May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಜೀಪ ಗ್ರಾಮದ ಕಂಚಿಡ್ಕಪದವು ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿಗಳ ಧಿಡೀರ್ ಬೇಟಿ

ಬಂಟ್ವಾಳ : ಸಜೀಪ ಗ್ರಾಮದ  ಕಂಚಿನಡ್ಕ ಪದವು ಎಂಬಲ್ಲಿರುವ  ಬಂಟ್ವಾಳ ಪುರಸಭೆಯ ಘಣತ್ಯಾಜ್ಯ ವಿಲೇವಾರಿ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಮುಲೈ ಮುಗಿಲನ್‌ ಅವರು ಸ್ಥಳಕ್ಕೆ ಡಿಸೆಂಬರ್ 17ರಂದು ಮಂಗಳವಾರ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಅಸಮರ್ಪಕ ತ್ಯಾಜ್ಯ ವಿಲೇವಾರಿಯಿಂದ ಉಂಟಾಗಿರುವ ಸಮಸ್ಯೆಯ ಬಗ್ಗೆ ಸ್ಥಳೀಯರು ಕ್ಷೇತ್ರದ ಶಾಸಕ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದರು. ದೂರಿನನ್ವಯ ಕೂಡಲೇ ಸ್ಥಳ ಪರಿಶೀಲನೆ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದಿಡೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಸಮರ್ಪಕವಾದ ತ್ಯಾಜ್ಯ ವಿಲೇವಾರಿಯ ಬಗ್ಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಸೂಚಿಸಿದರು.

ಸಹಾಯಕ ಆಯುಕ್ತ ಹರ್ಷವರ್ದನ್‌, ಉಳ್ಳಾಲ ತಹಶಿಲ್ದಾರ್ ಪುಟ್ಟರಾಜು ಜಿಲ್ಲಾಧಿಕಾರಿಗಳ ಜೊತೆಗಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ವಕ್ಪ್‌ ಸಲಹಾ ಸಮಿತಿ ಮಾಜಿ ಉಪಾಧ್ಯಕ್ಷ ಎಸ್. ಅಬೂಬಕ್ಕರ್‌ ಸಜೀಪ, ಗ್ರಾಮ ಪಂಚಾಯತ್‌ ಸದಸ್ಯರಾದ ಲತೀಫ್‌ ಬೋಳಮೆ, ಅಬ್ದುಲ್‌ ರಹಿಮಾನ್‌, ರಫೀಕ್‌ ಗೋಳಿಪಡ್ಪು, ಇಸ್ಮಾಯಿಲ್‌ ಗೋಳಿಪಡ್ಪು, ಸೋಮನಾಥ್‌ ಭಂಡಾರಿ, ಪ್ರವೀಣ್‌ ಆಳ್ವ , ಹನೀಫ್‌ ಸಜೀಪ, ಹಾಗೂ ಇನ್ನಿತರ ಪ್ರಮುಖರು ಹಾಜರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page