November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರಿನಲ್ಲಿ ಸೆಪ್ಟೆಂಬರ್ 26ರಿಂದ ‘ಕರ್ನಾಟಕ ಪರ್ವ–2026’ – 180ಕ್ಕೂ ಅಧಿಕ ಮಳಿಗೆ, ಕಲೆ–ಸಂಸ್ಕೃತಿ–ಸಂಗೀತದ ಮಹಾಸಂಗಮ

ಕರ್ನಾಟಕದ ವೈವಿಧ್ಯಮಯ ಕಲೆ, ಸಂಸ್ಕೃತಿ, ಪರಂಪರೆ, ಕರಕುಶಲ, ಆಹಾರ ಹಾಗೂ ಉದ್ಯಮಶೀಲತೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ‘ಕರ್ನಾಟಕ ಪರ್ವ–2026’ ಸೆಪ್ಟೆಂಬರ್ 26 ರಿಂದ 30ರ ತನಕ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ. ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಈ ಐದು ದಿನಗಳ ಉತ್ಸವಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಸೆಪ್ಟೆಂಬರ್ 26ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕದ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ […]

News

ಯುವ ಕವಿ–ಕಥೆಗಾರ ಗ್ಲ್ಯಾನಿಶ್ ಜ್ಯೂಡ್ ಮಾರ್ಟಿಸ್‌ ಅವರಿಗೆ 2026ರ ಕಿಟಾಳ್ ಯುವ ಪುರಸ್ಕಾರ

ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಯುವ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ 2026ನೇ ಸಾಲಿನ ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಯುವ ಕವಿ, ಕಥೆಗಾರ ಹಾಗೂ ಸಂಶೋಧಕ ಗ್ಲ್ಯಾನಿಶ್ ಜ್ಯೂಡ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕೊಂಕಣಿ ಸಾಹಿತಿ ಹಾಗೂ ವಿಮರ್ಶಕ ಎಚ್.ಎಂ. ಪೆರ್ನಾಲ್ ಸಂಪಾದಿಸಿ ಪ್ರಕಟಿಸುತ್ತಿರುವ ಕಿಟಾಳ್ ಅಂತರ್ಜಾಲ ಸಾಹಿತ್ಯ ಪತ್ರಿಕೆ 2012ರಿಂದ ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರವನ್ನು ನೀಡುತ್ತಾ ಬಂದಿದೆ. ಅಬುಧಾಬಿಯ ಅನಿವಾಸಿ ಉದ್ಯಮಿ ಹಾಗೂ […]

News

ರಮಾನಾಥ ರೈ ಅಪಘಾತದ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್ ಆರೋಪ – ಪ್ರಭಾಕರ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ರೀತಿಯ ಸಂದೇಶ ಪ್ರಕಟಿಸಿದ ಆರೋಪದಡಿ ಪ್ರಭಾಕರ ಹೆಗ್ಡೆ ಎಂಬವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅವರು ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ. 130/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 351(2), […]

News

ಮೈಸೂರಿನಲ್ಲಿ DAPC ನೂತನ ಮುಖ್ಯ ಕಚೇರಿ ಸಮರ್ಪಣೆ – ಪ್ರೊಟೆಸ್ಟಂಟ್ ಚರ್ಚುಗಳ ಏಕತೆಗೆ ಹೊಸ ಹೆಜ್ಜೆ

ಮೈಸೂರು : ಪ್ರೊಟೆಸ್ಟಂಟ್ ಚರ್ಚುಗಳ ನಡುವಿನ ಏಕತೆ, ಸಹಭಾಗಿತ್ವ ಹಾಗೂ ಸಮಾಜಮುಖಿ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನ ನೂತನ ಭಾರತ ಮುಖ್ಯ ಕಚೇರಿಯನ್ನು ಮೈಸೂರಿನ ಸುಭಾಷ್‌ನಗರದಲ್ಲಿ ಸೆಪ್ಟೆಂಬರ್ 22ರಂದು ಮಂಗಳವಾರ ಪ್ರಾರ್ಥನೆಯೊಂದಿಗೆ ಸಮರ್ಪಿಸಲಾಯಿತು. ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಿಂದ ಆಗಮಿಸಿದ ಆರ್ಚ್‌ಬಿಷಪ್‌ಗಳು, ಬಿಷಪ್‌ಗಳು, ಪಾಸ್ಟರ್‌ಗಳು, ಧಾರ್ಮಿಕ ಮುಖಂಡರು ಹಾಗೂ ರಾಜಕೀಯ ಮತ್ತು ಸಾಮಾಜಿಕ ಗಣ್ಯರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ […]

News

ಉಪ್ಪಿನಂಗಡಿಯಲ್ಲಿ ದೂರುಗಳ ಸರಮಾಲೆ –  PDO ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅಮಾನತು

ಉಪ್ಪಿನಂಗಡಿ: ಸಾರ್ವಜನಿಕರಿಂದ ವಿವಿಧ ದೂರುಗಳು ಹಾಗೂ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನಲ್ಲಿ ಈ ಹಿಂದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (PDO) ಕರ್ತವ್ಯ ನಿರ್ವಹಿಸಿದ್ದ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯವರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 9ರಂದು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಕಡತ ಪರಿಶೀಲನೆಗಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಮಂದಿ ಸಾರ್ವಜನಿಕರು PDO ವಿರುದ್ಧ ದೂರುಗಳನ್ನು ಸಲ್ಲಿಸಿದ್ದರು. […]

News

UAE ಯಲ್ಲಿ ಮಾರ್ಗದೀಪದ ಗಣೇಶೋತ್ಸವ ಸಂಭ್ರಮ: ಭಕ್ತಿ–ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾದ 12ನೇ ವರ್ಷದ ಆಚರಣೆ

ಕನ್ನಡ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಮೌಲ್ಯಗಳನ್ನು ವಿದೇಶದಲ್ಲೂ ಉಳಿಸಿ ಬೆಳೆಸುವ ಉದ್ದೇಶದಿಂದ ಮಾರ್ಗದೀಪ ಸಾಂಸ್ಕೃತಿಕ ಸಮಿತಿ UAE ವತಿಯಿಂದ ಆಯೋಜಿಸಲಾದ 12ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನೆರವೇರಿತು. ವೇದಮೂರ್ತಿಗಳಾದ ಸಾಂತೂರು ಲಕ್ಷ್ಮೀಕಾಂತ್ ಭಟ್ ಹಾಗೂ ರಾಜೇಶ್ ಪ್ರಸಾದ್ ಅಡಿಗ ಅವರ ಪೌರೋಹಿತ್ಯದಲ್ಲಿ ಗಣಹೋಮ, ಶ್ರೀಗಣೇಶ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಯುಎಇಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು […]

News

ಬಿಕರ್ನಕಟ್ಟೆ ರಸ್ತೆ ಅವ್ಯವಸ್ಥೆ : ಹೆದ್ದಾರಿ–ಪಾಲಿಕೆ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಮಂಗಳೂರು ನಗರದ ಪ್ರಮುಖ ಸಂಪರ್ಕ ಪ್ರದೇಶಗಳಲ್ಲಿ ಒಂದಾದ ನಂತೂರು–ಬಿಕರ್ನಕಟ್ಟೆ ರಸ್ತೆ ಹಲವು ಮೂಲಸೌಕರ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಂತೂರಿನಿಂದ ಬಿಕರ್ನಕಟ್ಟೆ ಮೂಲಕ ಬಂಟ್ವಾಳ, ಧರ್ಮಸ್ಥಳ, ಬೆಂಗಳೂರು, ಮೈಸೂರು, ಮೂಡುಬಿದಿರೆ, ಕಾರ್ಕಳ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಪ್ರಮುಖ ವಸತಿ ಪ್ರದೇಶಗಳು, ಅಪಾರ್ಟ್‌ಮೆಂಟ್‌ಗಳು, ಶಾಲಾ-ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳು ಇರುವ ಈ ಭಾಗದಲ್ಲಿ ರಸ್ತೆ ಬದಿ ನಿವಾಸಿಗಳು […]

News

ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಹತ್ಯೆ – 9 ತುಂಡುಗಳಾಗಿ ಶವ ಪತ್ತೆ

ಪತ್ನಿ ಟೀನಾ ಹಾಗೂ ಪುತ್ರ ನಾಪತ್ತೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಶಾರ್ಜಾ ಹತ್ಯೆ ಪ್ರಕರಣ ಇದೀಗ ಮತ್ತಷ್ಟು ನಿಗೂಢ ತಿರುವು ಪಡೆದುಕೊಂಡಿದೆ. ಫೊರೆನ್ಸಿಕ್ ವರದಿಯ ಪ್ರಕಾರ, ಪ್ರಕಾಶ್ ಅವರ ಮೃತದೇಹವನ್ನು ಒಂಬತ್ತು ಭಾಗಗಳಾಗಿ ಬೇರ್ಪಡಿಸಿ ಎರಡು ಚೀಲಗಳಲ್ಲಿ ತುಂಬಿ ಕಾರಿನ ಡಿಕ್ಕಿಯಲ್ಲಿ ಇರಿಸಲಾಗಿತ್ತು. ಈ ನಡುವೆ ಮೃತರ ಪತ್ನಿ ಟೀನಾ ಹಾಗೂ ಅಪ್ರಾಪ್ತ ಪುತ್ರನ ಪತ್ತೆಯಾಗದಿರುವುದು ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವ ನೀಡಿದೆ. ಪ್ರಕಾಶ್ ಅವರು ಸುಮಾರು 14 ವರ್ಷಗಳಿಂದ […]

News

ಸೌಜನ್ಯ ಪ್ರಕರಣ ಮರುತನಿಖೆಗೆ ಧರ್ಮಸ್ಥಳದ ಮುಕ್ತ ಸ್ವಾಗತ; “ನಿಷ್ಪಕ್ಷಪಾತ ತನಿಖೆಯಿಂದ ತಾರ್ಕಿಕ ಅಂತ್ಯ ಸಿಗಲಿ”

ಕುಮಾರಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಲು ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸಲಾಗಿದೆ. ಈ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ಅವರು ಸೆಪ್ಟೆಂಬರ್ 21ರಂದು ಸೋಮವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನ ಮಾಡುತ್ತಿವೆ […]

News

BPL ಕುಟುಂಬಗಳಿಗೆ ಉಚಿತ ರಕ್ತ: ಮುಂದಿನ ವರ್ಷದಿಂದ ಯೋಜನೆ ಜಾರಿ – ಸಿಎ ಶಾಂತಾರಾಮ ಶೆಟ್ಟಿ

ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ BPL ಕಾರ್ಡ್‌ದಾರರಿಗೆ ಉಚಿತವಾಗಿ ರಕ್ತ ಪೂರೈಸುವ ಯೋಜನೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿ ಸಿದ್ಧತೆ ನಡೆಸಿದೆ ಎಂದು ಸೊಸೈಟಿಯ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ತಿಳಿಸಿದರು. ನಗರದ ಮಣ್ಣಗುಡ್ಡೆ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 20ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ವತಿಯಿಂದ ರೆಡ್‌ಕ್ರಾಸ್ ಸೊಸೈಟಿಯ […]

You cannot copy content of this page