September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೃಷಿ ಜಮೀನಿಗೆ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಭೂಮಾಪಕನ ಬಂಧನ

ಕೃಷಿ ಜಮೀನಿಗೆ ನಕ್ಷೆ ನೀಡಲು ಲಂಚ ಸ್ವೀಕರಿಸಿದ ಭೂಮಾಪಕನನ್ನು ಲೋಕಾಯುಕ್ತ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಭೂಮಾಪಕ ಅಶೋಕ ಎಚ್.ಜಿ. ಎಂದು ಗುರುತಿಸಲಾಗಿದೆ. ಈತ ಹಾವೇರಿ ತಾಲೂಕಿನ ಕಳ್ಳಿಹಾಲ ಗ್ರಾಮದ ಮಂಜುನಾಥ ಕಡ್ಲಿ ಎಂಬವರಿಂದ ರೂಪಾಯಿ 25000 ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮಂಜುನಾಥ ಕಡ್ಲಿ ತಮ್ಮ ಜಮೀನಿನ ಪಾಲು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಜಮೀನಿನ ನಕ್ಷೆ ಅಗತ್ಯವಾಗಿ ಬೇಕಾಗಿತ್ತು. ನಕ್ಷೆ ಮಾಡಲು ಹಾವೇರಿ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಭೂಮಾಪಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ ಎಚ್.ಜಿ. ಅರ್ಜಿದಾರರಿಂದ ರೂಪಾಯಿ 25000 ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಅರ್ಜಿದಾರರು ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page