November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಮಂಗಳೂರಿನ ಗ್ಲೋಬಲ್ ಅರೇನಾ ವಿದ್ಯಾರ್ಥಿಗಳ ಸೊಬಗು — ಇಬ್ಬರು ಪ್ರಥಮ ಹಾಗೂ ಓರ್ವ ದ್ವಿತೀಯ ಸ್ಥಾನ

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 17 ರಂದು ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಮಂಗಳೂರಿನ ವಾಮಂಜೂರಿನ ಗ್ಲೋಬಲ್ ಸ್ಪೋರ್ಟ್ಸ್ ಅರೇನಾ ಸಂಸ್ಥೆಯ ವಿದ್ಯಾರ್ಥಿಗಳು ತಮ್ಮ ಮಿಂಚನ್ನು ತೋರಿಸಿದ್ದಾರೆ. 14 ವರ್ಷದೊಳಗಿನ ವಿಭಾಗದ ಬಾಲಕರ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಶನ್ ರಾಜ್ ಹಾಗೂ ನಮಿಶ್ ಎನ್.ಕೆ. ಇವರಿಬ್ಬರು ಪ್ರಥಮ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಶನ್ ರಾಜ್ […]

News

ಕಿರುಕುಳದ ಬೇಸರದಿಂದ ಹರೀಶ್ ಆತ್ಮಹತ್ಯೆ – ವೆಲ್ಡರ್ ಹೇಮಂತ್ ಆಚಾರ್ಯ ವಿರುದ್ಧ ಪೊಲೀಸ್ ಕ್ರಮ, ಪ್ರಕರಣ ದಾಖಲು

ಪುತ್ತೂರಿನ ಒಂದು ಕಾಂಪ್ಲೆಕ್ಸ್‌ನಲ್ಲಿ ವಾಹನ ಪೈಟಿಂಗ್ ಕೆಲಸ ಮಾಡುತ್ತಿದ್ದ ಬಂಟ್ವಾಳ ಇಡ್ಕಿದು ನಿವಾಸಿ ಹರೀಶ್ (ಮೃತ) ಅವರಿಗೆ, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬಾತ ಕಳೆದ ಒಂದು ತಿಂಗಳಿನಿಂದ ವಿನಾಕಾರಣ ಬೈಯುತ್ತಾ, ಮಾನಸಿಕ ಕಿರುಕುಳ ನೀಡುತ್ತಿದ್ದಾನೆಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಆರೋಪಿಯು ಹರೀಶ್ ರವರ ಮೇಲೆ ದೌರ್ಜನ್ಯ ನಡೆಸಿ, ತಲ್ವಾರ್ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಮೃತರ ಮಗಳು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕಿರುಕುಳದಿಂದ ಮನನೊಂದು […]

News

‘ಸಂಸದರ ನಡೆ ಗ್ರಾಮದ ಕಡೆʼ – ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾಪ್ಟನ್ ಚೌಟ

‘ಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟರವರು ನವೆಂಬರ್ 20ರಂದು ಗುರುವಾರ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾಪ್ಟನ್ ಚೌಟರವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು ಆಲಿಸಿ ಸೂಕ್ತ […]

News

ದಕ್ಷಿಣ ಕನ್ನಡದಲ್ಲಿ ಶೇಕಡಾ 95ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಇಂದು ನವೆಂಬರ್ 20ರಂದು ಗುರುವಾರ ಸುಳ್ಯ ಗಾಂಧಿನಗರದಲ್ಲಿ ಚಾಲನೆ ನೀಡಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಕಾರ್ಯಕ್ರಮವು ಜಿಲ್ಲೆಯಲ್ಲಿ […]

News

ಧರ್ಮಸ್ಥಳ ಲಕ್ಷದೀಪೋತ್ಸವ – ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ

ಹಣ ಮತ್ತು ಬಹುಮಾನಕ್ಕಾಗಿ ಸಾಹಿತ್ಯ ರಚನೆ ಸಲ್ಲದು. ಸಮಾಜ ಕಲ್ಯಾಣಕ್ಕಾಗಿ ಪ್ರೀತಿಯಿಂದ ಸಾಹಿತ್ಯ ರಚನೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ. ಪ್ರೇಮಶೇಖರ ಹೇಳಿದರು. ಅವರು ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನವೆಂಬರ್ 18ರಂದು ಬುಧವಾರ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಸಾಹಿತಿಗಳು ಬದುಕಿನ ವಾಸ್ತವದ ಬಗ್ಗೆ ಸಾಹಿತ್ಯ ಕೃತಿಗಳಲ್ಲಿ ಪ್ರತಿಬಿಂಬಿಸುವುದಿಲ್ಲ. ಏನು ನಡೆಯುತ್ತಿದೆಯೋ ಅದಕ್ಕೆ ವಿರುದ್ಧವಾಗಿ ಬರೆಯುತ್ತಾರೆ. ದೇಶದ ಅಸ್ತ್ವಿತ್ವ ಭವಿಷ್ಯದ ಬಗ್ಗೆ ಮುಂದಿನ ಸವಾಲುಗಳ ಬಗ್ಗೆ ಸಾಹಿತ್ಯ ಕೃತಿಗಳ ಮೂಲಕ […]

News

ಸೈಂಟ್ ಎಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್‌.ಜೆ.ಯವರು ಹೃದಯಾಘಾತದಿಂದ ನಿಧನ

ಮಂಗಳೂರಿನ ಪ್ರತಿಷ್ಠಿತ ಸೈಂಟ್ ಎಲೋಶಿಯಸ್ ಕಾಲೇಜಿನಲ್ಲಿ 2007 ರಿಂದ 2017 ರವರೆಗೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ 68 ವರ್ಷ ಪ್ರಾಯದ ವಂದನೀಯ ಫಾದರ್ ಸ್ವೀಬರ್ಟ್ ಡಿಸಿಲ್ವ ಎಸ್.ಜೆ.ಯವರು ಇಂದು ನವೆಂಬರ್ 20ರಂದು ಗುರುವಾರ ಬೆಂಗಳೂರಿನ ಸೈಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಇವರು ಮಂಗಳೂರು ಸೈಂಟ್ ಎಲೋಶಿಯಸ್ ಕಾಲೇಜು ಹಾಗೂ ಇತರ ಕಾಲೇಜುಗಳಲ್ಲಿ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಜಿ ರೆಕ್ಟರ್ ಹಾಗೂ ಪ್ರೋ-ಚಾನ್ಸಲರ್ ಆಗಿದ್ದ ಇವರು, […]

News

ಪತಿಗೆ ಕತ್ತಿಯಿಂದ ಹಲ್ಲೆ – ಆರೋಪಿ ಪತ್ನಿಯ ಬಂಧನ

ಮಹಿಳೆಯೋರ್ವಳು ತನ್ನ ಪತಿಗೆ ಕತ್ತಿಯಿಂದ ಇರಿದು ಹಲ್ಲೆ ನಡೆಸಿದ ಘಟನೆ ಬಿ. ಸಿ. ರೋಡ್ KSRTC ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ನಿನ್ನೆ ನವೆಂಬರ್ 19ರಂದು ಬುಧವಾರ ರಾತ್ರಿ ನಡೆದಿದೆ. ಆರೋಪಿ ಮಹಿಳೆಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಹಲ್ಲೆಯಿಂದ ಗಾಯಗೊಂಡವರು. ಅವರ ಪತ್ನಿ ಜ್ಯೋತಿ ಕೆ.ಟಿ. ಹಲ್ಲೆ ನಡೆಸಿದ ಆರೋಪಿ, ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

News

ಮಂಗಳೂರಿನಲ್ಲಿ ಪೈಪ್‌ಲೈನ್ ಹಾನಿಯಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ – ದುರಸ್ತಿ ಪೂರ್ಣ

ನಾಳೆ ನವೆಂಬರ್ 20ರಂದು ಗುರುವಾರ ಬೆಳಿಗ್ಗೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮಂಗಳೂರಿನ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆ ನವೆಂಬರ್ 17ರಂದು ಸೋಮವಾರ ಬೆಳಗ್ಗೆ ಪಡೀಲ್ ಸಮೀಪದ ಕಣ್ಣೂರು ಬಳಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು, ಕೆಲಸವನ್ನು ಇಂದು ನವೆಂಬರ್ 19ರಂದು ಬುಧವಾರ ಪೂರ್ಣಗೊಳಿಸಲಾಗಿದೆ. ಪಾಲಿಕೆಯ ಪ್ರಕಾರ, ದುರಸ್ತಿ ಕಾರ್ಯ ಪೂರ್ಣಗೊಂಡಿರುವುದರಿಂದ ನಾಳೆ ನವೆಂಬರ್ 20ರಂದು […]

News

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72ನೇ ಸಹಕಾರಿ ಸಪ್ತಾಹಕ್ಕೆ ಚಾಲನೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಗೌರವ ಪ್ರಧಾನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಹಾಲು ಉತ್ಪಾದಕರ ಸಹಕಾರಿ ಸಂಘಗಳು ಹಾಗೂ ಇನ್ನಿತರ ಸಹಕಾರಿ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಡಾ. ಎನ್.ಎಂ. ರಾಜೇಂದ್ರ ಕುಮಾರ್ ಮಾರ್ಗ ದರ್ಶನದಲ್ಲಿ ದಕ್ಷಿಣ ಕನ್ನಡ […]

News

ಧರ್ಮಸ್ಥಳ ಲಕ್ಷದೀಪೋತ್ಸವ – ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ

ಮಾನವ ಸೇವೆಯೇ ಶ್ರೇಷ್ಠ ಧರ್ಮ – ಸಚಿವ ಡಾ. ಎಂ.ಬಿ. ಪಾಟೀಲ್ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ವಿಶಾಲ ಮನೋಭಾವ ನಮ್ಮದಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಅನುಷ್ಠಾನಗೊಳಿಸುವದರೊಂದಿಗೆ ಇತರರ ಧರ್ಮವನ್ನೂ ಗೌರವಿಸುವುದು ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಜೀವಾಳವಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮ ಎಂದು ಸಚಿವ ಡಾ. ಎಂ.ಬಿ. ಪಾಟೀಲ್ ಹೇಳಿದರು. […]

You cannot copy content of this page