November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಆಬೊಲಿಂ’ ಕೊಂಕಣಿ ಮಹಿಳಾ ಕವಿಗೋಷ್ಠಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಕಾಡೆಮಿ ಸಭಾಂಗಣದಲ್ಲಿ ಮಾರ್ಚ್ 7ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಆಬೊಲಿಂ’ ಶೀರ್ಷಿಕೆಯಡಿ ಮಹಿಳಾ ಕವಿಗೋಷ್ಠಿಯನ್ನು ಹಮ್ಮಿಕೊಂಡಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಶ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಇವರು ವಹಿಸಿ, ನೆರೆದಿರುವ ಎಲ್ಲಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸಾಧನೆಗಾಗಿ ಡಾ. ಗ್ರೇಸ್ ನೊರೊನ್ಹಾ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಇವರು […]

News

ಆರೋಗ್ಯ – ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನ ಘೋಷಣೆಗಳು ಕ್ರಾಂತಿಕಾರಿ ಹೆಜ್ಜೆಯಾಗಿವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬಜೆಟ್ ಮೇಲೂ ಬಿಜೆಪಿ ತನ್ನ ಕೋಮುವಾದಿ ಮನೋಭಾವ ಪ್ರದರ್ಶಿಸುವುದು ಸರಿಯಲ್ಲ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದಾಗಿ ಬಿಜೆಪಿಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಹೆಚ್ಚು ಒತ್ತು ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಬಳಿಕ ವಿಧಾನ ಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಕ್ರಾಂತಿಕಾರಿ ಹೆಜ್ಜೆಗಳನ್ನು […]

News

ಫಾದರ್ ಮುಲ್ಲರ್ – “ಜೆನೆಸಿಸ್” ಫರ್ಟಿಲಿಟಿ ಕ್ಲಿನಿಕ್ ಯಶಸ್ಸಿನ ಕುರಿತು ಪತ್ರಿಕಾ ಗೋಷ್ಠಿ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯು 1985ರಿಂದ ಹೋಮಿಯೋಪಥಿ ಚಿಕಿತ್ಸೆ ನೀಡುತ್ತಿದ್ದು,  ನಿರಂತರವಾಗಿ ವೈದ್ಯಕೀಯ, ಮಕ್ಕಳ, ಸ್ತ್ರೀರೋಗ, ಶಸ್ತ್ರಚಿಕಿತ್ಸೆ, ಚರ್ಮರೋಗ, ಮನೋರೋಗ ಚಿಕಿತ್ಸೆಗಳನ್ನೊಳಗೊಂಡ ಹೊರರೋಗಿ ವಿಭಾಗ, 24×7 ಒಳರೋಗಿ ವಿಭಾಗ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ,  ಫಿಸಿಯೋಥೆರಪಿ, ಎಕ್ಸ್-ರೇ ಮತ್ತು ಪ್ರಯೋಗಾಲಯ ಸೌಲಭ್ಯ, ಸ್ಪೆಷಾಲಿಟಿ ಕ್ಲಿನಿಕ್, ಆನ್‌ಲೈನ್ ಸಮಾಲೋಚನೆ,  ಆರೋಗ್ಯ ತಪಾಸಣೆ ಯೋಜನೆ, ಉಪಶಾಮಕ ಆರೈಕೆ ಕೇಂದ್ರದೊಂದಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಾ ಇದೆ. 8 ಮಾರ್ಚ್ 2022ರಂದು […]

News

ಮೊಬೈಲ್‌ ಬಿಟ್ಟು ಓದು ಎಂದ ಪೋಷಕರ ಮಾರಣಾಂತಿಕ ಹಲ್ಲೆ ಮಾಡಿದ ಮಗ

ತಾಯಿ ಮೃತ್ಯು – ತಂದೆ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಈಗಿನ ಕಾಲದ ಮಕ್ಕಳಿಗೆ ಹಾಗಲ್ಲ ಹೀಗೆ ಎಂದು ಹೇಳಲು ಇಲ್ಲ. ಅಷ್ಟರಲ್ಲೇ ಆವೇಶಕ್ಕೊಳಗಾಗುತ್ತಾರೆ. ಹೆತ್ತವರು ಹೇಳುವ ಬುದ್ಧಿಮಾತುಗಳು ಸಹ ಬೇರೊಂದು ಅನಾಹುತಗಳನ್ನು ಸೃಷ್ಠಿಸಿರುವ ಅದೆಷ್ಟೋ ಘಟನೆಗಳನ್ನು ನಾವು ನೋಡಿದ್ದೇವೆ. ಇದೀಗ ನಡೆದಿರುವ ಘಟನೆಯೂ ಅಂತಹದ್ದೇ ಆಗಿದೆ. ಮೊಬೈಲ್‌ ಫೋನನ್ನು ಹೆಚ್ಚು ನೋಡುವುದನ್ನು ಬಿಟ್ಟು, ನೀಟ್‌ ಪರೀಕ್ಷೆಗೆ ಸಿದ್ಧತೆ ಮಾಡು ಎಂದು ಬುದ್ಧಿವಾದ ಹೇಳಿದ ತಾಯಿ ಮತ್ತು ತಂದೆಯ ಮೇಲೆ ಪುತ್ರನೊಬ್ಬ ಮರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ […]

News

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ಜೈಲು ಶಿಕ್ಷೆ ಮತ್ತು ದಂಡ

ಸರ್ಕಾರಿ ಖರಾಬ್ ಜಮೀನಿಗೂ ಅಕ್ರಮ ಖಾತೆ ಮಾಡಿಕೊಟ್ಟ ಪ್ರಕರಣ ಸರಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿದಂತೆ 17 ಮಂದಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿರುವುದು ಕೆಜಿಎಫ್ ಘಟ್ಟ ಕಾಮಧೇನು ಹಳ್ಳಿಯಲ್ಲಿ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ […]

News

ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಗೆ ತಹಶೀಲ್ದಾರ್ ರವರಿಂದ ಗ್ರಾಮ ಲೆಕ್ಕಿಗರ ನೇಮಕ –  ಗ್ರಾಮಸ್ಥರ ಮೊಗದಲ್ಲಿ ಮಂದಹಾಸ

ಸಾಮಾಜಿಕ ಕಾರ್ಯಕರ್ತನ ಮನವಿಗೆ ತಕ್ಷಣ ಸ್ಪಂಧಿಸಿದ ಜಿಲ್ಲಾಧಿಕಾರಿಗಳು ವಾರದಲ್ಲಿ ಮೂರು ದಿವಸ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಮಾಣಿ – ಪೆರಾಜೆ ಗ್ರಾಮ ಪಂಚಾಯತ್ ಇಲ್ಲಿ ಕಳೆದೊಂದು ತಿಂಗಳಿನಿಂದ ಗ್ರಾಮ ಲೆಕ್ಕಿಗರಿಲ್ಲದೆ ಗ್ರಾಮಸ್ಥರು ಕಂಗಾಲಾದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಇವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಲಿಖಿತವಾಗಿ ದೂರು ಸಲ್ಲಿಸಿದ್ದರು. ಗ್ರಾಮ ಲೆಕ್ಕಿಗರಿಲ್ಲದೆ ದಿಕ್ಕುದೆಸೆ ಇಲ್ಲದ ಗ್ರಾಮ ಪಂಚಾಯತ್ ನ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ವಾರದ ಮೂರು ದಿವಸ ಮಂಗಳವಾರ, ಗುರುವಾರ ಹಾಗೂ […]

News

ಕರೆಂಟ್ ಕಳ್ಳರಿಗೆ ಭಾರಿ ದಂಡ! ಬರೋಬ್ಬರಿ 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಿಧಿಸಿದ ಅಧಿಕಾರಿಗಳು

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಕರೆಂಟ್ ಕಳ್ಳರಿಗೆ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂದಿದ್ದಾರೆ. ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ. ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ […]

News

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ – ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

ಬೆಳ್ತಂಗಡಿ; ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ‌ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ ಜರುಗಿತು. ಇಲ್ಲಿನ‌ ಹಾರಿಸ್ ಹೊಟೇಲ್ ಬಳಿ‌ ಜಮಾಯಿಸಿದ ಹೋರಟಗಾರರು‌ ಸಾರ್ವಜನಿಕ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಸಂವಿಧಾನಿಕ ವಕ್ಫ್ ತಿದ್ದುಪಡಿ‌ ಮಸೂದೆ ವಿರುದ್ಧ ವಾಟ್ಸ್ ಆಪ್ ಮೂಲಕ ರಚಿತವಾದ ಬಳಗದ ಸಂಯೋಜನೆಯಲ್ಲಿ ಈ […]

News

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಕ್ಷರ ದಾಸೋಹ ನೌಕರರಿಂದ ಪ್ರತಿಭಟನೆ

ಬಂಟ್ವಾಳ :  ಅಕ್ಷರ ದಾಸೋಹ  ನೌಕರರಿಗೆ ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ 6000 ವೇತನ ಹೆಚ್ಚಳ ಮಾಡಬೇಕೆಂದು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಕರ್ನಾಟಕ ರಾಜ್ಯ ಪ್ರಗತಿಪರ ಅಕ್ಷರ ದಾಸೋಹ ನೌಕರರ ಸಂಘ (ಎ.ಐ.ಸಿ.ಸಿ.ಟಿ.ಯು) ವತಿಯಿಂದ   ಬಿ.ಸಿ. ರೋಡು ಮಿನಿ ವಿಧಾನಸೌಧದ ಮುಂದೆ ಪ್ರತಿಭಟ‌ನೆ ನಡೆಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಅದ್ಯಕ್ಷ ಕಾಮ್ರೇಡ್  ರಾಮಣ್ಣ ವಿಟ್ಲ ಮಾತನಾಡಿ ನಮ್ಮ ದೇಶದ ಅಭಿವೃದ್ಧಿಗೆ ಶಿಕ್ಷಣ, […]

News

ವಿಟ್ಲ ಮಾಡತ್ತಡ್ಕದಲ್ಲಿ ಸ್ಪೋಟ – ಮುಂದುವರಿದ ಪೊಲೀಸ್ ತನಿಖೆ

ಬಂಟ್ವಾಳ : ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮನೆಗಳು ಹಾನಿಗೊಂಡ ಘಟನೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಇಂದು ಮಾರ್ಚ್ 5ರಂದು ಬುಧವಾರ ಬಾಂಬ್ ನಿಷ್ಕ್ರಿಯ ದಳ ಮತ್ತು ಅಪರಾಧ ಸ್ಥಳ ಪರಿಶೀಲನೆ ತಂಡ ಆಗಮಿಸಿ ತನಿಖೆ ನಡೆಸಿದೆ. ವಿಟ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿರುವ ಕೋರೆ ಸಮೀಪದ ಕಲ್ಲಿನ ರಾಶಿಯ ನಡುವಿನಲ್ಲಿ ಒಂದು ಬಾಕ್ಸ್ ಡೆಟೋನೇಟರ್ಸ್ ಹಾಗೂ 200 ಜೆಲಿಟಿನ್ ಕಡ್ಡಿಗಳನ್ನು ಒಟ್ಟಿಗೇ ಇಡಲಾಗಿತ್ತೆನ್ನಲಾಗಿದೆ. ಸುಮಾರು […]

You cannot copy content of this page