ಉಳ್ಳಾಲ: ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಕುಟುಂಬವೊಂದರ ಬಿಬಿಎ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದಿದೆ.
ನಗರದ ಶ್ರೀದೇವಿ ಕಾಲೇಜಿನ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿ ಹರ್ದೀಪ್ (20)ಮೃತ ದುರ್ದೈವಿ.ಹರ್ದೀಪ್ ಗುರುವಾರ ಸಂಜೆ ತನ್ನ ಬಗಂಬಿಲದ ನಿವಾಸದ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಕುಟುಂಬವು ಆರ್ಥಿಕ ಸಮಸ್ಯೆಯಲ್ಲಿದ್ದು ಖಿನ್ನತೆಗೊಳಗಾಗಿದ್ದ ಹರ್ದೀಪ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಮೃತನ ತಾಯಿಯ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.
Leave a Reply