May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು-ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ

ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜಾ ಸ್ವಾಗತ

ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ ಶಕ್ತಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಬಸ್ ಸಂಚಾರ ಇಲ್ಲದೇ ತೊಂದರೆ ಉಂಟಾಗಿದ ಬಗ್ಗೆ ಕಳೆದ ಕೆ.ಡಿ.ಪಿ. ಸಭೆಯಲ್ಲಿ ಪ್ರಸ್ತಾಪಿಸಿ, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಚುಕ್ಕ ಗುರುತಿನ ಪ್ರಶ್ನೆ ಮತ್ತು ಗಮನ ಸೆಳೆಯುವ ಪ್ರಶ್ನೆ ಹಾಕಿರುವ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ದಶಂಬರ್ 9ರಂದು ಪ್ರಾದೇಶಿಕ ಆಯುಕ್ತರು 4 ಪರ್ಮಿಟ್ ಗಳನ್ನು ನೀಡಿ, ಬಸ್ ಪ್ರಾಂಭಿಸುವುದಾಗಿ ತಿಳಿಸಿದರು.

ಆದರೆ ಬಸ್ ಮತ್ತು ಚಾಲಕರ ಲಭ್ಯತೆ ಇಲ್ಲದ ಕಾರಣಕ್ಕಾಗಿ ಶುಕ್ರವಾರ ಬೆಳಿಗ್ಗೆಯಿಂದ 4 ಬಸ್ ಸಂಚಾರ ಪ್ರಾರಂಭಿಸಲಾಗುವುದು ಮತ್ತು ಹೆಚ್ಚಿನ ಬಸ್ ಗಳನ್ನು ಮಂಗಳೂರು ನಗರದಲ್ಲಿ  ಮೂಡಬಿದ್ರೆ – ಕಾರ್ಕಳ ಮಾರ್ಗದಲ್ಲಿ ಸಂಚರಿಸಲಾಗುವುದು ಎಂದು ಸಾರಿಗೆ ಇಲಾಖೆ ಅನುಮತಿ ನೀಡಲಾಗಿದೆ ಎಂದು ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜಾ ರವರು ತಿಳಿಸಿದ್ದಾರೆ ಮತ್ತು ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page