November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಲಿಕುಳ ನಿಸರ್ಗಧಾಮದಲ್ಲಿ ಲೋಕಾಯುಕ್ತರ ಅನಿರೀಕ್ಷಿತ ದಾಳಿ

ನಿರ್ವಹಣಾ ಲೋಪದೋಷಗಳ ಪತ್ತೆ – ತನಿಖೆ ಮುಂದುವರಿಕೆ ಮಾನಸ ವಾಟರ್ ಪಾರ್ಕ್, ಮೃಗಾಲಯ ಸೇರಿದಂತೆ ಇತರ ಕಡೆಗಳಲ್ಲಿ  ಅವ್ಯವಹಾರ ಕಂಡು ಬಂದಲ್ಲಿ ಕೂಡಲೆ ಲೋಕಾಯುಕ್ತಕ್ಕೆ ದೂರು ನೀಡಲು ಸೂಚನೆ ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಅಕ್ಟೋಬರ್ 16ರಂದು ಗುರುವಾರ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಚಾನಕ್‌ ಸರ್ಚ್ ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ರವಿ ಪೀರು ಪವಾರ್, […]

News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬಿ. ರಮಾನಾಥ ರೈಯವರು ಹೇಳಿದ್ದಾರೆ. ಅವರು ಇಂದು ಅಕ್ಟೋಬರ್ 16ರಂದು ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ದೇಶದ ಜಾತ್ಯತೀತ ಮೌಲ್ಯಗಳನ್ನು ಕಾಪಾಡಲು ಹಾಗೂ ಸಾಮಾಜಿಕ ಸಾಮರಸ್ಯವನ್ನು ಬಲಪಡಿಸಲು ಸಾರ್ವಜನಿಕ ಸ್ಥಳಗಳು ಮತ್ತು ಸರಕಾರಿ ಶಾಲೆಗಳಲ್ಲಿ RSS ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಶಾಖೆಗಳ ಮೂಲಕ ಸಣ್ಣ […]

News

ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್  ಸಮಾಜಕ್ಕೆ ನೆರವಾಗುತ್ತಿದೆ. ವಿಶ್ವದಾದ್ಯಂತ ರೆಡ್‌ಕ್ರಾಸ್ ಪಸರಿಸಿದ್ದು ಮಾನವೀಯ ಸೇವೆಯೇ ಸಂಸ್ಥೆಯ ಗುರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ರೆಡ್‌ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದರ್ಶನ್ ಎಚ್.ವಿ. ಹೇಳಿದರು. ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ […]

News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್ ಫಾರೂಕ್ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಬಂಟ್ವಾಳ ತಾಲೂಕಿನ ಮದ್ವ ಪ್ರದೇಶದಲ್ಲಿ ಅಕ್ಟೋಬರ್ 15ರಂದು ಬುಧವಾರ ಬಂಧಿಸಲ್ಪಟ್ಟ ಈತನನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ. ಈತನ ವಿರುದ್ಧ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ ಮತ್ತು ಬಜಪೆ ಪೊಲೀಸ್ […]

News

ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ಆಯುಕ್ತರ ನೇಮಕ

ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಡಾ. ಮಹೇಶ್ ವಾಲ್ವೇಕರ್ ಹಾಗೂ ವೆಂಕಟ್ ಸಿಂಗ್ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಖಾಲಿ ಇದ್ದ ಮೂವರು ಆಯುಕ್ತರ ಹುದ್ದೆಗಳನ್ನು ಅಕ್ಟೋಬರ್ 15ರಂದು ಬುಧವಾರ ಸರ್ಕಾರ ಭರ್ತಿ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಡಾ. ಮಹೇಶ್ ವಾಲ್ವೇಕರ್ ರವರನ್ನು ಬೆಂಗಳೂರು ಪೀಠಕ್ಕೆ ಮತ್ತು ವೆಂಕಟ್ ಸಿಂಗ್ ರವರನ್ನು  ಕಲಬುರಗಿ ಪೀಠಕ್ಕೆ ನೇಮಕಗೊಂಡು ನಿಯೋಜಿಸಲಾಗಿದೆ ಎಂದು ಸರ್ಕಾರದಿಂದ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಡಾ. ರಿಚರ್ಡ್ ವಿನ್ಸೆಂಟ್ […]

News

ಬಿಕರ್ನಕಟ್ಟೆಯಲ್ಲಿ ವೋಟ್‌ ಚೋರ್‌ ಗದ್ದಿ-ಚೋಡ್‌ ಸಹಿ ಸಂಗ್ರಹ  ಅಭಿಯಾನ – MLC ಐವನ್‌ ಡಿಸೋಜ

ವೋಟ್‌ ಚೋರ್‌ ಗದ್ದಿ-ಚೋಡ್‌ ಈ ಅಭಿಯಾನ ಇಂದು ಅಕ್ಟೋಬರ್ 15ರಂದು ಬುಧವಾರ ಬಿಕರ್ನಕಟ್ಟೆಯಲ್ಲಿ  ನಡೆಸಲಾಯಿತು. ಈ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ MLC ಐವನ್‌ ಡಿಸೋಜರವರು ಬಿಜೆಪಿ ಸರಕಾರ ಇಂದು ಅಧಿಕಾರಕ್ಕೆ ಬಂದು ಸುಳ್ಳು ಆಶ್ವಾಸನೆ ನೀಡಿ ಜನರ ಮನಸಿನಲ್ಲಿ ವಿಫಲವಾಗಿದ್ದು ಯಾವುದೇ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೇ ಜನರು ಅದನ್ನು ತೀವ್ರವಾಗಿ ತಿರಸ್ಕರಿಸುವ ಈ ಸಂದರ್ಭದಲ್ಲಿ ಕಡೆಯದಾಗಿ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸವನ್ನು ಮಾಡಲು ಪ್ರಾರಂಭಿಸಿದೆ. ಇದು ಮಹಾರಾಷ್ಟ ಹಾಗೂ ಬೇರೆ ರಾಜ್ಯಗಳಲ್ಲಿ ಮತಕಳ್ಳತನದ ಮೂಲಕ ಅಧಿಕಾಕ್ಕೆ […]

News

World Mental Health Day 2025 – Inaugural at Father Muller

The Father Muller Medical College, in collaboration with the District Legal Services Authority, Dakshina Kannada District Administration, Zilla Panchayath, District Mental Health Programme, District Health and Family Welfare Department and the Departments of Psychiatry and Mental Health Nursing, observed World Mental Health Day 2025 with a meaningful and thought-provoking inaugural ceremony on 15th October 2025. […]

News

ಉಡುಪಿಯ ಭ್ರಷ್ಟ RTO ಅಧಿಕಾರಿಯ ಮನೆಯಲ್ಲಿ ಕೋಟ್ಯಾಂತರ ರೂಪಾಯಿ, ನಗದು ಚಿನ್ನ, ಬೆಳ್ಳಿ ಪತ್ತೆ

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ. ನಾಯಕ್ ರವರ ಕಚೇರಿ, ಮನೆ, ಆಪ್ತರ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಅಕ್ಟೋಬರ್ 14ರಂದು ಮಂಗಳವಾರ ಬೆಳಗ್ಗಿನ ಜಾವ ಏಕಕಾಲದಲ್ಲಿ ಐದು ಕಡೆಯಲ್ಲಿ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಪಾಸ್ತಿಗಳನ್ನು ಹೊಂದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಸಂಗ್ರಹಿಸಿದ ಲೋಕಾಯುಕ್ತ ಪೊಲೀಸರು, ಈ ಸಂಬಂಧ ಆರ್‌ಟಿಓ ಲಕ್ಷ್ಮೀನಾರಾಯಣ ನಾಯಕ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮಂಗಳೂರು ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ […]

News

ಬೈಂದೂರು ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲು

ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲು ಎಂಬಲ್ಲಿ ಅಕ್ಟೋಬರ್ 14ರಂದು ಮಂಗಳವಾರ ಸಂಜೆ ನಡೆದಿದೆ. ಹೊಸಹಿತ್ಲು ಮಕ್ಕಿತಾರು ನಿವಾಸಿಗಳಾದ ಉದಯ ದೇವಾಡಿಗ ಎಂಬುವವರ ಪುತ್ರ 15 ವರ್ಷ ಪ್ರಾಯದ ಆಶಿಶ್ ದೇವಾಡಿಗ, ಮಾರುತಿ ಪೂಜಾರಿ ಅವರ ಪುತ್ರ 16 ವರ್ಷ ಪ್ರಾಯದ ಸೂರಜ್ ಪೂಜಾರಿ, ಸುಧಾಕರ ದೇವಾಡಿಗ ಅವರ ಪುತ್ರ 18 ವರ್ಷ ಪ್ರಾಯದ ಸಂಕೇತ್ ದೇವಾಡಿಗ ಮೃತ ದುರ್ದೈವಿಗಳು. ಇನ್ನೋರ್ವ […]

News

ಪುತ್ತೂರು ತಾಲೂಕಿನಲ್ಲಿ ಎರಡು ಗ್ರಾಮ ಪಂಚಾಯತಿಗಳಿಗೆ MLC ಕಿಶೋರ್ ಕುಮಾರ್ ಪುತ್ತೂರುರವರು ಭೇಟಿ

ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಮತ್ತು ಸಾರ್ವಜನಿಕರಿಂದ ಮನವಿ ಸ್ವೀಕಾರ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಮತ್ತು ಬನ್ನೂರು ಗ್ರಾಮ ಪಂಚಾಯತಿಗಳಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ಚುನಾಯಿತ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರುರವರು ಭೇಟಿ ನೀಡಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಕುರಿತು ಪರಿಶೀಲನೆ ನಡೆಸಿದರು. ಬಜತ್ತೂರು ಗ್ರಾಮ ಪಂಚಾಯತ್ ಭೇಟಿ […]

You cannot copy content of this page