ಮಾಣಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ
ಜನರಿಗೆ ಸಿಗಬಹುದಾದ ಸವಲತ್ತುಗಳ ಬಗ್ಗೆ ಸರಿಯಾದ ಮಾಹಿತಿ ನೀಡಿದಾಗ ಗ್ರಾಮ ಸಭೆಗಳು ಅರ್ಥಪೂರ್ಣ – ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಇಲಾಖಾಧಿಕಾರಿಗಳು ಸರ್ಕಾರದಿಂದ ಸಿಗಬಹುದಾದ ಸವಲತ್ತುಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರಿಗೆ ನೀಡಿದಾಗ ಗ್ರಾಮ ಸಭೆಗಳು ಅರ್ಥಪೂರ್ಣವಾಗಿ ನಡೆಯಲು ಸಾಧ್ಯ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಂದು ಮಾರ್ಚ್ 13ರಂದು ಗುರುವಾರ ಮಾಣಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]













