November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರಿಸರಕ್ಕೆ ಮಾರಕವಾಗುವ ಯೋಜನೆಗೆ ಧಿಕ್ಕಾರ ಧಿಕ್ಕಾರ, ಪ್ರಾಣ ಕೊಟ್ಟೇವು -ಕೃಷಿ ಭೂಮಿ ಕೊಡುವುದಿಲ್ಲ – ಆಲ್ವಿನ್ ಡಿಸೋಜ ಪಾನೀರ್

ಉಡುಪಿ-ಕಾಸರಗೋಡು 400KV ಮತ್ತು ಪಾಲಡ್ಕ-ಕಡಂದಲೆ 400/200 KV ವಿದ್ಯುತ್ ಪ್ರಸರಣ ಮಾರ್ಗಕ್ಕೆ  ವ್ಯಾಪಕ ವಿರೋಧ ಹಸಿರು ಬಾವುಟ ನೀಡಿ ವಂದನೀಯ ಡಾ. ಜೆ.ಬಿ. ಸಲ್ಡಾನ್ಹಾ ಇವರಿಂದ ಚಾಲನೆ ಮಂಗಳೂರು: ಪರಿಸರದ ಜೊತೆಗೆ ಮಾನವ ಸಹಿತ ಇಡೀ ಜೀವಸಂಕುಲಕ್ಕೆ ಮಾರಕವಾಗಿರುವ ಉಡುಪಿ ಕಾಸರಗೋಡು 400kv ಮತ್ತು ಪಾಲಡ್ಕ-ಕಡಂದಲೆ 400/220 KV ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ, ಈ ವಿಚಾರದಲ್ಲಿ ಪ್ರಾಣ ಕೊಡಲು ಸಿದ್ಧರಿದ್ದೇವೆಯೇ ಹೊರತು ಕೃಷಿ ಭೂಮಿ ಬಿಡಲು ಸಾಧ್ಯವಿಲ್ಲ ಎಂದು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ […]

News

ಬೆಳ್ತಂಗಡಿಯಲ್ಲಿ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನಾಭರಣ ಕಳ್ಳತನ

ಬೆಳ್ತಂಗಡಿ : ಮನೆಯೊಂದರಿಂದ ಚಿನ್ನಾಭರಣಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ. ಯುವತಿಯೊಬ್ಬಳು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು 3,12,000 ರೂಪಾಯಿ ಮೌಲ್ಯದ 52ಗ್ರಾಂ ತೂಕದ ಚಿನ್ನಾಭರಣಗಳನ್ನು ನೆರಿಯಾ ಗ್ರಾಮ ಅಕ್ಕೋಳೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಅಕ್ಕೋಳೆ ನಿವಾಸಿ ಫಾತಿಮತ್ ರಂಝೀನ್ (19) ರವರ ದೂರಿನಂತೆ ಫೆಬ್ರವರಿ 19ರಂದು ಬೆಳಿಗ್ಗೆ 9.00 ಗಂಟೆಗೆ ತನ್ನ ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲಸ ಮುಗಿಸಿ 9.30 […]

News

Kerala nun becomes first medical officer in govt service

Catholic nuns practicing medicine in government hospitals are an uncommon sight in India, but Dr Jean Rose has broken new ground. A member of the Sisters of the Destitute, she is now the first Catholic nun to serve as a medical officer in Kerala’s public healthcare system. Dr Rose, also known as Rosamma Thomas, joined the […]

News

“ಸದಾ ಲವಲವಿಕೆಯಿಂದ ಇರುವವರು ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು” – ಡಾ. ಎಂ.ಎನ್. ರಾಜೇಂದ್ರ ಕುಮಾರ್

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ” ಲೋಗೋ ಅನಾವರಣ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ “ಸುವರ್ಣ ಸಂಭ್ರಮ” ಲೋಗೋ ಅನಾವರಣ ಕಾರ್ಯಕ್ರಮ ಇಂದು ಫೆಬ್ರವರಿ 19ರಂದು ಬುಧವಾರ ಬೆಳಗ್ಗೆ ಖಾಸಗಿ ಹೋಟೆಲ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತಾಡಿ, ”ಸದಾ ಲವಲವಿಕೆಯಿಂದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಜಿಲ್ಲೆಯ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ಸುವರ್ಣ […]

Uncategorized

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

ಬೆಳ್ತಂಗಡಿ : ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು ಶನಿವಾರ ಸಂಜೆ ಗಂಟೆ 6.48 ಕ್ಕೆ ಗೋಧೋಳಿ ಲಗ್ನ ಸುಮೂಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆಬ್ರವರಿ 16ರಂದು ಎಸ್.ಡಿ. ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಣ ರಾವ್, […]

News

SSLC ಮತ್ತು PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷಾ ಸಮಯದಲ್ಲಿ KSRTC ಬಸ್ ಪ್ರಯಾಣ ಉಚಿತ

ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ನೀಡಿದ ಕೊಡುಗೆ ಬೆಂಗಳೂರು : ದ್ವಿತೀಯ PUC ಹಾಗೂ SSLC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ KSRTC ಬಸ್ ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಾರ್ಚ್ 01ರಿಂದ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ […]

News

ಯಕ್ಷಭಾರತಿಯ ಯಕ್ಷಗಾನ  ಮತ್ತು ಸೇವಾ ಚಟುವಟಿಕೆಗಳಿಗೆ ಸದಾ ಬೆಂಬಲ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಉಜಿರೆ ಶ್ರೀ ಜನಾರ್ದನ ಕ್ಷೇತ್ರದ ಪರಿಸರದಲ್ಲಿ ನಿರಂತರವಾಗಿ ನಡೆಯುತ್ತಿರುವ ಯಕ್ಷಭಾರತಿಯ ಕಲಾ ಸೇವೆ ಮತ್ತು ಸಾಮಾಜಿಕ ಸೇವಾ ಕಾರ್ಯಗಳು ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ್ದು ರಾಜ್ಯದಲ್ಲಿ ಈ ಸಂಸ್ಥೆ ಗುರುತಿಸುವಂತಾಗಲಿಯೆಂದು ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ಜರಗಿದ ಬೆಳ್ತಂಗಡಿ ಕನ್ಯಾಡಿಯ ಯಕ್ಷ ಭಾರತಿಯ ದಶಮಾನೋತ್ಸವ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದೇವಳದ ಆನುವಂಶೀಯ ಆಡಳಿತ ಮೊಕ್ತೇಸರ ಶರತಕೃಷ್ಣ  ಪಡುವೆಟ್ಣಾಯ ತಿಳಿಸಿದರು. ದಶಪರ್ವ ಸ್ಮರಣ ಸಂಚಿಕೆ ಬಿಡುಗಡೆ : ಮುಖ್ಯ ಅತಿಥಿಯಾಗಿದ್ದ  ಮಂಗಳೂರಿನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ […]

News

ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಡೆಸಿದ ಲೋಕೋಪಯೋಗಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನ ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಸಂಪರ್ಕ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸುವ ಬಗ್ಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಲೋಕೋಪಯೋಗಿ ಇಲಾಖೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ದಕ್ಷಿಣ […]

News

ಕರಾವಳಿ ಕರ್ನಾಟಕದಲ್ಲಿ ಮೊದಲ ವೈರ್ ಲೆಸ್ ಪೇಸ್ ಮೇಕರ್ ಅಳವಡಿಕೆ – ಇಂಡಿಯಾನಾ ಆಸ್ಪತ್ರೆ ಆದ್ಯಪ್ರವರ್ತಕ

ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟಿನ  ವೈದ್ಯರು ಇದೇ ಮೊದಲ ಬಾರಿಗೆ  ಕೃತಕ ಬುದ್ಧಿಮತ್ತೆ (ಎಐ) ಬಳಸಿ, ತಂತಿ ರಹಿತ (ಯಾವುದೇ ವಯರ್ ಇಲ್ಲದೆ )  ಪೇಸ್ ಮೇಕರ್ ನ್ನು ವೃದ್ಧ ಮಹಿಳೆಗೆ ಅಳವಡಿಸಿದ್ದು, ಇದು ಹೃದ್ರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಅಸಾಧಾರಣ ಪ್ರಗತಿಯು ಆಧುನಿಕ, ಸುಧಾರಿತ ಆರೋಗ್ಯ ಸೇವೆಗಳಿಗೆ ಸಂಬಂಧಿಸಿ ಈ ವಲಯದ/ಪ್ರದೇಶದ ಖ್ಯಾತಿಯನ್ನು ಹೆಚ್ಚಿಸಲಿದೆ. ರೋಗಿ, ವಯಸ್ಸಾದ ಮಹಿಳೆಯಾಗಿದ್ದು, ಹೃದಯ ವೈಫಲ್ಯದಿಂದ ಬಳಲುತ್ತಿದ್ದರು ಮತ್ತು “ಟಾಕಿಬ್ರಾಡಿ ಸಿಂಡ್ರೋಮ್”ಗೆ ತುತ್ತಾಗಿದ್ದರು. ಇದರ […]

News

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಹಾಯ ನಿಧಿಗಾಗಿ ಸಂಗೀತ ಕಾರ್ಯಕ್ರಮ

ಮಂಗಳೂರಿನ ಫಾದರ್ ಮುಲ್ಲರ್ ಸೇವಾ ಸಂಸ್ಥೆಯು ಕಳೆದ ಹಲವಾರು ವರುಷಗಳಿಂದ “ಗುಣಪಡಿಸು ಮತ್ತು ಸಾಂತ್ವನಗೊಳಿಸು“ ಎಂಬ ಧೈಯದೊಂದಿಗೆ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದೆ. ರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ದರ ಮತ್ತು ಪ್ರೀತಿಯೊಂದಿಗೆ ನೀಡಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಯಾವ ರೋಗಿಯೂ ಹಣವಿಲ್ಲದ ಕಾರಣಕ್ಕೆ ಚಿಕಿತ್ಸೆ ಪಡೆಯಲಾರದೇ ವಂಚಿತರಾಗುವುದನ್ನು ಬಯಸುವುದಿಲ್ಲ. ಅದಕ್ಕಾಗಿಯೇ ಕಳೆದ ಹಣಕಾಸು ವರುಷದಲ್ಲಿ ಸುಮಾರು 102 ಕೋಟಿಯಷ್ಟು ರಿಯಾಯತಿಯನ್ನು ರೋಗಿಗಳ ಚಿಕಿತ್ಸೆಗಾಗಿ ನೀಡಲಾಗಿದೆ. ಕಿಡ್ನಿಯ ಕಾಯಿಲೆಯು ಇಂದಿನ ಕಾಲಘಟ್ಟದಲ್ಲಿ ಸಾಕಷ್ಟು ಜನರಿಗೆ […]

You cannot copy content of this page