November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಮತಾ ಅವರು ಅಂಚೆ ಇಲಾಖೆಯ ಕರ್ತವ್ಯ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಮುಕ್ರಂಪಾಡಿಯಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಮಮತಾ […]

News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026. Rev. Fr Suraj Joseph Lobo, inaugurated the tournament on at Father Muller playground of the college. Rev. Fr Donald Nilesh Crasta, Administrator, Father Muller homoeopathic medical college and hospital presided over the programme. The inaugural […]

News

MRPL ಸ್ಫೋಟದಲ್ಲಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವಾ ಸಾವು – 17 ದಿನಗಳ ಚಿಕಿತ್ಸೆ ವಿಫಲ

MRPLನಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವಾ ಅವರು 17 ದಿನಗಳ ಚಿಕಿತ್ಸೆಯ ಬಳಿಕ ಇಂದು ಅಕ್ಟೋಬರ್ 17ರಂದು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಸುರತ್ಕಲ್ ಸಮೀಪದ ಇಡ್ಯ ಗ್ರಾಮದ ಕಾನ ನಿವಾಸಿಯಾಗಿದ್ದ ರಾಜೇಶ್ ಅವರು ಹಲವು ವರ್ಷಗಳಿಂದ MRPL ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಫೋಟದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ […]

News

ಮಹಿಳೆ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣ – ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಜಾಗದ ವಿಚಾರಕ್ಕೆ ಸಂಬಂಧಿಸಿದ ವಿವಾದದಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ದೇವರಾಜ್ ವೈ.ಎಚ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಚಾರವಾಗಿ ಉಂಟಾದ ತಕರಾರಿನ ಸಂದರ್ಭದಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಆರೋಪದಡಿ […]

News

ಕೋಮುದ್ವೇಷದ ಭಾಷಣ ಆರೋಪ – ಜಗದೀಶ್ ಕಾರಂತ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಪುತ್ತೂರಿನ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕೋಮುದ್ವೇಷದ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಜಗದೀಶ್ ಕಾರಂತ್ ಮತ್ತು ಶ್ರೀಕಾಂತ್ ಶೆಟ್ಟಿ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 15ರಂದು ಗುರುವಾರ ನ್ಯಾಯಾಲಯ ಈ ಆದೇಶ ನೀಡಿದ್ದು, ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಪೂರ್ಣ ವಿಚಾರಣೆಯ ಬಳಿಕ ಪುರಸ್ಕರಿಸಿದೆ. ದರ್ಬೆ ಘಟನೆ ಬಳಿಕ ವಿವಾದಾತ್ಮಕ […]

News

MBA ಬಳಿಕ ಕೃಷಿಯತ್ತ ಮುಖ ಮಾಡಿದ ಯುವತಿ – 25 ಎಕರೆ ಹೈಟೆಕ್ ಕೃಷಿಯಿಂದ ₹4 ಕೋಟಿ ವಹಿವಾಟು

ಎಂಬಿಎ ಪದವಿ, ಕಾರ್ಪೊರೇಟ್ ಉದ್ಯೋಗದ ಅವಕಾಶಗಳನ್ನು ಬದಿಗಿಟ್ಟು ಕೃಷಿಯನ್ನೇ ಉದ್ಯಮವಾಗಿಸಿಕೊಂಡ 27 ವರ್ಷದ ಯುವತಿ ಪ್ರಣೀತಾ ವಾಮನ್ ಇಂದು ಯಶಸ್ವಿ ಕೃಷಿಕ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನ ಕಲ್ವಾಡಿ ಗ್ರಾಮದ ಪ್ರಣೀತಾ, ಕೇವಲ ಒಂದು ಎಕರೆ ಪ್ರದೇಶದಲ್ಲಿ ಆರಂಭಿಸಿದ ಹೈಟೆಕ್ ಕ್ಯಾಪ್ಸಿಕಂ ಕೃಷಿಯನ್ನು 25 ಎಕರೆಗೆ ವಿಸ್ತರಿಸಿ, ವಾರ್ಷಿಕ ₹4 ಕೋಟಿ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆಸಿದ್ದಾರೆ. ಅಗ್ರಿಬಿಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ MBA ಪದವಿ ಪಡೆದಿರುವ ಪ್ರಣೀತಾ ಅವರ ಸಾಧನೆ, ಆಧುನಿಕ ತಂತ್ರಜ್ಞಾನ ಮತ್ತು […]

News

Feast of Saint Gerard Majella Celebrated by OBG Team at Father Muller

The Department of Obstetrics and Gynaecology (OBG), in collaboration with the Nursing Service Department and Father Muller College of Nursing, celebrated the Feast of Saint Gerard Majella, the patron saint of expectant mothers and childbirth, on 16 October 2026 at the Hospital Conference Hall, Father Muller Medical College Hospital. Regina Lasrado, former In-charge of the […]

News

ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರು ಇಂದು ಅಕ್ಟೋಬರ್ 16ರಂದು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಕರ್ನಾಟಕದ 20ನೇ ರಾಜ್ಯಪಾಲೆಯಾಗಿ ಹಾಗೂ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ಲೋಕಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಾದ ವಿಭು ಬಖ್ರು ಅವರು ಡಾ. ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಗಣ್ಯರು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಈ […]

News

ಬ್ಲೂ ಕಾರ್ಬನ್ ಸಂರಕ್ಷಣೆಗೆ ಎನ್‌ಐಟಿಕೆ–ಇಎಂಪಿಆರ್‌ಐ ಸಹಯೋಗ – ತಿಳುವಳಿಕಾ ಒಪ್ಪಂದಕ್ಕೆ ಸಹಿ

ಕರಾವಳಿ ಪರಿಸರ ವ್ಯವಸ್ಥೆಗಳ ಸಂರಕ್ಷಣೆ, ಮ್ಯಾಂಗ್ರೋವ್ ಪುನಶ್ಚೇತನ ಹಾಗೂ ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ವೈಜ್ಞಾನಿಕ ಮತ್ತು ನೀತಿ ಆಧಾರಿತ ಕ್ರಮಗಳನ್ನು ಬಲಪಡಿಸುವ ಉದ್ದೇಶದಿಂದ ಎನ್‌ಐಟಿಕೆ ಸುರತ್ಕಲ್ ಮತ್ತು ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ) ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಎನ್‌ಐಟಿಕೆ ಸುರತ್ಕಲ್‌ನಲ್ಲಿ ಅಕ್ಟೋಬರ್ 14ರಂದು ನಡೆದ ‘ಬ್ಲೂ ಕಾರ್ಬನ್ ಪರಿಸರ ವ್ಯವಸ್ಥೆಗಳು ಮತ್ತು ಮ್ಯಾಂಗ್ರೋವ್ ಯೋಜನೆಗಳು’ ಕುರಿತ ಉನ್ನತ ಮಟ್ಟದ ಹಿತಾಸಕ್ತಿದಾರರ ಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕರ್ನಾಟಕದ […]

News

ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಗೆ ಕಠಿಣ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹50,000 ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. 2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 40/2021ರ ಅಡಿಯಲ್ಲಿ ಪ್ರಕರಣ […]

You cannot copy content of this page