May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ – ಶಾಸಕ ಮಂಜುನಾಥ ಭಂಡಾರಿ

ಸುಳ್ಯ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ದಶಂಬರ್ 4ರಂದು ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು.

ಗ್ರಾಮ ಪಂಚಾಯತ್ ಸದಸ್ಯರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಿಕೊಡುವುದಾಗಿ ಭರವಸೆ ನೀಡಿದ ಅವರು ಈ ಹಿಂದೆಯೂ ಪ್ರತೀ ವಿಧಾನ ಮಂಡಲ ಅದಿವೇಶನದಲ್ಲಿ ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ, ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ.) ಇದರ ಅಧ್ಯಕ್ಷ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page