November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಚಿವ ಯು.ಟಿ. ಖಾದರ್ ಅವರಿಗೆ DAPC ನಿಯೋಗದ ಮನವಿ

ಕ್ರೈಸ್ತ ಸಮುದಾಯಕ್ಕೆ 3C ಮೀಸಲಾತಿ ಹಾಗೂ ನ್ಯಾಯಯುತ ಪ್ರಾತಿನಿಧ್ಯಕ್ಕೆ ಆಗ್ರಹ ಬೆಂಗಳೂರು: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರನ್ನು ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನೇತೃತ್ವದ ವಿವಿಧ ಕ್ರೈಸ್ತ ಧಾರ್ಮಿಕ ಮುಖಂಡರ ನಿಯೋಗವು ಭೇಟಿಯಾಗಿ, ರಾಜ್ಯದ ಕ್ರೈಸ್ತ ಸಮುದಾಯದ ಹಕ್ಕುಗಳು, ನ್ಯಾಯಯುತ ಪ್ರಾತಿನಿಧ್ಯ ಹಾಗೂ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ನವೆಂಬರ್ 17ರಂದು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಈ ಭೇಟಿಯಲ್ಲಿ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್, […]

News

ಲಯನ್ ಸಮುದಾಯ ಭವನದ ಕನಸಿಗೆ ಹೊಸ ಮುನ್ನುಡಿ – ‘ಕೃಷ್ಣ’ ವಾಣಿಜ್ಯ ಸಮುಚ್ಚಯಕ್ಕೆ ಶಿಲಾನ್ಯಾಸ

ಮಂಗಳೂರು: ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಲಯನ್ಸ್ ಸೇವಾ ಟ್ರಸ್ಟ್ ಕಂಕನಾಡಿ–ಪಡೀಲ್‌ನ ಬಹುಕಾಲದ ಕನಸಾದ ‘ಲಯನ್ ಸಮುದಾಯ ಭವನ’ ನಿರ್ಮಾಣ ಯೋಜನೆಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಈ ಯೋಜನೆಗೆ ಪೂರಕವಾಗಿ ನಂತೂರು–ಕದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರ್ಮಾಣಗೊಳ್ಳಲಿರುವ ‘ಕೃಷ್ಣ’ ವಾಣಿಜ್ಯ ಸಮುಚ್ಚಯಕ್ಕೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಶಿಲಾನ್ಯಾಸ ನೆರವೇರಿಸಿದರು. ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ‘ಅಥರ್ವ ಬಿಲ್ಡರ್ಸ್’ನ ಮತ್ತೊಂದು ವಾಣಿಜ್ಯ ಯೋಜನೆಯಾಗಿರುವ ‘ಕೃಷ್ಣ’ ಸಮುಚ್ಚಯದ ಶಿಲಾನ್ಯಾಸ […]

News

ನವಂಬರ್ 25ರಂದು ದಕ್ಷಿಣ ಕನ್ನಡದಲ್ಲಿ ಬೃಹತ್ ರಕ್ತದಾನ ಅಭಿಯಾನ; 14 ರಕ್ತನಿಧಿ ಕೇಂದ್ರಗಳಲ್ಲಿ ಶಿಬಿರ – ಡಾ. ಎಚ್.ಆರ್. ತಿಮ್ಮಯ್ಯ

ಮಂಗಳೂರು: ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಿಂದ ಯಾವುದೇ ಜೀವ ಅಪಾಯಕ್ಕೆ ಸಿಲುಕಬಾರದು ಎಂಬ ಮಾನವೀಯ ಆಶಯದೊಂದಿಗೆ ನವೆಂಬರ್ 25ರಂದು ರಾಜ್ಯಾದ್ಯಂತ ಬೃಹತ್ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಕ್ತನಿಧಿ ಕೇಂದ್ರಗಳ ವ್ಯಾಪ್ತಿಯಲ್ಲಿಯೂ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ತಿಳಿಸಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರ ಸೂಚನೆಯಂತೆ ಕರ್ನಾಟಕ ರಾಜ್ಯ […]

News

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಬಿಡಿ ಸಿಗರೇಟ್ ಮಾರಾಟಕ್ಕೆ ಕಡಿವಾಣ – ಕಠಿಣ ಕ್ರಮಕ್ಕೆ ADC ಕೆ. ರಾಜು ಸೂಚನೆ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಬಿಡಿಬಿಡಿಯಾಗಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಮತ್ತು ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನವಂಬರ್ 20ರಂದು ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]

News

ಇತಿಹಾಸ ಪ್ರಸಿದ್ಧ ಅಜಿಲಮೊಗರು ಉರೂಸ್‌ಗೆ ಸಜ್ಜು

ಭಕ್ತರ ಅನುಕೂಲಕ್ಕೆ ಸೌಹಾರ್ದ ಸೇತುವೆಯಲ್ಲಿ ಪಾದಯಾತ್ರೆಗೆ ಅವಕಾಶ ಮಾಣಿ: ಹಝ್ರತ್ ಬಾಬಾ ಫಕ್ರುದ್ದೀನ್ ಔಲಿಯಾ (ರ) ಅವರ ಸ್ಮರಣಾರ್ಥ ಆಚರಿಸಿಕೊಂಡು ಬರುವ ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್ ಸಮಾರಂಭವು ಇದೇ ನವೆಂಬರ್ 21ರಿಂದ 25ರವರೆಗೆ ನಡೆಯಲಿದೆ. ಈ ಬಾರಿಯ ಉರೂಸ್‌ಗೆ ವಿಶೇಷ ಆಕರ್ಷಣೆಯಾಗಿ ಕಡೇಶಿವಾಲಯ ಮತ್ತು ಅಜಿಲಮೊಗರು ಸಂಪರ್ಕಿಸುವ ಬಹುವರ್ಷಗಳ ಕನಸಿನ ಸೌಹಾರ್ದ ಸೇತುವೆ ಭಕ್ತರ ಸಂಚಾರಕ್ಕೆ ಸಿದ್ಧಗೊಂಡಿದೆ. ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದರೂ, ವಾಹನ ಸಂಚಾರಕ್ಕೆ ಇನ್ನೂ ಅವಕಾಶ ಕಲ್ಪಿಸಲಾಗಿಲ್ಲ. ಆದರೆ ಉರೂಸ್‌ಗೆ ಆಗಮಿಸುವ ಭಕ್ತರ […]

News

ಮಾರ್ಚ್ 4ರಿಂದ ಸುರ್ಯ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ – ಬ್ರಹ್ಮರಥ ಸಮರ್ಪಣೆಗೆ ಸಿದ್ಧತೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ 2027 ಮಾರ್ಚ್ 4ರಿಂದ 11ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮಗಳಿಗೆ ಸಿದ್ಧತೆಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಬ್ರಹ್ಮಕಲಶೋತ್ಸವದ ಮಾಹಿತಿ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಹಾಗೂ ಕೂಪನ್ ಬಿಡುಗಡೆ ಕಾರ್ಯಕ್ರಮ ನವೆಂಬರ್ 19ರಂದು ಬುಧವಾರ ನಡೆಯಿತು. ಮಾಹಿತಿ ಕಚೇರಿಯನ್ನು ಉದ್ಘಾಟಿಸಿದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶರತ್ […]

News

ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜಿನಲ್ಲಿ ‘ಫೇಮ್ 2026’ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನಕ್ಕೆ ಚಾಲನೆ

ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜು ವತಿಯಿಂದ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವಾದ “ಫೇಮ್ 2026” – ಹೋಮಿಯೋಪಥಿಯಲ್ಲಿ ಸಂಶೋಧನೆಯ ಶ್ರೇಷ್ಠತೆಗಾಗಿ ಫಾದರ್ ಮುಲ್ಲರ್ ವಾರ್ಷಿಕ ಸಮಾವೇಶ (Father Muller Annual Meet for Excellence in Research in Homoeopathy) ಇಂದು ನವಂಬರ್ 20ರಂದು ಮಂಗಳೂರಿನ ದೇರಳಕಟ್ಟೆಯ ಫಾದರ್ ಮುಲ್ಲರ್ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಎಂಡೋವೆಲ್‌ನೆಸ್ (ENDOWellness) – ಹೋಮಿಯೋಪಥಿಯಲ್ಲಿ ಹಾರ್ಮೋನ್‌ಗಳ ಅಧ್ಯಯನಶಾಸ್ತ್ರ ಸಂಬಂಧಿಸಿದ ಸಾಕ್ಷ್ಯಾಧಾರಿತ ಸಂಶೋಧನೆ” ಎಂಬ ವಿಷಯವನ್ನು ಕೇಂದ್ರವಾಗಿಟ್ಟುಕೊಂಡಿರುವ ಈ […]

News

92 ರ ಸಂಭ್ರಮದಲ್ಲಿ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್

ಧರ್ಮಗುರುಗಳ ದೂರದೃಷ್ಟಿ, ಧರ್ಮಭಗಿನಿಯರ ಸಮರ್ಪಣೆ ಹಾಗೂ ಭಕ್ತಾದಿಗಳ ಒಗ್ಗಟ್ಟಿನ ಸೇವೆಗೆ ಸಾಕ್ಷಿಯಾದ ಆಧ್ಯಾತ್ಮಿಕ ಪಯಣ ಸೂರಿಕುಮೇರು: ಹಸಿರು ಪೈರುಗದ್ದೆಗಳ ಮಡಿಲು, ಕಂಗೊಳಿಸುವ ಪ್ರಕೃತಿಯ ಸೌಂದರ್ಯ, ಪ್ರಶಾಂತ ಪರಿಸರದ ನಡುವೆ ಭವ್ಯವಾಗಿ ತಲೆ ಎತ್ತಿ ನಿಂತಿರುವ ಸುಂದರ ದೇವಾಲಯ. ನಂಬಿಕೆಯ ಬೆಳಕನ್ನು ಹರಡುತ್ತಾ, ಶಾಂತಿ ಮತ್ತು ಪ್ರೀತಿಯ ಸಂದೇಶವನ್ನು ಸಾರುತ್ತಾ, ತಲೆಮಾರುಗಳಿಂದ ಸಾವಿರಾರು ಭಕ್ತರ ಆಧ್ಯಾತ್ಮಿಕ ಬದುಕಿಗೆ ಆಶಾಕಿರಣವಾಗಿರುವ ಈ ದೇವಾಲಯವೇ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್. ಬರಿಮಾರುವಿನಲ್ಲಿ 1893ರ ಸೆಪ್ಟೆಂಬರ್ 4ರಂದು […]

News

ಕಸ್ತೂರಿ ರಂಗನ್ ವರದಿ ಪರಿಶೀಲನಾ ಹೈಪವರ್ ಸಮಿತಿಗೆ ಮಂಗಳೂರಿನ ಉದ್ಯಮಿ ನಾಸಿರ್ ಲಕ್ಕಿಸ್ಟಾರ್ ನೇಮಕ

ಮಂಗಳೂರು: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಪರಿಶೀಲಿಸಿ, ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ಬದಲಾವಣೆ ಹಾಗೂ ಶಿಫಾರಸುಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ಮಹತ್ವದ ಹೈಪವರ್ ಸಮಿತಿಗೆ ಮಂಗಳೂರಿನ ಉದ್ಯಮಿ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರು ಸದಸ್ಯರಾಗಿ ನೇಮಕಗೊಂಡಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಜೋನ್ ಮೈಕಲ್ ಡಿಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಒಂಬತ್ತು ಸದಸ್ಯರ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯರಾಗಿ ನಾಸಿರ್ […]

News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಸುದರ್ಶನ್ ಜೈನ್ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷರಾಗಿ ಅನುಭವಿ ಸಹಕಾರಿ ಕ್ಷೇತ್ರದ ಮುಖಂಡ ಸುದರ್ಶನ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆ ಮೇರೆಗೆ ಈ ನೇಮಕಾತಿ ನಡೆದಿದ್ದು, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ಎಸ್. ತಾಳಂಪಳ್ಳಿ ಅವರು ಇಂದು ನವಂಬರ್ 19ರಂದು ಗುರುವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಸುದರ್ಶನ್ ಜೈನ್ ಅವರು ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ […]

You cannot copy content of this page