November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಒಡಹುಟ್ಟಿದವನಿಗೆ ವಿಶ್ವಾಸದ್ರೋಹಗೈದ ಆರೋಪಿ ಬೆನೆಡಿಕ್ಟ್ ಲಸ್ರಾದೊ ಮತ್ತು ಸಹೋದರನಿಗೆ ಷರತ್ತು ಬದ್ದ ಜಾಮೀನು

FIR ಆದ 27 ದಿವಸಗಳ ಬಳಿಕ ಜಾಮೀನು ಮಂಜೂರು ಮಾಡಿದ ಜಿಲ್ಲಾ ಸತ್ರ ನ್ಯಾಯಾಲಯ ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪುರುಷಕೋಡಿ ನಿವಾಸಿ ವಲೇರಿಯನ್ ಲಸ್ರಾದೊ ಇವರ ಆಸ್ತಿ ಕಬಳಿಕೆ ಉದ್ದೇಶವನ್ನಿಟ್ಟುಕೊಂಡು, ವೀಲುನಾಮೆ ಯಾನೆ ಮರಣ ಶಾಸನ ದಾಖಲೆಯನ್ನು ಸೃಷ್ಟಿಸಿ ವಂಚನೆ, ವಿಶ್ವಾಸದ್ರೋಹ, ಪ್ರಾಣ ಬೆದರಿಕೆ ಹಾಗೂ ಸುಲಿಗೆ ಮಾಡಿದ್ದಾರೆ ಎನ್ನಲಾದ ಅವರ ಅಣ್ಣಂದಿರಾದ 61 ವರ್ಷ ಪ್ರಾಯದ ಬೆನೆಡಿಕ್ಟ್ ಲಸ್ರಾದೊ ಮತ್ತು 63 ವರ್ಷ ಪ್ರಾಯದ ಫ್ರೆಡ್ರಿಕ್ ಲಸ್ರಾದೊ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯವು FIR […]

News

ಮದುವೆಯಾಗಲು ನಿರಾಕರಿಸಿ ವಂಚನೆ – ಆರೋಪಿ ಕೃಷ್ಣ ಜೆ. ರಾವ್ ಬಂಧನ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿ 21 ವರ್ಷ ಪ್ರಾಯದ ಕೃಷ್ಣ ಜೆ. ರಾವ್ ಇವನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ದ ಪ್ರಕರಣ ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಜೂನ್ 24ರಂದು ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:49/2025, ಕಲಂ:64(1), 69 ಬಿ.ಎನ್.ಎಸ್‌. 2023 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ […]

News

ರಾಷ್ಟ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್ ಮುಂಡಾಡಿ ಯವರಿಗೆ ಪಿತೃ ವಿಯೋಗ

ಶ್ರೀ ರಾಜಾರಾಮ ಶೆಟ್ಟಿ, ಮುಂಡಾಡಿ ಗುತ್ತು ಇವರು ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದು ಶ್ರೀಯುತರು ಉತ್ತಮ ಕೃಷಿಕರಾಗಿದ್ದು, ಜನಾನುರಾಗಿಯಾಗಿದ್ದರು. ಇವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿಯವರನ್ನು ಅಗಲಿದ್ದು ಅಂತ್ಯಕ್ರಿಯೆಯಲ್ಲಿ ಹಲವಾರು ಬಂದು ಭಾಂದವರು ಭಾಗವಹಿಸಿದ್ದರು.

News

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲೆಯ ನೂತನವಾಗಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ “ಡಿ” ವರ್ಗ ಸರ್ಕಾರಿ ನೌಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ   ಜಿಲ್ಲಾಧ್ಯಕ್ಷ ಪ್ರವೀಣ್ ಎಸ್., ಪ್ರಧಾನ ಕಾರ್ಯದರ್ಶಿ ನಾಗೇಶ್, ಮುಖ್ಯ ಸಲಹೆಗಾರ ಫ್ರ್ಯಾಂಕಿ ಫ್ರಾನ್ಸಿಸ್ ಕುಟಿನ್ಹಾ, ಕ್ರೀಡಾ ಕಾರ್ಯದರ್ಶಿ  ಲೋಕೇಶ್, ಶಾಂತಾ, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

News

ತಲೆ ಮೆರೆಸಿಕೊಂಡ ದನ ಕಳ್ಳನಿಂದ ಮಾದಕ ವಸ್ತು ಮಾರಾಟ – ಸಿಸಿಬಿ ಪೊಲೀಸರ ಬಲೆಗೆ

ಬೆಂಗಳೂರು/ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ತರಿಸಿಕೊಂಡು ಮುಡಿಪು ಕಂಬಳ ಪದವು ರಸ್ತೆಯಲ್ಲಿ ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳ ಅಬ್ದುಲ್ ಕಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು, ನ್ಯಾಯಾಲಯಕ್ಕೆ ಹಾಜರಾಗದೆ, ಕಳೆದ ಎರಡು ವರ್ಷಗಳಿಂದ ತಲೆಮೆರೆಸಿಕೊಂಡು ಓಡಾಡುತ್ತಿರುವ ಅಬ್ದುಲ್ ಕಬೀರ್ ನನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ಹಿಡಿದಿದ್ದಾರೆ. ಆತನ ವಶದಿಂದ ರೂಪಾಯಿ 1,20,000/- ಮೌಲ್ಯದ 12.05 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ […]

News

ಮಡಂತ್ಯಾರ್‌ನಲ್ಲಿ ಪೊಯೆಟಿಕಾ ಕವಿಗೋಷ್ಠಿ 40 ಮತ್ತು ಸಾಂಸ್ಕೃತಿಕ ಸಂಜೆ

ಕೊಂಕಣಿ ಭಾಷೆಯ ಸಾಂಸ್ಕೃತಿಕ ವೈಭವವನ್ನು ಸಾರುವ ಕಾರ್ಯಕ್ರಮವಾದ 40ನೇ ಪೊಯೆಟಿಕಾ ಕವಿಗೋಷ್ಠಿಯು ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ.) ಮಡಂತ್ಯಾರ್ ಘಟಕ, ರಂಗ್ ತರಂಗ್ ಮಡಂತ್ಯಾರ್ ಮತ್ತು ಪೊಯೆಟಿಕಾ ಸಹಯೋಗದಲ್ಲಿ   ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಮಡಂತ್ಯಾರ್ ಚರ್ಚ್ ನ ಧರ್ಮಗುರುಗಳಾದ ವಂದನೀಯ ಫಾದರ್ ಡಾ. ಸ್ಟ್ಯಾನಿ ಗೋವಿಯಸ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವವನ್ನು ವಿಸ್ತೃತವಾಗಿ ವಿವರಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸಹಾಯಕ ಧರ್ಮಗುರು ಫಾದರ್ ಲ್ಯಾರಿ […]

News

ಕೋಮು ಗಲಭೆಗಳ ಸಂದರ್ಭಗಳಲ್ಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸಲು ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತರಬೇತಿ

ಸಾಮಾಜಿಕ ಜಾಲತಾಣಗಳಲ್ಲಿ ತಾಂತ್ರಿಕ ನಿಗಾವಹಿಸುವ ಕುರಿತು ವಿಶೇಷ ತರಬೇತಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಉತ್ತಮ ಕಾರ್ಯಕ್ಷಮತೆಗಾಗಿ ಕೋಮು ಗಲಭೆಗಳ ಸಂಧರ್ಭಗಳಲಿ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ, ಜೂನ್ 02ರಂದು ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು ಎಂದು […]

News

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್  ಸೇವನೆ ವಿರುದ್ಧ ಸಹಾಯಕ ಆಯುಕ್ತ ಹರ್ಷವರ್ಧನ್ ಕಾರ್ಯಾಚರಣೆಗೆ ಸೂಚನೆ

ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜೂನ್ 2ರಂದು ಮಂಗಳವಾರ ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ  ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ.ಸಿ. ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಸೇವನೆ ನಿಯಂತ್ರಿಸಲು ಆರೋಗ್ಯ […]

News

ಪುತ್ತೂರಿನಲ್ಲಿ ವೇಶ್ಯಾವಾಟಿಕೆ – ಆರೋಪಿಗಳಿಬ್ಬರು ವಶಕ್ಕೆ

ಪುತ್ತೂರಿನ ಸಾಮೆತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ಬಂದಿತ್ತು. ಕೂಡಲೇ ಪೊಲೀಸ್ ನಿರೀಕ್ಷಕರು, ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅವರಿಗೆ ಜುಲೈ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿ ವಿಲ್ಫೆಡ್ ಎಂಬಾತನು ತಾನು ವಾಸ್ತವ್ಯವಿದ್ದ ಮನೆಯ ಸಮೀಪದ ಕಟ್ಟಡದಲ್ಲಿ, ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಘಟನೆಯ ಬಗ್ಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆ ಅ.ಕ್ರ […]

News

ಅಕ್ರಮ ಮಧ್ಯ ಸಾಗಾಟ ಪ್ರಕರಣ ಆರೋಪಿ ಪ್ರತಾಪ್ ಶೆಟ್ಟಿ ಖುಲಾಸೆ

2023 ರ ಮಾರ್ಚ್ 15ರಂದು ರಾತ್ರಿ 12:15 ಗಂಟೆಗೆ ಗ್ರಾಮದ ಕಡಂಬು ಎಂಬಲ್ಲಿ ಆರೋಪಿ ಪ್ರತಾಪ್ ಶೆಟ್ಟಿ ಯಾವುದೇ ದಾಖಲಾತಿಗಳಿಲ್ಲದೆ ಸ್ವಿಫ್ಟ್ ಕಾರ್ ನಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮಧ್ಯದ ಸ್ಯಾಚೆಟ್ ಮತ್ತು ಪ್ಲಾಸ್ಟಿಕ್ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದುದ್ದನ್ನು ಉಪ್ಪಿನಂಗಡಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪಿ.ಎಸ್.ಐ.ರವರು ತಮ್ಮ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ ಆರೋಪಿ ವಶದಲ್ಲಿದ್ದ ಒಟ್ಟು 106.83 0 ಲೀಟರ್ ಮಧ್ಯವನ್ನು ವಾಹನ ಸಮೇತ ವಶಪಡಿಸಿಕೊಂಡು ಕರ್ನಾಟಕ ಅಬಕಾರಿ ಕಾಯ್ದೆ ಕಾಲಂ 32,34,43 […]

You cannot copy content of this page