November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MCC ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (MCC) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂನ್ 14ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ವಲೇರಿಯನ್ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ಫಾದರ್ ವಲೇರಿಯ ಡಿಸೋಜ […]

News

Thousands Gather at Saint Anthony’s Basilica Dornahalli Mysuru for the Grand Feast Celebrations 2025

The annual feast of Saint Anthony was celebrated with great devotion and joy at the historic St Anthony’s Minor Basilica in Dornahalli, Mysuru, Diocese Of Maysore on June 13, 2025. The sacred event drew thousands of pilgrims from across Karnataka and neighboring states, all united in faith and prayer to seek the blessings of the […]

News

ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಕೆವಿಎಎಫ್‌ಎಸ್‌ಯು ಆಡಳಿತ ಮಂಡಳಿಗೆ ನಾಮನಿರ್ದೇಶನ

ಮಂಗಳೂರಿನ ರೈಸನ್ ನ್ಯೂಟ್ರಿಷನ್‌ ಸಂಸ್ಥೆಯ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಕರ್ನಾಟಕ ಸರ್ಕಾರವು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ (ಕೆವಿಎಎಫ್‌ಎಸ್‌ಯು) ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಅವರ ಅಧಿಕಾರಾವಧಿ ಮುಂದಿನ ಮೂರು ವರ್ಷಗಳವರೆಗೆ ಇರುತ್ತದೆ. ಡಾ. ಸುಶಾಂತ್‌ ರೈ ಅವರು ಪಶುವೈದ್ಯಕೀಯ ಮತ್ತು ಕಕ್ಕುಟೋದ್ಯಮದಲ್ಲಿ ಗುರುತಿಸಲ್ಪಟ್ಟ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರು ಈ ಹಿಂದೆ 2019 ರಿಂದ 2024 ರವರೆಗೆ ಕರ್ನಾಟಕ ಕೋಳಿ ಸಾಕಣೆದಾರರ ಮತ್ತು […]

News

ಅಜಾಗರೂಕ ಬೈಕ್ ಸವಾರರ ಮೇಲೆ ಸಂಚಾರಿ ಪೊಲೀಸರ ಕ್ರಮ – ವಾಹನಗಳ ವಶ

ಮಂಗಳೂರು ನಗರದಲ್ಲಿ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗಳ ವಿರುದ್ಧ ಸಂಚಾರಿ ಪೊಲೀಸರು ಕ್ರಮ ಕೈಗೊಂಡು ಬೈಕ್ ವಶಪಡಿಸಿಕೊಂಡಿದ್ದಾರೆ. ತನ್ನ ಸ್ವಂತ ಜೀವಕ್ಕೆ ಮಾತ್ರವಲ್ಲದೆ ಇತರ ರಸ್ತೆ ಬಳಕೆದಾರರಿಗೂ ಅಪಾಯವನ್ನುಂಟು ಮಾಡುವ ರೀತಿಯಲ್ಲಿ, ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಜೂನ್ 12ರಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂತು. ಬೈಕ್ ಒಂದರ ಹಿಂದೆ ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೆರೆಹಿಡಿದಿರುವ ವಿಡಿಯೋದಲ್ಲಿ, ಹೆಲ್ಮೆಟ್ ಧರಿಸದೆ ಇಬ್ಬರನ್ನು ಹಿಂಬದಿ ಕೂರಿಸಿ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಆ ದ್ರಶ್ಶಾವಳಿಯಲ್ಲಿ ಇತ್ತು. ಕೆಲವು […]

News

ಅಹಮದಾಬಾದ್ ವಿಮಾನ ದುರಂತ – ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ ಕಂಬನಿ

ಅಹಮದಾಬಾದಿನಲ್ಲಿ ನಿನ್ನೆ ಜೂನ್ 12ರಂದು ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಸಂಘಟನೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. “ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಅವರ ಕುಟುಂಬಗಳು ತಮ್ಮ ಪ್ರೀತಿ ಪಾತ್ರರ ಬೆಂಬಲದಿಂದ ಸಾಂತ್ವನ ಪಡೆಯಲಿ. ಈ ದುರದೃಷ್ಟಕರ ಘಟನೆಯಿಂದ ಬಾಧಿತರಾದ ಎಲ್ಲರೊಂದಿಗೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಪೀಡಿತ ಕುಟುಂಬಗಳೊಂದಿಗೆ ಇವೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ” ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) […]

News

ಕರ್ತವ್ಯ ಲೋಪ ಆರೋಪ – ಇಬ್ಬರು ‘ಪಿಡಿಒ’ ಗಳು ಸಸ್ಪೆಂಡ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿಯಲ್ಲಿ ಸರ್ಕಾರಿ ಬೊಕ್ಕಸಕ್ಕೆ ನಷ್ಟ, ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪಿಡಿಒಗಳನ್ನು ಅಮನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ನಡೆದಿದೆ. ಚಿಂಚೋಡಿ ಗ್ರಾಮ ಪಂಚಾಯತ್ ಪಿಡಿಓ ಶಿವರಾಜ್ ಹಾಗೂ ಲಿಂಗಸಗೂರಿನ ಕೋಠಾ ಗ್ರಾಮ ಪಂಚಾಯತ್ ಪಿಡಿಓ ಗಂಗಮ್ಮ ಅಮಾನತುಗೊಂಡವರು. ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ಪಿಡಿಓ ವಿರುದ್ಧ 15ನೇ ಹಣಕಾಸು ಯೋಜನೆಯಲ್ಲಿ 26,71,303 ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕಾಮಗಾರಿಗಳ ಬಿಲ್ ಹಾಗೂ ಸಾಮಗ್ರಿಗಳ […]

News

ಅಂತರರಾಷ್ಟ್ರೀಯ ‘ಗ್ರೀನ್ ಆಸ್ಕರ್’ ಸೆಲ್ಕೋ ಮಡಿಲಿಗೆ

ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್‌ಗೆ ಆಶೆನ್ ಪ್ರಶಸ್ತಿ – 2025 ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 2025ನೇ ಸಾಲಿನ ಪ್ರತಿಷ್ಠಿತ ಆಸ್ಟೆನ್ ಪ್ರಶಸ್ತಿಯ ಗೌರವ ಸಂದಿದೆ. ಗ್ರೀನ್ ಆಸ್ಕರ್ ಎಂಬ ಹೆಗ್ಗಳಿಕೆ ಹೊಂದಿರುವ ಈ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಮೂರನೇ ಬಾರಿ ಮುಡಿಗೇರಿಸಿಕೊಂಡ ಗೌರವ ಸೆಸ್ಕೋ ಸಂಸ್ಥೆಗೆ ಸಲ್ಲುತ್ತಿದೆ. ಇದು 25ನೇ ಆಶೆನ್ ಪ್ರಶಸ್ತಿಯಾಗಿದ್ದು, ಜೂನ್ 11 ರಂದು ಲಂಡನ್‌ನ ರಾಯಲ್ […]

News

ಅಹ್ಮದಾಬಾದ್ ವಿಮಾನ ದುರಂತಕ್ಕೆ ಮಂಗಳೂರು ಬಿಷಪ್ ರಿಂದ ಸಂತಾಪ

ಗುಜರಾತಿನ ಅಹ್ಮದಾಬಾದ್ ನಲ್ಲಿ ಇಂದು ಜೂನ್ 12ರಂದು ಗುರುವಾರ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾರವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

News

ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

242 ಪ್ರಯಾಣಿಕರನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಇಂದು ಜೂನ್ 12ರಂದು ಗುರುವಾರ ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದ್ದು, ದೊಡ್ಡ ಪ್ರಮಾಣದ ರಕ್ಷಣಾ ಕಾರ್ಯಾಚರಣೆ ಮತ್ತು ಪ್ರದೇಶದಲ್ಲಿ ವ್ಯಾಪಕ ಭೀತಿಯನ್ನು ಉಂಟುಮಾಡಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತುರ್ತು ಪರಿಸ್ಥಿತಿಯನ್ನು ಎದುರಿಸಿತು ಮತ್ತು ವಸತಿ ಪ್ರದೇಶದಲ್ಲಿ ಪತನಗೊಂಡಿತು, ಇದರಿಂದಾಗಿ ಸ್ಥಳೀಯ ನಿವಾಸಿಗಳು ತಕ್ಷಣ ಪ್ರತಿಕ್ರಿಯಿಸಿದರು, ತುರ್ತು ಸೇವೆಗಳು ಬರುವ […]

News

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ನಝೀರ್

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿರುವ ನೂರ್ ಜಹಾನ್ ಖಾನಂ ಅವರನ್ನು ವರ್ಗಾವಣೆ ಮಾಡಿರುವ ನಗರಾಭಿವೃದ್ಧಿ ಇಲಾಖೆ, ಅವರ ಸ್ಥಾನಕ್ಕೆ ಆರ್ಥಿಕ್ ಅಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿರುವ ಮೊಹಮ್ಮದ್ ನಝೀರ್ ರವರನ್ನು ನಿಯೋಜಿಸಿದೆ. ಮೊಹಮ್ಮದ್ ನಝೀರ್ ರವರು ಈ ಹಿಂದೆಯೂ ಮುಡಾ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾಗಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಅವರು ಈ ಹಿಂದೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದರು.

You cannot copy content of this page