November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್. ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ.ಎಸ್.  ಆಯ್ಕೆಯಾಗಿರುತ್ತಾನೆ. ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ. ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ […]

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ ಗ್ರಾಮದ ಸರ್ವೆ ನಂಬರ್ 135 ರಲ್ಲಿ ಇರುವ ಸರಕಾರಿ ಜಮೀನಿನ ಮೇಲೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಐಶಾರಾಮಿ ಬಂಗ್ಲೆ ನಿರ್ಮಿಸಿರುವ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಆದೇಶದಂತೆ ಬಂಟ್ವಾಳ ತಹಶೀಲ್ದಾರ್ ಕಚೇರಿಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಬಂಟ್ವಾಳ ತಹಶೀಲ್ದಾರ್ ಕಚೇರಿ “ಎನ್‌ಸಿಆರ್/ಸಿಆರ್/262/2025-26” ಸಂಖ್ಯೆಯ ನೋಟಿಸನ್ನು […]

News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು ಗುರುವಾರ ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಆರೋಪದಲ್ಲಿ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದಿಂದ ಬಂಧಿಸಿದ್ದಾರೆ. ಆರೋಪಿ ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಎನ್‌. ಅಬೂಬಕ್ಕರ್ ರವರ ಹೆಸರಿನಲ್ಲಿರುವ ಜಮೀನಿನ RTCಯನ್ನು ತನ್ನ ಹೆಸರಿನ ಜಮೀನಿನ ದಾಖಲೆ ಎಂದು ತೋರಿಸಿ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ […]

News

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕುತ್ಲೂರು ಶಾಲೆಗೆ ಭೇಟಿ –  ವಿದ್ಯಾರ್ಥಿಗಳೊಂದಿಗೆ ಸಂವಾದ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುವುದು ಸರ್ಕಾರ ಮತ್ತು ಸಮಾಜದ ಕರ್ತವ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು. ಅವರು ನವಂಬರ್ 09ರಂದು ಶುಕ್ರವಾರ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪುಟ್ಟ ಮಕ್ಕಳೊಂದಿಗೆ ಸಂವಾದ ನಡೆಸಿ ಹಿತವಚನ ನೀಡಿದರು. ಶಾಲಾ ಆವರಣಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಪುಟಾಣಿ ಮಕ್ಕಳು ಸಾಂಪ್ರದಾಯಿಕವಾಗಿ ಆರತಿ ಬೆಳಗಿ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿದರು.      ಬಳಿಕ ಅವರು […]

News

ಮಂಗಳೂರು FTSC-II ನ್ಯಾಯಾಲಯದಿಂದ ಪೋಕ್ಸೊ ಪ್ರಕರಣದ ಆರೋಪಿ ಅಮೀರ್‌ಗೆ ಜಾಮೀನು ಮಂಜೂರು

ಪ್ರಖ್ಯಾತ ಹಿರಿಯ ನ್ಯಾಯವಾದಿ SS KHAZI ಯವರು ಮಂಡಿಸಿದ ವಾದ   ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿದ್ದ ಅಮೀರ್ ಗೆ ಇಂದು ನವಂಬರ್ 07ರಂದು ಮಂಗಳೂರು FTSC-II ಘನ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣವು ಅಪರಾಧ ವಿವಾದ ಸಂ. 1024/2025 (Crl. Misc. No. 1024/2025) ಆಗಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಮಂಗಳೂರು FTSC-II ಅವರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. […]

News

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ – ಹರೀಶ್ ಕುಮಾರ್

ಬೆಳ್ತಂಗಡಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಾಸಗಳು ಆದಾಗ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕ, ಕಂಬಗಳ ಬದಲಾವಣೆ ಕಾರ್ಯ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ ವಿದ್ಯುತ್ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು. ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನವಂಬರ್ 6ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೆಸ್ಕಾಂ ಅಧ್ಯಕ್ಷನಾಗುವ ಅವಕಾಶವನ್ನು ಸರಕಾರ ಕಲ್ಪಿಸಿಕೊಟ್ಟಿದೆ. ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಆಗಿದೆ. ಸುಮಾರು 1.25 ಲಕ್ಷ […]

News

ಮಂಗಳೂರು CCB ಪೊಲೀಸರ ಕಾರ್ಯಾಚರಣೆ – ಇಬ್ಬರ ಬಂಧನ

ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ನಿಷೇದಿತ ಮಾದಕ ವಸ್ತುವಾದ MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು CCB ಪೊಲೀಸರು ದಸ್ತಗಿರಿ ಮಾಡಿ ಅವರಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ನವಂಬರ್ 4ರಂದು ಮಂಗಳವಾರ ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು […]

News

ಮಹಮ್ಮದ್ ಶರೀಫ್ ರವರಿಗೆ ಕರ್ನಾಟಕ ರತ್ನಶ್ರೀ ಪ್ರಶಸ್ತಿ

ಸರ್ಕಾರಿ ಶಾಲೆಗಳಿಗೆ ಉಚಿತ ತರಕಾರಿ ನೀಡಿ ಮಾನವೀಯತೆ ಮೆರೆದ ಮೆಲ್ಕಾರಿನ ವ್ಯಾಪಾರಿ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಗಳನ್ನು ನೀಡಿ ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದತ್ತ ಅನನ್ಯ ಸೇವೆ ಸಲ್ಲಿಸುತ್ತಿರುವ ಮೆಲ್ಕಾರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ರವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ವಸಂತ ಲಕ್ಷ್ಮಿ ಫೌಂಡೇಶನ್, ಸಂಜಯನಗರ ಬೆಂಗಳೂರು ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದಾಶಿವನಗರದ ವೀರಶೈವ ಸಭಾಭವನದಲ್ಲಿ ಇದೇ ರವಿವಾರ ಬೆಳಗ್ಗೆ 11 ಗಂಟೆಗೆ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ […]

News

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ – ಧರ್ಮಸ್ಥಳದಲ್ಲಿ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಾವಿರಾರು ಮದ್ಯವರ್ಜಿತರ ಸಮಾವೇಶ

ಬರೆ ಬಾಯಿಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಗೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ ಗುರು ಶಾಂತೇಶ್ವರ ಸಂಸ್ಥಾನದ ಪೂಜ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅವರು ನವಂಬರ್ 06ರಂದು ಗುರುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 2000ನೇ ಮದ್ಯವರ್ಜನ  ಶಿಬಿರದ ಸಾವಿರಾರು  ಮದ್ಯವರ್ಜಿತರ ಸಮಾವೇಶದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಧರ್ಮಸ್ಥಳದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲವನ್ನೂ ಮಾತಿನಲ್ಲಿ ಹೇಳದೆ ಕೃತಿ ಮೂಲಕ, ಕಾಯಕದ […]

News

ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರ ಜೂಜಾಟ ದಾಳಿ — 10 ಮಂದಿಯ ಬಂಧನ

ನವೆಂಬರ್ 05ರಂದು ಶಿರಾಲಿಯ ತೆಗ್ಗಿನಗದ್ದೆ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಜೂಜಾಟ ನಡೆಸುತ್ತಿದ್ದವರ ಮೇಲೆ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯವರು ದಾಳಿ ನಡೆಸಿ, 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ದಳದ ದಾಳಿಯ ವೇಳೆ ಸ್ಥಳದಲ್ಲಿದ್ದ ಆರೋಪಿಗಳಿಂದ ರೂಪಾಯಿ 5,05,120 ಮೌಲ್ಯದ ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯನ್ನು ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ಲಿಂಗರೆಡ್ಡಿಯವರ ನೇತೃತ್ವದಲ್ಲಿ ನಡೆಸಲಾಗಿದ್ದು, ಕಾನೂನು ಬಾಹಿರ ಜೂಜಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತನಿಖೆ […]

You cannot copy content of this page