‘ಪೊಲೀಸ್–ATS’ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಬೆದರಿಕೆ – ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ATS ಅಧಿಕಾರಿಗಳೆಂದು ಪರಿಚಯಿಸಿಕೊಂಡು ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹1,31,50,000 ಹಣ ವಂಚಿಸಿರುವ ಘಟನೆ ನಡೆದಿದೆ. ಆರೋಪಿಗಳು ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ದೂರುದಾರರ ಮೇಲೆ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿದ್ದಾರೆ ಎನ್ನಲಾಗಿದೆ. ಬಳಿಕ WhatsApp ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಹಾಗೂ ಹಣದ ದೃಢೀಕರಣದ ನೆಪದಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ RTGS […]













