ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತ್ರತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ
ಬೆಳ್ತಂಗಡಿ : ಉಜಿರೆ ಬೆನಕ ಆಸ್ಪತ್ರೆಗೆ ಜನವರಿ 13ರಂದು ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂತಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ […]













