November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಯಿಲ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಸೂರಿಕುಮೇರುವಿನ ಜೆಸಿಂತಾ ಮಸ್ಕರೇನ್ಹಸ್ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮ 

ಸುಧೀರ್ಘ 27 ವರ್ಷಗಳ ಸೇವೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ಕಿರಿಯ ಪ್ರಾಥಮಿಕ ಶಾಲೆ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿತ್ತು. ಶಾಲೆಯಲ್ಲಿ ಸುದೀರ್ಘ 27 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ  ಇಲಾಖೆಯ ನಿಯಮದ ಪ್ರಕಾರ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಸೂರಿಕುಮೇರುವಿನ ಜೆಸಿಂತಾ ಪ್ಲೇವಿ ಮಸ್ಕರೇನಸ್  ಇವರ ಬೀಳ್ಕೊಡುಗೆ ಕಾರ್ಯಕ್ರಮವು ನವೆಂಬರ್ 23ರಂದು ಭಾನುವಾರ ವಿಶೇಷವಾಗಿ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿಗಳು ಸೇರಿ ಗುರುವಿಗೆ ಗುರುದಕ್ಷಿಣೆಯಾಗಿ  ಶಾಲೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ಶಿಬಿರವನ್ನು ಮಾಡುವುದರ […]

News

ಬೆಳ್ತಂಗಡಿಯ ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿಯ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ನವೆಂಬರ್ 23ರಂದು ಭಾನುವಾರ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಹಮ್ಮದ್ ಮಿಫ್ರಾ ದಂತ ವೈದ್ಯರು, ಡಾ. ಅಪ್ಸಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನೆಪೋಯ ಹಾಗೂ […]

News

ಮಂಗಳೂರಿನಲ್ಲಿ ಯುವ ಮನಸ್ಸುಗಳ ಕ್ರೀಡಾಸಕ್ತಿಗೆ ಸಾಕ್ಷಿಯಾದ ನಮೋ ಚೆಸ್‌ ಟೂರ್ನಮೆಂಟ್‌

ಟೂರ್ನಿಗೆ ಮೆರುಗು ತಂದ ಸಚಿವ ಶ್ರೀಪಾದ ನಾಯಕ್‌ – ಸಂಸದ ಕ್ಯಾಪ್ಟನ್ ಚೌಟರವರ ಚೆಸ್‌ ಆಟ ಸಂಸದ್ ಖೇಲ್ ಮಹೋತ್ಸವ ಪ್ರಯುಕ್ತ ಮಂಗಳೂರಿನ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ “ನಮೋ ಚೆಸ್ ಟೂರ್ನಮೆಂಟ್‌” ಅನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರು ಉದ್ಘಾಟಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತಕ್ಕಾಗಿ ಫಿಟ್‌ ಯುವ ಪರಿಕಲ್ಪನೆಯಡಿ ನಡೆದ ಈ ಈ ಚೆಸ್‌ ಟೂರ್ನಿಯಲ್ಲಿ ಕೇಂದ್ರ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ ಯೆಸ್ಸೋ ನಾಯಕ್‌ […]

News

ಪಂಚಾಯಿತಿ ಅವ್ಯವಹಾರ ಬಯಲು ಮಾಡಲು ಹಾಲು ಕೊಡುವ ಹಸು ಮಾರಾಟ ಮಾಡಿ RTI ದಾಖಲೆ ಪಡೆದ ರೈತ ರವಿಯ ಧೈರ್ಯ ರಾಜ್ಯಾದ್ಯಂತ ಚರ್ಚೆ

16,000 ಪುಟಗಳ ದಾಖಲೆಗಾಗಿ ₹32,000 ಪಾವತಿಸಿದ ರವಿ – ಎತ್ತಿನಗಾಡಿಯಲ್ಲಿ ಮನೆಗೆ ಸಾಗಿಸಿದ ದಾಖಲೆಗಳ ಬೃಹತ್ ಬಂಡಲ್ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಸವನಹಳ್ಳಿ ಕೊಪ್ಪಲು ಗ್ರಾಮದ ರೈತ ಬಿ.ಎಸ್. ರವಿಯವರು ಗ್ರಾಮ ಪಂಚಾಯತ್ ನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಬಯಲು ಮಾಡಲು ಕೈಗೊಂಡಿರುವ ಸಾಹಸ ಎಲ್ಲರನ್ನು ಆಶ್ಚರ್ಯಗೊಳಿಸಿದೆ. ಮಾಹಿತಿ ಹಕ್ಕು ಕಾಯ್ದೆ (RTI) ಯಡಿ ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ PDO ರವರು ಒಟ್ಟು 16,000 ಪುಟಗಳ ದಾಖಲೆಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ. ಕಾಯ್ದೆಯ ಪ್ರಕಾರ ಪ್ರತಿ ಪುಟಕ್ಕೆ […]

News

ಸುರತ್ಕಲ್‌ – ನಂತೂರು – ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ NHAIಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್ – ನಂತೂರು – ಬಿ.ಸಿ. ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ […]

News

ಧರ್ಮಸ್ಥಳ ಲಕ್ಷದೀಪೋತ್ಸವ – ಸಮವಸರಣ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ನವೆಂಬರ್ 20ರಂದು ಗುರುವಾರ ರಾತ್ರಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಧರ್ಮಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಧರ್ಮೋಪದೇಶ ಪಡೆಯುವ ಅವಕಾಶವಿದೆ. ಜೈನರ ಆರಾಧನಾ ಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿವೆ. ಬೀಡಿನಿಂದ ಭವ್ಯ ಮೆರವಣಿಗೆಯಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಮೂರ್ತಿಯನ್ನು ಮಹೋತ್ಸವ ಸಭಾಭವನಕ್ಕೆ ಕೊಂಡುಹೋಗಿ ಅಲ್ಲಿ ಸಮವಸರಣ ಪೂಜೆ ನಡೆಸಲಾಯಿತು. ಬಾಹುಬಲಿ ಸೇವಾಸಮಿತಿ ಆಶ್ರಯದಲ್ಲಿ […]

News

ಪೊಲೀಸ್ ಘಟಕಗಳ “ವಾರ್ಷಿಕ ಕ್ರೀಡಾಕೂಟ–2025” ಕ್ಕೆ ಭವ್ಯ ಚಾಲನೆ

ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕಗಳ ಸಂಯೋಜಿತವಾಗಿ ಆಯೋಜಿಸಲಾದ “ವಾರ್ಷಿಕ ಕ್ರೀಡಾಕೂಟ–2025” ನ್ನು ನಿನ್ನೆ ನವೆಂಬರ್ 21ರಂದು ಶುಕ್ರವಾರ ಮಂಗಳೂರಿನಲ್ಲಿ ಉದ್ಘಾಟನೆ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ., ಐಎಎಸ್, ರವರು ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್., ಐಪಿಎಸ್, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ […]

News

ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್  ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ರವರನ್ನು ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ನೇಮಕ ಮಾಡಿ ಆದೇಶಿಸಿದ್ದಾರೆ. ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆಯವರು ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರಾಗಿ ಪಕ್ಷದ ಬೆಳವಣಿಗೆಗಾಗಿ ಸದಾ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದರು. ಪಕ್ಷದ ಸಿದ್ಧಾಂತ, ಸಾಮಾಜಿಕ ನ್ಯಾಯ, ಜಾತ್ಯಾತೀತ ಮೌಲ್ಯಗಳು ಮತ್ತು ಭಾರತೀಯ ಸಂವಿಧಾನದ ನಂಬಿಕೆಯಲ್ಲಿ ಅಚಲ ನಿಲುವು ಹೊಂದಿರುವ ಅವರಿಗೆ ಇವರ ಪಕ್ಷ ನಿಷ್ಠೆಯನ್ನು ಗುರುತಿಸಿ ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ […]

News

ನವೆಂಬರ್ 23ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ‘ನಮೋ ಚೆಸ್ ಟೂರ್ನಮೆಂಟ್’ ಆಯೋಜನೆ

ಸಂಸದ್‌ ಕ್ರೀಡಾ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಭಾನುವಾರ ಮಂಗಳೂರು ನಗರದಲ್ಲಿ ‘ನಮೋ ಚೆಸ್‌ ಟೂರ್ನಮೆಂಟ್‌’ ಆಯೋಜಿಸಲಾಗಿದೆ. ನಗರದ ಯುಎಸ್‌ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್‌ ಟೂರ್ನಮೆಂಟ್‌ ನಡೆಯಲಿದೆ. ಈಗಾಗಾಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (U-10) Boys & Girls, ಜ್ಯೂನಿಯರ್ (U-15) Boys & Girls, ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್‌ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ 8ಕ್ಕೆ […]

News

ನವೆಂಬರ್ 29ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರೀಯ ಕ್ರಿಶ್ಚಿಯನ್ ಕನ್ವೆನ್ಷನ್ –  AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಪ್ರತಿನಿಧಿತ್ವ

ದೇಶದ ಕ್ರಿಶ್ಚಿಯನ್ ನಾಗರಿಕರ ಹಕ್ಕು–ಸಂರಕ್ಷಣೆಗಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ Concerned Christian Citizens of India (CCCI) ಸಂಘಟನೆಯು ರಾಷ್ಟ್ರೀಯ ಕ್ರಿಶ್ಚಿಯನ್ ಕನ್ವೆನ್ಷನ್‍ನ್ನು ನವೆಂಬರ್ 29ರಂದು ಶನಿವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲು ಘೋಷಿಸಿದೆ. AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಇದರಲ್ಲಿ ಭಾಗಿಯಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದವರನ್ನು ಪ್ರತಿನಿಧಿಸಲಿದ್ದಾರೆ. ವಿಭಿನ್ನ ಪಂಥಗಳ ನಾಗರಿಕರ ಒಕ್ಕೂಟದಿಂದ ಆರಂಭವಾದ ಈ ಚಳವಳಿಗೆ ಯುನೈಟೆಡ್ ಕ್ರಿಶ್ಚಿಯನ್ ಫೋರಂ (UCF) ಸಂಪೂರ್ಣ ಬೆಂಬಲ […]

You cannot copy content of this page