ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2024-25 ನೇ ಸಾಲಿನಲ್ಲಿ 40.06 ಲಕ್ಷ ಲಾಭದತ್ತ – ಅರುಣ್ ರೋಶನ್ ಡಿಸೋಜ
ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ 2025 ಮೇ 27 ರವರೆಗಿನ ಆಡಳಿತಾವಧಿಯಲ್ಲಿ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಾದ ರಾಜಕೀಯ ಸ್ಥಿತ್ಯಂತರದ ಬಳಿಕ ರಾಜಕೀಯ ಒತ್ತಡಕ್ಕೆ ಮಣಿದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ನಿಬಂಧಕರು ನಮ್ಮ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿದ್ದಾರೆ ಎಂದು ಬ್ಯಾಂಕ್ ನ ಅಧ್ಯಕ್ಷ ಅರುಣ್ ರೋಶನ್ ಡಿಸೋಜ ತಿಳಿಸಿದ್ದಾರೆ. ಸೆಪ್ಟೆಂಬರ್ 18ರಂದು ಗುರುವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು […]













