ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಸವರಾಜು ಅವರಿಗೆ ಮಂಗಳೂರು ವಕೀಲರ ಸಂಘದಿಂದ ಆತ್ಮೀಯ ಬೀಳ್ಕೊಡುಗೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜು ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಕೀಲರ ಸಂಘದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರು ಬಾರ್ ಅಸೋಸಿಯೇಷನ್‌ನ ಕಾನ್ಫರೆನ್ಸ್ ಹಾಲ್‌ನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಕೆ. ಶೇನವ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಅಶೋಕ್ ಅರಿಗ, ಪ್ರಧಾನ ಜಿಲ್ಲಾ ಸರ್ಕಾರಿ ವಕೀಲ ಎಂ.ಪಿ. ನೊರೊನ್ಹಾ, ಪ್ರಧಾನ ಕಾರ್ಯದರ್ಶಿ ಗೌತಮ್ ಬಿ.ಪಿ., ಕೋಶಾಧಿಕಾರಿ […]













