November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

Five Brothers Ordained Deacons for the Diocese of Mangalore

Bishop Peter Paul Saldanha Calls Them to Serve with Love and Humility A spirit of faith and joy filled the Chapel of Saint Joseph Interdiocesan Seminary, Jeppu, on Tuesday, October 14, as five brothers were ordained to the Sacred Order of Deacons for the Diocese of Mangalore. The solemn Eucharistic celebration began at 3:30 p.m., […]

News

ಶಾಸಕ ಅಶೋಕ್ ರೈ ಮತ್ತು ಸಿಎಂ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಕಮೆಂಟ್ — ಕ್ಷಮೆ ಕೇಳಿದ ಉದ್ಯಮಿ ವಸಂತ ಭಟ್

ಕ್ಷಮೆ ನೀಡಿದ ಮಾನವೀಯ ಶಾಸಕ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬಗ್ಗೆ ಅವಹೇಳನಕಾರಿ ಕಮೆಂಟ್‌ ಹಾಕಿದ ಪ್ರಕರಣದಲ್ಲಿ ಪುತ್ತೂರು ನೆಹರೂ ನಗರ ನಿವಾಸಿ ಹಾಗೂ ಪುತ್ತೂರು ಕನ್‌ಸ್ಟ್ರಕ್ಷನ್ ಮಾಲಕ ಉದ್ಯಮಿ ವಸಂತ ಭಟ್ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ ಘಟನೆ ನಡೆದಿದೆ. ಈ ಸಂಬಂಧ ಪುತ್ತೂರು ಬ್ಲಾಕ್ ಸೋಶಿಯಲ್ ಮೀಡಿಯಾ ಘಟಕದ ಅಧ್ಯಕ್ಷ ಸುಪ್ರಿತ್ ಕಣ್ಣಾರಾಯರವರು ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ಪೊಲೀಸರು ಆರೋಪಿಯ ಬಂಧನಕ್ಕಾಗಿ ತೊಡಗಿದ್ದರು. […]

News

ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಾಟ – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು CISF ಜವಾನರು ಸೋಮವಾರ ವಶಕ್ಕೆ ಪಡೆದು‌ ಬಜ್ಪೆ‌ ಪೊಲೀಸರಿಗೆ ಒಪ್ಪಿಸಿದ್ದಾರೆ‌.‌ ಬಂಧಿತನಾದ ವ್ಯಕ್ತಿ ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅಕ್ಟೋಬರ್ 13ರಂದು ಸೋಮವಾರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ‌ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಬಂದ ಹಿನ್ನೆಲೆ ವಿಮಾನ‌ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ‌ ನಿಲ್ದಾಣದ ಭದ್ರತಾ ಸಿಬ್ಬಂದಿ‌ CISF ಸಿಬ್ಬಂದಿಗೆ ಮಾಹಿತಿ ನೀಡಿದ್ದರು.‌ […]

News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಹಾಗೂ ಮತದಾರರ ಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ) ಅಕ್ಟೋಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅಕ್ಟೋಬರ್ 28 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವಂಬರ್ 9ರಂದು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ […]

News

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ರ 48 ವರ್ಷ ಪ್ರಾಯದ ಸುದೀಪ್ ಭಂಡಾರಿಯವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಅಕ್ಟೋಬರ್ 13ರಂದು ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ರೈಲು ಹಳಿಯ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದೀಪ್ ಭಂಡಾರಿಯವರು ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು. ಅತ್ಯಂತ ಸರಳ ಹಾಗೂ ಎಲ್ಲರಿಗೂ ಹತ್ತಿರವಾಗಿದ್ದ ಸುದೀಪ್ ರವರ ಆಕಸ್ಮಿಕ ಸಾವಿನ ಸುದ್ದಿ ಕೇಳಿ ಹೆಬ್ರಿ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು […]

News

ಭಟ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸ್ವಯಂಪ್ರೇರಿತವಾಗಿ ಸಂಗ್ರಹಿಸಿದ ದೇಣಿಗೆಯ ಸಹಾಯದಿಂದ ಸಿಸಿಟಿವಿ ಅಳವಡಿಕೆ

ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್ ಲಿಂಗಾರೆಡ್ಡಿಯವರ ಸ್ಫೂರ್ತಿದಾಯಕ ಮುಂದಾಳತ್ವ “ಭದ್ರ ಭಟ್ಕಳ” ಕನಸನ್ನು ಸಾಕಾರಗೊಳಿಸುವತ್ತ ಪ್ರಮುಖ ಹೆಜ್ಜೆ ಸರ್ಕಾರಿ ಅನುದಾನವಿಲ್ಲದೆ ಕೇವಲ ಸಾರ್ವಜನಿಕರ ಸಹಕಾರದಿಂದಲೇ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಾಳೆ ಗ್ರಾಮದ ಪ್ರಮುಖ ಸ್ಥಳಗಳಲ್ಲಿ 3 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವ ಕಾರ್ಯವನ್ನು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಲಿಂಗಾರೆಡ್ಡಿಯವರು ಯಶಸ್ವಿಯಾಗಿ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಇಲಾಖೆಯಿಂದ ಯಾವುದೇ ನಿಧಿ ವಿನಿಯೋಗವಾಗದಿದ್ದರೂ, ಜನಸಾಮಾನ್ಯರು ಹಾಗೂ ವ್ಯಾಪಾರಸ್ಥರಿಂದ ಸ್ವಯಂಪ್ರೇರಿತವಾಗಿ ಸಂಗ್ರಹಿಸಿದ ದೇಣಿಗೆಯ ಸಹಾಯದಿಂದ ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಸಮುದಾಯದ […]

News

ನಾನೂ ಕೂಡ ಗಣವೇಶ ಹಾಕಿ ಪಥ ಸಂಚಲನದಲ್ಲಿ ಭಾಗವಹಿಸಿದ್ದೇನೆ. ಮುಂದೆಯೂ ಭಾಗವಹಿಸುತ್ತೇನೆ

ತಾಕತ್ತಿದ್ದವರು ತಡೆಯಿರಿ. ಶಾಸಕ ವೇದವ್ಯಾಸ ಕಾಮತ್  ಬಹಿರಂಗ ಸವಾಲು. ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸುತ್ತಿರುವ ಪ್ರಿಯಾಂಕ್ ಖರ್ಗೆ, ಬಿ.ಕೆ. ಹರಿಪ್ರಸಾದ್ ರಂತಹ ಕಾಂಗ್ರೆಸ್ ನಾಯಕರು, ಕೇವಲ ಮುಸ್ಲಿಮರ ಓಲೈಕೆ ಹಾಗೂ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ತಮ್ಮ ಸ್ಥಾನದ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಪ್ರಿಯಾಂಕ್ ಖರ್ಗೆಯವರಿಗೆ ತಂದೆಯ ಹೆಸರಿನಿಂದ ಮಂತ್ರಿ ಸ್ಥಾನ ಲಭಿಸಿದೆಯೇ ಹೊರತು ಸ್ವಸಾಮರ್ಥ್ಯದಿಂದಲ್ಲ. ಸಂಘದ ಚಟುವಟಿಕೆಗಳೇನು? ಹಣ ಎಲ್ಲಿಂದ ಬರುತ್ತದೆ? ಎಂದೆಲ್ಲಾ ಕೇಳುವ ಅವರು […]

News

ಹೆಣ್ಣು ನೋಡೋ ನೆಪದಲ್ಲಿ 44.80 ಲಕ್ಷ ವಂಚನೆ – ವಿಟ್ಲ ಪೊಲೀಸರಿಂದ ಪ್ರಕರಣ ದಾಖಲು

ಕೇರಳದ ತಾವರಕಡನ್ ಮೂಲದ 53ವರ್ಷ ಪ್ರಾಯದ ಮಹಮ್ಮದ್ ಅಶ್ರಫ್ ಎಂಬವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆ ಸಲುವಾಗಿ ಮಂಗಳೂರಿಗೆ ಬಂದಿದ್ದ ಅವರು ಬಶೀರ್, ಸಫಿಯಾ ಹಾಗೂ ಇತರ ಆರೋಪಿತರ ಬಲೆಗೆ ಸಿಕ್ಕಿದ್ದಾರೆ. ಪಿರ್ಯಾದಿದಾರರ ದೂರಿನಂತೆ, ಆರೋಪಿತರು “ಹೆಣ್ಣು ನೋಡೋ ನೆಪದಲ್ಲಿ” ಅಶ್ರಫ್ ರವರ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಒಟ್ಟು ₹44.80 ಲಕ್ಷ ಹಣ ವಂಚಿಸಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 145/2025, ಕಲಂ […]

News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ – 666ನೇ “ವಾತ್ಸಲ್ಯ ಮನೆ” ಹಸ್ತಾಂತರ

ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು – ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ ಎಂದು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಅವರು ಅಕ್ಟೋಬರ್ 12ರಂದು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 666ನೇ “ವಾತ್ಸಲ್ಯ ಮನೆ” ಹಸ್ತಾಂತರ ಮಾಡಿ […]

You cannot copy content of this page