ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹನೀಫ್ ಪೆರ್ಲಾಪು ಆಯ್ಕೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ತಾಲೂಕಿನ ಹನೀಫ್ ಪೆರ್ಲಾಪು ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಸಚಿವ ಹಾಗೂ ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬಿ. ರಾಮನಾಥ ರೈ ಅವರ ಶಿಫಾರಸ್ಸಿನ ಮೇರೆಗೆ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರು ಹನೀಫ್ ಪೆರ್ಲಾಪು ಅವರನ್ನು ರಾಜ್ಯ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ನೇಮಕಾತಿ ಆದೇಶ ಪತ್ರವನ್ನು ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ಗೌಡ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಹನೀಫ್ ಪೆರ್ಲಾಪು ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. […]













