September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಐಎಂಎ ಪುತ್ತೂರು ವತಿಯಿಂದ ಇಬ್ಬರು ವೈದ್ಯರಿಗೆ ‘ಜನಪ್ರಿಯ ವೈದ್ಯಕೀಯ ಸೇವಾ ರತ್ನʼ ಪ್ರಶಸ್ತಿ ಪ್ರದಾನ

ಪುತ್ತೂರು : ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪುತ್ತೂರು ಘಟಕದ ವತಿಯಿಂದ ವೈದ್ಯರಿಗೆ ಉಪನ್ಯಾಸ ಕಾರ್ಯಕ್ರಮ ಮತ್ತು ʼಜನಪ್ರಿಯ ವೈದ್ಯಕೀಯ  ಸೇವಾ ರತ್ನʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಪುತ್ತೂರಿನ ದರ್ಬೆ ಶಂಕರಿ ಗೋಪಾಲ್ ಕೃಷ್ಣ ಆರ್ಕೇಡ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಘಟಕದ ಅಧ್ಯಕ್ಷ ಡಾ. ನರಸಿಂಹ ಶರ್ಮಾ ಕಾನಾವು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಅಬ್ದುಲ್ ಬಶೀರ್ ವಿ.ಕೆ.  ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ. ಕಿರಾಶ್ ಪರ್ತಿಪ್ಪಾಡಿ, ಐಎಂಎ ಪುತ್ತೂರು ಘಟಕದ ಕೋಶಾಧಿಕಾರಿ ಡಾ. ಅಶೋಕ್ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ವೇಳೆ ಹಿರಿಯ ವೈದ್ಯರಾದ ಡಾ.ಜೆ.ಸಿ. ಅಡಿಗ ಮತ್ತು ಮಧುಮೇಹ ತಜ್ಞರಾದ ಡಾ. ನಝೀರ್ ಅಹ್ಮದ್ ಅವರಿಗೆ ‘ಜನಪ್ರಿಯ ವೈದ್ಯಕೀಯ ಸೇವಾ ರತ್ನʼ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ವೈದ್ಯರಾದ ಡಾ. ಅವಿನಾಶ್ ಜೆ., ಸ್ತ್ರೀ ರೋಗ ತಜ್ಞರಾದ ಡಾ. ಫಾತಿಮಾ ಇಸ್ಮತ್, ಮಕ್ಕಳ ತಜ್ಞರಾದ ಡಾ. ಅನೂಪ್ ಇತಿಹಾಸ್ ವಿವಿಧ ವಿಚಾರಗಳಲ್ಲಿ ಉಪನ್ಯಾಸ ನೀಡಿದರು. ಜನಪ್ರಿಯ ಆಸ್ಪತ್ರೆಯ ವೈದ್ಯರಾದ ಡಾ. ಹಸನ್ ಮುಬಾರಕ್ ಮತ್ತು ನಿರ್ದೇಶಕ ಡಾ. ಶಫಾಕ್ ಮೊಹಮ್ಮದ್ ಉಪಸ್ಥಿತರಿದ್ದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page