ಉಳ್ಳಾಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ನವಂಬರ್ 02ರಂದು ಭಾನುವಾರ ಚಾಲನೆ ನೀಡಿದ್ದಾರೆ. ಉಳ್ಳಾಲದ ಉಳ್ಳಾಲಬೈಲ್ ವೈದ್ಯನಾಥ ನಗರದ 1ನೇ ಅಡ್ಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಅದೇರೀತಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 18 ಲಕ್ಷ ರೂಪಾಯಿ ಅನುದಾನದಲ್ಲಿ ಉಳ್ಳಾಲದ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸೋಮೇಶ್ವರ ಬೀಚ್‌ಗೆ ಭೇಟಿ ನೀಡುವವರ ಉಪಯೋಗಕ್ಕಾಗಿ ನಿರ್ಮಾಣಗೊಳ್ಳಲಿರುವ ಶೌಚಾಲಯದ ಗುದ್ದಲಿ […]













