ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ
ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಈತ ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಈತ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.









