ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಸಂಚಾರ ತಾತ್ಕಾಲಿಕ ಬಂದ್ – ತಹಶೀಲ್ದಾರ್ ಅರ್ಚನಾ ಭಟ್ ಆದೇಶ
ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಎಂದು ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಕಟ್ಟುನಿಟ್ಟಾಗಿ ಪಾಲಿಸಲು ಸೂಕ್ತ ಕ್ರಮವಹಿಸುವುದು ಎಂದು ಅದೇಶದಲ್ಲಿ ಉಲ್ಲೇಖಿಸಲಾಗಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದಲ್ಲಿರುವ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಳೆಯ ಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು. ಸೇತುವೆಯಲ್ಲಿ ಈ ಹಿಂದೆ ಬಿರುಕು ಬಂದ ಹಿನ್ನಲೆಯಲ್ಲಿ ಸೇತುವೆಯ ಮೇಲೆ ಘನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಕಬ್ಬಿಣದ ಕಮಾನು ಅಳವಡಿಸಿ ಬಂದ್ ಮಾಡಲಾಗಿದ್ದು ಪ್ರಸ್ತುತ ಕಬ್ಬಿಣದ ಕಮಾನನ್ನು […]













