August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು, ದಶಂಬರ್ 5 :- ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ  ಭೂ ಕಂದಾಯ, ಭೂ ಮಂಜೂರಾತಿ ನಿಯಮ, ಭೂ ಸುಧಾರಣಾ, ಭೂ ಸ್ವಾಧೀನ ಕಾಯ್ದೆ, ನಿಯಮ ಇನ್ನಿತರ ಕಾಯ್ದೆ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡಲು ಸೃಷ್ಟಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ನಿವೃತ್ತ ನ್ಯಾಯಾಧೀಶರು, ನಿವೃತ್ತ ಕಂದಾಯ ಇಲಾಖೆಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ರೂಪಾಯಿ 70,000 ವೇತನ ಮತ್ತು ನಿವೃತ್ತ ಕಂದಾಯ ಇಲಾಖೆಯ ನೌಕರರಿಗೆ (ನಿವೃತ್ತ ತಹಶೀಲ್ದಾರ್, ಉಪತಹಶೀಲ್ದಾರ್) ರೂಪಾಯಿ 40,000 ಮಾಸಿಕ  ವೇತನ ನಿಗಧಿಗೊಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಬಯೋಡೇಟಾ ಮತ್ತು ದಾಖಲೆಗಳೊಂದಿಗೆ ಮಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸೆಂಬರ್ 20ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಬಂದರ್ ರಸ್ತೆ, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page