ಪರಿಶ್ರಮ ಮತ್ತು ಆಸಕ್ತಿಯಿಂದ ರಾಷ್ಟ್ರಮಟ್ಟ ತಲುಪಿದ ಪುತ್ತೂರಿನ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು
ರಾಷ್ಟ್ರ ವೇದಿಕೆಗೆ ಹೆಜ್ಜೆ ಇಟ್ಟ ಕಿಶೋರ ಪ್ರತಿಭೆಗಳಾದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್‌ನಲ್ಲಿ ಏರ್ಪಡಿಸಿದ್ದ ರೋನಲ್ ಹಂತದ ಗಣಿತ-ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ಗಿರೀಶ ಗೌಡ ಹಾಗೂ ಸುಮಿತ್ರಾ ದಂಪತಿಗಳ ಪುತ್ರ 9ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ. ಪ್ರಥಮ ಸ್ಥಾನವನ್ನು ಗಳಿಸಿದ್ದಾನೆ. […]













