May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯಿಂದ ಅಭಿನಂದನಾ ಸಭೆ

ಬಂಟ್ವಾಳ : ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಶಂಭೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ನವಂಬರ್ 19ರಂದು ಜರಗಿದ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯಿಂದ ಅಭಿನಂದನಾ ಸಭೆಯು  ಶಂಭೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ದಶಂಬರ್ 9ರಂದು ಸೋಮವಾರ ಜರಗಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು ಸ್ವಾಗತ ಸಮಿತಿಯ ಕಾರ್ಯಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳ ಸಾಹಿತ್ಯ ಸಮ್ಮೇಳನವು ನಿರೀಕ್ಷೆಗೂ ಮಿರಿ ಯಶಸ್ವಿಯಾಗಿ ಶಂಭೂರು ಶಾಲೆಯು ರಾಜ್ಯಮಟ್ಟದಲ್ಲಿ ಗುರುತಿಸುವಂತಾಗಿದೆ ಹಾಗೂ ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಬಹಳ ಪ್ರಯೋಜನದಾಯಕವಾಗಿದೆ ಎಂದರು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಆನಂದ ಎ. ಶಂಭೂರು ಎಲ್ಲರ ಭಾಗೇದಾರಿಕೆಯಿಂದ ಮಕ್ಕಳ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿದೆ ಎಂದರು. ಮಕ್ಕಳ ಕಲಾಲೋಕದ  ಅಧ್ಯಕ್ಷ  ರಮೇಶ  ಎಂ. ಬಾಯಾರು  ಮಾತನಾಡಿ  ಕಾರ್ಯಕ್ರಮದ ಯಶಸ್ಸಿಗೆ  ಶಾಲೆಯ ಎಸ್.ಡಿ.ಎಂ.ಸಿ. ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು, ಮೆರವಣಿಗೆ, ಸ್ವಾಗತ ಮತ್ತು ಆತಿಥ್ಯ, ಊಟೋಪಚಾರಗಳ ನಿರ್ವಹಣೆಗಳ ಸಮಿತಿಗಳು, ಶಂಭೂರಿನ ಪರಿಸರದ ಎಲ್ಲ ಸಂಘ ಸಂಸ್ಥೆಗಳ ವಿಶ್ವಾಸವನ್ನು ಪಡೆದು ಸಮ್ಮೇಳನವನ್ನು ನಿರೀಕ್ಷಿತ ಮಟ್ಟಕ್ಕಿಂತಲೂ ಯಶಸ್ವಿಯಾಗಿ ನಡೆಸಲಾಯಿತು ಎಂದರು.

ಸಭೆಯಲ್ಲಿ ಸಮಿತಿಯ ಕೋಶಾಧಿಕಾರಿ ದಯಾನಂದ ಅಡಿಪಿಲ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿಮಲ, ಶಾಲಾಭಿವೃದ್ಧಿ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ನಾಗರಾಜ್ ಅಡೆಪಿಲ, ಸಮಿತಿಯ ಮಾಧ್ಯಮ ಸಂಚಾಲಕ ಚಿನ್ನಾ ಕಲ್ಲಡ್ಕ, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಊರ ಗಣ್ಯರು ಹಾಗೂ ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಮ ಡಿ. ಪಡ್ರೆ ಸ್ವಾಗತಿಸಿ ಕಾರ್ಯಕ್ರಮದ ಲೆಕ್ಕಪತ್ರ ಮಂಡಿಸಿ, ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page