November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಜೆಪ್ಪುವಿನ ಸಂತ ಆಂಥೋನಿ ಆಶ್ರಮದ 350 ಆಶ್ರಿತರಿಗೆ ಹಣ್ಣುಹಂಪಲು ವಿತರಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ‘ಸೇವಾಸಂಕಲ್ಪ ಅಭಿಯಾನ’ದ ಭಾಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜೆಪ್ಪುವಿನ ಸಂತ ಆಂಥೋನಿ ಅನಾಥಾಶ್ರಮದ 350 ಆಶ್ರಿತರಿಗೆ ಹಣ್ಣುಹಂಪಲು ವಿತರಿಸಲಾಯಿತು. ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದೀಪಕ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮಂಡಲ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು ಉಪಸ್ಥಿತರಿದ್ದರು. ಅನಾಥಾಶ್ರಮದ ನಿರ್ದೇಶಕ ವಂದನೀಯ ಫಾದರ್ ಜೆ.ಬಿ. ಕ್ರಾಸ್ತಾ, ಅರ್ಷದ್ ಪೋಪಿ, ಶಾಕೀರ್ ಕಣ್ಣೂರು, ನೆಲ್ಸನ್ ಕ್ಯಾಸ್ಟಲಿನೋ, […]

News

ದೇರಳಕಟ್ಟೆಯ ಫಾದರ್ ಮುಲ್ಲರ್ ಫಾರ್ಮಸಿ ಕಾಲೇಜಿನಲ್ಲಿ ಬಿ.ಫಾರ್ಮ್ ಮೂರನೇ ಬ್ಯಾಚ್‌ಗೆ ಚಾಲನೆ

ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಬಿ.ಫಾರ್ಮ್ ಮೂರನೇ ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 16ರಂದು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ತಿನ್ ಲೂಕಾಸ್ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ […]

News

ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣ – ಭರತ್ ಕುಮ್ದೇಲ್ ಸೇರಿ 8 ಮಂದಿಗೆ ಕೋಕಾ ಕೋರ್ಟ್ ಜಾಮೀನು

ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿ ಮಹೇಶ್ ಕಜೆ ಅವರ ಪರಿಣಾಮಕಾರಿ ವಾದ ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳಾಗಿ ಸೇರಿಸಿ, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ಹಾಗೂ ವಾದ-ಪ್ರತಿವಾದಗಳು ನಡೆದವು. ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಯ ಪರವಾಗಿ ಪುತ್ತೂರು ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ […]

News

ಸೆಪ್ಟೆಂಬರ್ 19ರಂದು ರಾಷ್ಟ್ರೀಯ ಲೋಕ ಅದಾಲತ್ – 8,515 ಪ್ರಕರಣಗಳ ಇತ್ಯರ್ಥಕ್ಕೆ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ಹಾಗೂ ಸದಸ್ಯ ಕಾರ್ಯದರ್ಶಿಯವರಾದ ಜೈಬುನ್ನೀಸಾ ಅವರು ತಿಳಿಸಿದ್ದಾರೆ. 2026 ಆಗಸ್ಟ್ 1ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 56,727 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ಯೋಗ್ಯವಾಗಿರುವ 8,515 ಪ್ರಕರಣಗಳನ್ನು […]

News

Dr H. Prabhakar Elected as National Vice President of the Prestigious Indian College of Cardiology

Mangalore: Dr H. Prabhakar a distinguished Interventional Cardiologist and pioneer in the field, has been elected as the National Vice President of the prestigious Indian College of Cardiology at its National Meet held in Kochi ON 12 September 2026. This prestigious recognition reflects his outstanding contributions to the advancement of cardiology and his dedicated service […]

News

UPI ಶುಲ್ಕ ಪ್ರಸ್ತಾವನೆ ಕೈಬಿಡಲಿ – ಪದ್ಮರಾಜ್ ಪೂಜಾರಿ

ಮಂಗಳೂರು: UPI ವಹಿವಾಟಿನ ಮೇಲೆ ಹೆಚ್ಚುವರಿ ಶುಲ್ಕ ವಿಧಿಸುವ ಪ್ರಸ್ತಾವನೆಯನ್ನು ಮರುಪರಿಶೀಲಿಸಿ, ಡಿಜಿಟಲ್ ಪಾವತಿ ವ್ಯವಸ್ಥೆಗೆ ಯಾವುದೇ ಹೊರೆ ಬೀಳದಂತೆ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ. ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಅನುಗುಣವಾಗಿ ದೇಶದಲ್ಲಿ ಉಚಿತ ಹಾಗೂ ಸರಳ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಿದ ಬಳಿಕ ಇದೀಗ ಶುಲ್ಕ ವಿಧಿಸುವ ಕ್ರಮ ಕೈಗೊಳ್ಳುವುದು ನೀತಿಯಲ್ಲಿನ ವಿರೋಧಾಭಾಸಕ್ಕೆ ಕಾರಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. UPI ಮೇಲಿನ ಮರ್ಚೆಂಟ್ […]

News

ಅಕ್ರಮ ಕೆಂಪುಕಲ್ಲು ಸಾಗಾಟ – ವಿಟ್ಲ ಪೊಲೀಸರ ದಾಳಿ, ನಾಲ್ವರ ವಿರುದ್ಧ ಪ್ರಕರಣ

PSI ರಾಮಕೃಷ್ಣ ಹಾಗೂ ಸಿಬ್ಬಂದಿಯಿಂದ ದಾಳಿ – ವಾಹನಗಳು ವಶ ಯಾವುದೇ ರಶೀದಿ ಅಥವಾ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಚಾಲಕರು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ರಾಮಕೃಷ್ಣ ಹಾಗೂ ಸಿಬ್ಬಂದಿಗಳಾದ ಗೋಪಾಲ ಹಾಗೂ ಶ್ರೀಶೈಲ್ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಪ್ರಕರಣ: ದಿನಾಂಕ 14.09.2026ರಂದು ರಾತ್ರಿ ಕೇರಳ ಕಡೆಯಿಂದ ಕನ್ಯಾನ ಮಾರ್ಗವಾಗಿ […]

News

ಮಂಗಳೂರಿನ ಸಿಒಡಿಪಿಯಲ್ಲಿ ಲಿಂಗ ಸಮಾನತಾ ತಂಡಕ್ಕೆ ಸಾಮರ್ಥ್ಯ ತರಬೇತಿ

ಮಹಿಳಾ ಸಬಲೀಕರಣ ಯೋಜನೆಯಡಿ 50 ಮಂದಿ ಭಾಗಿ ಮಹಿಳಾ ಸಬಲೀಕರಣ ಯೋಜನೆಯಡಿ ಬೆಂಗಳೂರು ಕ್ರಾಸ್ ಸಂಸ್ಥೆ ಹಾಗೂ ಮಂಗಳೂರು ಸಿಒಡಿಪಿ ಸಂಸ್ಥೆಗಳ ಸಹಯೋಗದಲ್ಲಿ ಲಿಂಗ ಸಮಾನತಾ ಪ್ರೇರಕ ತಂಡದ ಸಾಮರ್ಥ್ಯ ಬಲವರ್ಧನಾ ತರಬೇತಿ ಕಾರ್ಯಕ್ರಮ ಇಂದು ಸೆಪ್ಟೆಂಬರ್ 15ರಂದು ಮಂಗಳವಾರ ಸಿಒಡಿಪಿ ಸಂಸ್ಥೆಯಲ್ಲಿ ನಡೆಯಿತು. ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಬಾಹ್ಯ ಲಿಂಗ ಸಮಾನತಾ ತಂಡದ ಸದಸ್ಯೆ ರೋಸಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕ್ರಾಸ್ ಸಂಸ್ಥೆಯ ಬೆಂಗಳೂರು […]

News

Father Muller Homoeopathic Pharmaceutical Division and P.A. College of Pharmacy Sign MoU to Strengthen Academic–Industry Collaboration

Father Muller Homoeopathic Pharmaceutical Division (FMHPD), a unit of Father Muller Charitable Institutions, and P.A. College of Pharmacy, Mangaluru, entered into a Memorandum of Understanding (MoU) on 15 September 2026, with the objective of strengthening academic–industry collaboration, promoting experiential learning, fostering research and innovation, and facilitating professional development in the field of pharmacy. The MoU […]

News

32 ವರ್ಷಗಳ ಶೈಕ್ಷಣಿಕ ಸೇವೆಯ ಸಾರಥಿ ಎಂ. ಸದಾಶಿವ ಭಟ್ ನಿಧನ

ಮಾಣಿ ಕರ್ನಾಟಕ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ – ಅಪಾರ ಶಿಷ್ಯವೃಂದ, ಬಂಧುಬಳಗ ಅಗಲಿದ ಶಿಕ್ಷಣಪ್ರೇಮಿ ಬಂಟ್ವಾಳ: ಮಾಣಿ ನೇರಳಕಟ್ಟೆ ಸಮೀಪದ ಗಣೇಶನಗರ ನಿವಾಸಿ ಹಾಗೂ ಮಾಣಿ ಕರ್ನಾಟಕ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ 75 ವರ್ಷ ಪ್ರಾಯದ ಎಂ. ಸದಾಶಿವ ಭಟ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಸೆಪ್ಟೆಂಬರ್ 15ರಂದು ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಸದಾಶಿವ ಭಟ್ ಅವರು ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ 32 ವರ್ಷಗಳ ಕಾಲ ಮುಖ್ಯ […]

You cannot copy content of this page