನ್ ಹೈಸ್ಕೂಲ್ ನ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ಜೆಸಿಂತಾ ಡಿಸೋಜಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಅಡಕವಾಗಿರುತ್ತದೆ. ಸತತ ಪರಿಶ್ರಮದೊಂದಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಬಹುಮಾನಗಳನ್ನು ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ ಪ್ರಯತ್ನ ನಿರಂತರವಾಗಿರಬೇಕು ಧನಾತ್ಮಕ ಚಿಂತನೆಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ರೀಟಾ ಶರಲ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಜೋಸ್ನಾ ಡಿ ಅಲ್ಮೇಡಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸವಿತಾ ಹಾಗೂ ರಾಧಿಕ ಸ್ಪರ್ದಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಸಹ ಶಿಕ್ಷಕಿ ಪ್ರೀಮಾ ಸ್ವಾಗತಿಸಿ, ಛಾಯಾ  ವಂದಿಸಿದರು. ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page