ಎನ್.ಎಸ್.ಯು.ಐ. ವತಿಯಿಂದ “ನಮ್ಮೂರ ಹೆಮ್ಮೆ” ಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಇದರ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ “ನಮ್ಮೂರ ಹೆಮ್ಮೆ” ಕಾರ್ಯಕ್ರಮವು ಬಿ.ಸಿ. ರೋಡಿನ ಅಂಬೆಡ್ಕರ್ ಭವನದಲ್ಲಿ ಜುಲಾಯಿ 27ರಂದು ಭಾನುವಾರ ಸಂಜೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದೇಶದ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ವಿವಿಧತೆಯಲ್ಲಿ ಏಕತೆಯನ್ನು […]













