ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿ
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬತನ ಕೊಲೆ ನಡೆದಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಆದುದರಿಂದ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಾಹಿತೆ 2023ರ ಕಲಂ 163ರಡಿ ಮೇ 27ರಿಂದ ಸಾಯಂಕಾಲ 6ರಿಂದ ಮೇ 30ರ ಸಾಯಂಕಾಲ 6:00 ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಪರ […]













