August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಳೆಂಜ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದ – ಡಿ. ಹರ್ಷೇಂದ್ರ ಕುಮಾರ್

ಕಳೆಂಜ : ಗ್ರಾಮದ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಜನವರಿ 20ರಿಂದ 23 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಜನವರಿ 2ರಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಅಧ್ಯಕ್ಷ ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗರ್ಭ ಗುಡಿಯ ಕೆಲಸದ ಬಗ್ಗೆ ಹಾಗೂ ಅಭಿವೃದ್ಧಿಯ ಬಗ್ಗೆ ದರ್ಶನವನ್ನು ನೀಡಿದರು.

ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಶ್ರೀಧರ್ ರಾವ್ ಕಾಯಡ, ಬ್ರಹ್ಮಕಲಶೋತ್ಸವದ ಸಮಿತಿಯ ಸಂಚಾಲಕ ಚಂದ್ರಶೇಖರ ಕೆ. ನಿಡ್ಲೆ, ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲ್, ಕೇಶವ ಗೌಡ ಬರಮೇಲು ದರ್ಖಾಸು, ಕೊರಗಪ್ಪ ಗೌಡ ನಿಡ್ಲೆ, ಬಾಲಕೃಷ್ಣ ಬರಮೇಲು, ಬಾಲಕೃಷ್ಣ ದೇವಾಡಿಗ, ನೀಲಯ್ಯ ಗೌಡ, ರಾಮಚಂದ್ರ ಗೌಡ, ರಘುಚಂದ್ರ ಪೂಜಾರಿ, ರುಕ್ಮಯ್ಯ ಗೌಡ ಬರಮೇಲು, ವಸಂತ ಪೂಜಾರಿ, ದೇವಪ್ಪ ಪೂಜಾರಿ, ರಮ್ಯಾ ಮಲ್ಲಜಾಲ್, ಶೋಭಾ ನಾಯೆರ್ ಮಾರ್, ವಿನೋದ, ದಿವ್ಯ ಉಷಾ ಹಾಗೂ ಗೀತಾ ಉಪಸ್ಥಿತರಿದ್ದರು.

You may also like

News

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ

“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ
News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ

You cannot copy content of this page