July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಶಾಸಕರಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

ಬಂಟ್ವಾಳ : ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.

ಅವರು ಶಾಸಕರ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಪ್ರಸ್ತುತ ಅರ್ಜಿ ಹಾಕಿರುವ 126 ಮಂದಿಯ ಪೈಕಿ ಸರಕಾರದ ಗುರಿಯಂತೆ 36 ಮಂದಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಹೇಳಿದರು.

ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ 318 ಮಂದಿ ಮೇಸ್ತ್ರಿಗಳಿಗೆ ಕಿಟ್, 101 ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ 63 ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು 482 ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ 36 ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.

ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ ಹಾಗೂ ಮುರಳಿ ಉಪಸ್ಥಿತರಿದ್ದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page