November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿ.ಸಿ. ರೋಡ್ ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಪೊಲೀಸ್ ಪಥಸಂಚಲನ; 8 ಪೊಲೀಸ್ ನಿರೀಕ್ಷಕರು, 23 ಪಿಎಸ್‌ಐ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿ-ಸಿಬ್ಬಂದಿ ನಿಯೋಜನೆ ಬಂಟ್ವಾಳ: ಸೆಪ್ಟೆಂಬರ್ 28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿನ್ನೆ ಸೆಪ್ಟೆಂಬರ್ 27ರಂದು ಬಿ.ಸಿ. ರೋಡ್ ಹಾಗೂ […]

News

‘ಹಿಂದೂ ಕಾರ್ಯಕರ್ತರ ಮೇಲಿನ ದಮನ ಖಂಡನೀಯ’ – ಬಿ.ಸಿ. ರೋಡ್ ಚಲೋ ಯಶಸ್ವಿಗೊಳಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ ನಾಳೆ ಸೆಪ್ಟೆಂಬರ್ 28ರಂದು ಸೋಮವಾರ ನಡೆಯಲಿರುವ ‘ಬಿ.ಸಿ. ರೋಡ್ ಚಲೋ’ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು […]

News

ಮಂಗಳೂರು ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹24 ಲಕ್ಷ ಮೌಲ್ಯದ MDMA ವಶ!

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMAಯನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ MDMA ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದಿಂದ MDMA ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಸೆಪ್ಟೆಂಬರ್ 26ರಂದು ಶನಿವಾರ ಸಂಜೆ ಉಳ್ಳಾಲ […]

News

ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ‘ಪುನರ್ಜನ್ಮ’!

ಕೆ.ಎಂ.ಸಿ. ತಜ್ಞರ ಸಹಕಾರದೊಂದಿಗೆ ನಾಲ್ಕು ಗಂಟೆಗಳ ಸಂಕೀರ್ಣ ಶಸ್ತ್ರಚಿಕಿತ್ಸೆ; ತಾಯಿ ಪ್ರಾಣ ಉಳಿಸಿದ ವೈದ್ಯರ ತಂಡ ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸವಾಲಿನ ಹಂತ ತಲುಪಿದ್ದ ಜೀವನ್ಮರಣದ ಸ್ಥಿತಿಯಲ್ಲಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಹಾಗೂ ಕೆ.ಎಂ.ಸಿ.ಯ ತಜ್ಞ ವೈದ್ಯರ ತಂಡ ಜಂಟಿಯಾಗಿ ಯಶಸ್ವಿ ಚಿಕಿತ್ಸೆ ನೀಡಿ ಜೀವ ಉಳಿಸಿದೆ. ಅತ್ಯಂತ ಸಂಕೀರ್ಣವಾಗಿದ್ದ ಈ ಪ್ರಕರಣದಲ್ಲಿ ಬಹುವೈದ್ಯಕೀಯ ಜೀವರಕ್ಷಕ ಆರೈಕೆ ಪದ್ಧತಿಯನ್ನು ಅನುಸರಿಸುವ ಮೂಲಕ ಮಹಿಳೆಗೆ ಹೊಸ ಜೀವನ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ […]

News

ಪೋಕ್ಸೋ ಪ್ರಕರಣ – ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು

ಪ್ರತಿಷ್ಠಿತ ವಕೀಲರಾದ ಮಹೇಶ್ ಕಜೆ ಅವರ ವಾದ – ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ Crime No. 46/2026ರ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ @ ಅದ್ರಮ್ ಅವರಿಗೆ ಪುತ್ತೂರು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿವರಗಳ ಪ್ರಕಾರ, ಆರೋಪಿಯು ಸಂತ್ರಸ್ತ ಬಾಲಕಿಯ ಮನೆಯ ಸಮೀಪದವರಾಗಿದ್ದು, ತಮ್ಮ ಮಕ್ಕಳೊಂದಿಗೆ ಸಂತ್ರಸ್ತೆಯನ್ನೂ […]

News

ಮಂಗಳೂರಿನ ಪಾಂಡೇಶ್ವರದಲ್ಲಿ ಕಟ್ಟಡದ ಬಾಲ್ಕನಿಯ ತಡೆಗೋಡೆ ಕುಸಿತ -ಓರ್ವ ವಿದ್ಯಾರ್ಥಿ ಸಾವು; 3 ಮಂದಿಗೆ ಗಾಯ

ಶಿಥಿಲ ಕಟ್ಟಡದಲ್ಲಿ ಕಾರ್ಯಕ್ರಮ ಆಯೋಜನೆ ಆರೋಪ — ಮಾಲೀಕರ ಹಾಗೂ ಆಯೋಜಕರ ವಿರುದ್ಧ FIR ಮಂಗಳೂರು ನಗರದ ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ‘ರಮಾ ಲಕ್ಷ್ಮೀ ನಾರಾಯಣ ಹಾಲ್’ನಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮದ ವೇಳೆ ಮೊದಲ ಮಹಡಿಯ ಬಾಲ್ಕನಿಯ ತಡೆಗೋಡೆ ಏಕಾಏಕಿ ಕುಸಿದು 16 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 26ರಂದು ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳ ಕಾರ್ಯಕ್ರಮದ ಅಂಗವಾಗಿ ರ‍್ಯಾಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ […]

News

ಶ್ರೀನಿವಾಸ ವಿವಿಯಲ್ಲಿ ಭೀಕರ ರ‍್ಯಾಗಿಂಗ್ ಆರೋಪ: ಜೂನಿಯರ್‌ಗಳ ಅಪಹರಣ, ಹಲ್ಲೆ; 9 ಸೀನಿಯರ್ಸ್ ವಿರುದ್ಧ ಪ್ರಕರಣ — 5 ಮಂದಿ ಬಂಧನ

ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಭೀಕರ ರ‍್ಯಾಗಿಂಗ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಜೂನಿಯರ್ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಬಂದ ವೇಳೆ ಬಲವಂತವಾಗಿ ಬೈಕ್‌ನಲ್ಲಿ ಕರೆದೊಯ್ದು, ಮನೆಯೊಂದರಲ್ಲಿ ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಬೆಲ್ಟ್, ಹ್ಯಾಂಗರ್ ಹಾಗೂ ಕಬ್ಬಿಣದ ಪಂಚ್‌ನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ […]

News

Father Muller Celebrates World Pharmacist Day, Honouring the Dedicated Service of Pharmacists

Father Muller Medical College Hospital Celebrated World Pharmacist Day with enthusiasm and gratitude, recognising the dedicated services of pharmacists and allied pharmacy personnel who work tirelessly round the clock to ensure the safe and timely dispensing of medicines to patients and various departments of the hospital. The celebration, held in the early hours of the […]

News

ತುಂಬೆಯಲ್ಲಿ ಅಕ್ರಮ ಮರಳುಗಾರಿಕೆ – ನಾಲ್ವರು ವಶಕ್ಕೆ, ₹25.24 ಲಕ್ಷ ಮೌಲ್ಯದ ವಾಹನ–ಸಾಮಗ್ರಿ ಜಪ್ತಿ

ಬಂಟ್ವಾಳ ಗ್ರಾಮಾಂತರ ಠಾಣೆ PSI ರನ್ನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆಯಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಇಂದು ಸೆಪ್ಟೆಂಬರ್ 25ರಂದು ಶುಕ್ರವಾರ ಮುಂಜಾನೆ ದಾಳಿ ನಡೆಸಿ ಮೂರು ಟಿಪ್ಪರ್ ಲಾರಿ, ಒಂದು ಜೆಸಿಬಿ ಸೇರಿದಂತೆ ಸುಮಾರು ₹25.24 ಲಕ್ಷ ಮೌಲ್ಯದ ವಾಹನ ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ […]

News

ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ.) ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡು-ನುಡಿ, ಕಲೆ, ಸಂಸ್ಕೃತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಸಲುವಾಗಿ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’, ‘ಕರ್ನಾಟಕ ಭೂಷಣ ಪ್ರಶಸ್ತಿ’, ‘ಸಹಕಾರ ರತ್ನ ಪ್ರಶಸ್ತಿ’, ‘ಸಮಾಜ ಸೇವಾ ರತ್ನ ಪ್ರಶಸ್ತಿ’, ‘ಶಿಕ್ಷಣ ರತ್ನ ಪ್ರಶಸ್ತಿ’, ‘ಕನ್ನಡ ರತ್ನ ಪ್ರಶಸ್ತಿ’ ಹಾಗೂ ‘ಕರ್ನಾಟಕ ರತ್ನ ಶ್ರೀ ಪ್ರಶಸ್ತಿ’ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ, ನೃತ್ಯ, […]

You cannot copy content of this page