May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟಿ ಚೆನ್ನಯ ಕ್ರೀಡೋತ್ಸವ ಇತಿಹಾಸ ಸೃಷ್ಟಿಸಲಿದೆ – ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ  ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು.

ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ. ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್. ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page