May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ‌ತಾಲೂಕು‌  ಬಿಲ್ಲವ ಸೇವಾ ಸಂಘ ಹಾಗೂ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜನವರಿ 19ರಂದು  ನಡೆಯುವ  ತಾಲೂಕು ಮಟ್ಟದ “ಕೋಟಿ – ಚೆನ್ನಯ ಕ್ರೀಡೋತ್ಸವ 2025” ಇದರ ಲಾಂಛನ  ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ದಶಂಬರ್ 8ರಂದು ಭಾನುವಾರ ನಡೆಯಿತು.

ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ. ಸುವರ್ಣ ಮಾತನಾಡಿ, ಬಹಳ ಅರ್ಥಪೂರ್ಣವಾಗಿ ಕೋಟಿ – ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆಯಾಗಿದೆ, ಮುಂದೆ ನಡೆಯುವ ಕ್ರೀಡೋತ್ಸವ ಕಾರ್ಯಕ್ರಮವೂ ಅತ್ಯಂತ ಯಶಸ್ವಿಯಾಗಿ ನಡೆಯುವಲ್ಲಿ ಸಮಿತಿಯ ಜೊತೆ ಸಮಾಜದ ಬಾಂದವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮೂಲಕ ಸಮಾಜ ಮುಖಿಯಾದ ಉತ್ತಮ ಕಾರ್ಯ ನಡೆಯಲಿ ‌ಎಂದು ತಿಳಿಸಿದ ಅವರು, ಬಿಲ್ಲವ ಸಮಾಜದ ಯುವ ಕ್ರೀಡಾಪಟುಗಳು ಕ್ರೀಡೆಯ ಮೂಲಕ ಸಾಧನೆಯನ್ನು ಮಾಡಲು ಇಂತಹ ಕ್ರೀಡೋತ್ಸವ ಕಾರ್ಯಕ್ರಮ ಬಾರಿ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗುರುಕೃಪಾ ಸಂಜೀವ ಪೂಜಾರಿ ಮಾತನಾಡಿ, ಶಿಸ್ತುಬದ್ದವಾದ ಕಾರ್ಯಕ್ರಮ ಮೂಡಿಬರುವ ಮೂಲಕ, ತಾಲೂಕಿನ ಬಿಲ್ಲವರು ಸಂಘಟಿತರಾಗಲು ಕ್ರೀಡೋತ್ಸವ ಕಾರ್ಯಕ್ರಮ ಸಕಾಲಿಕವಾಗಿದೆ.  ಪಕ್ಷ ಬೇಧ ಮರೆತು ಮನೆಯ ಕಾರ್ಯಕ್ರಮ ಎಂಬ ದೃಷ್ಟಿಯಿಂದ ಭಾಗವಹಿಸಿ ಎಂದು ಮನವಿ ಮಾಡಿದರು.

ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ, ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಆನಂದ ಶಂಭೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ ವಂದಿಸಿದರು. ಹಾಗೂ ಧನ್ಯವಾದ ನೀಡಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page