ಶಂಭೂರು ಸರ್ಕಾರಿ ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶಿಲನ್ಯಾಸ ಹಾಗೂ ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ
ಗ್ರಾಮಕ್ಕೊಂದು ಮಾದರಿ ಶಾಲೆ ರೂಪಿಸಿ, ಕಡಿಮೆ ಮಕ್ಕಳಿರುವ ಶಾಲೆಗಳ ವಿದ್ಯಾರ್ಥಿಗಳನ್ನು ಒಂದೇ ಕೇಂದ್ರದಲ್ಲಿ ಸೇರಿಸಿ ಅಗತ್ಯ ವಾಹನ ಹಾಗೂ ಶಿಕ್ಷಕರ ಸೌಲಭ್ಯ ಒದಗಿಸುವ ಮೂಲಕ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕು. ಸರ್ಕಾರಿ ಶಾಲೆಗಳು ಪ್ರಗತಿ ಹೊಂದಿದಾಗ ಪ್ರತಿಯೊಬ್ಬ ನಾಗರಿಕನಿಗೂ ಶಿಕ್ಷಣ ಲಭಿಸುವುದು ಸಾಧ್ಯ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶಂಭೂರಿನಲ್ಲಿ ಎಂಆರ್‌ಪಿಎಲ್ ಸಂಸ್ಥೆಯ ಅನುದಾನದಿಂದ ನಿರ್ಮಿಸಲಾದ ಎರಡು ನೂತನ ತರಗತಿ […]













