ಬಿ.ಸಿ. ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿ ಆಮಂತ್ರಣ ಪತ್ರಿಕೆ ಬಿಡುಗಡೆ – ಬಾಲಾಯ ಪ್ರತಿಷ್ಠೆ
ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯಲ್ಲಿ ಎಪ್ರಿಲ್ 4ರಿಂದ 9 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶಾಭಿಷೇಕ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಹಾಗೂ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮ ಮಾರ್ಚ್ 1ರಂದು ಶನಿವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ತಂತ್ರಿಯವರಾದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿವರೇಣ್ಯರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ, ತುಳುನಾಡಿನಲ್ಲಿ ಜನರ ಜೀವನದಲ್ಲಿ ಬ್ರಹ್ಮಕಲಾಶಾ ಕಾರ್ಯಕ್ರಮಗಳು ಆಧ್ಯಾತ್ಮಿಕವಾಗಿ, ಭೌತಿಕವಾಗಿ, […]













