ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ಅಕ್ಟೋಬರ್ 22ರವರೆಗೆ ದಸರಾ ರಜೆ ವಿಸ್ತರಣೆ – ಶಿಕ್ಷಣ ಇಲಾಖೆ ಆದೇಶ
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನೀಡಲಾಗಿದ್ದ ದಸರಾ ರಜೆಯನ್ನು ಅಕ್ಟೋಬರ್ 22, ರವರೆಗೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 21ರಂದು ದಸರಾ ಹಬ್ಬದ ಅಂಗವಾಗಿ ನಡೆಯುವ ಅಂತಿಮ ದಿನದ ಪೂಜೆ ಹಾಗೂ ಮೆರವಣಿಗೆಗಳು ರಾತ್ರಿ ತಡವಾಗುವವರೆಗೂ ನಡೆಯಲಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಮತ್ತು ಪೋಷಕರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದಸರಾ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸುತ್ತಾರೆ. ಹಬ್ಬದ ನಿಮಿತ್ತ ದೂರದ ಊರುಗಳಿಗೆ ತೆರಳಿರುವವರು […]













