November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅನುಮತಿ ಪಡೆದರೂ ಮದುವೆ ಹಾಗೂ ಇನ್ನಿತರ ಸಮಾರಂಭಗಳಲ್ಲಿ ಅಬಕಾರಿ ಇಲಾಖೆಯವರ ಕಿರುಕುಳ

ಅಬಕಾರಿ ಸಚಿವರಿಗೆ ಪತ್ರ ಬರೆದ MLC ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮದುವೆ ಆರತಕ್ಷತೆ ಹಾಗೂ ಇನ್ನಿತರ ಶುಭ ಸಮಾರಂಭಗಳಲ್ಲಿ ಔತಣಕೂಟಗಳನ್ನು ಏರ್ಪಡಿಸುತ್ತಿದ್ದು ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆದು ಮಧ್ಯವನ್ನು ಸರಬರಾಜು ಮಾಡಲಾಗುತ್ತದೆ. ಆದರೆ ಇಂಥಹ ಔತಣಕೂಟಗಳಿಗೆ ಅಬಕಾರಿ ಇಲಾಖೆಯಿಂದ ಪರವಾನಿಗೆ ಪಡೆಯುವಾಗ ಮಧ್ಯವನ್ನು ಸರಬರಾಜು ಅನುಮತಿಗೆ ಅಬಕಾರಿ ಇಲಾಖೆಯು ನಿಯಮಾನುಸಾರ ವಿಧಿಸಬೇಕಾದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಸಂಗ್ರಹಿಸುತ್ತಿರುವ ಬಗ್ಗೆ ಕೆಲವು ಸಮುದಾಯದ […]

News

ಮಂಗಳೂರಿನ ಮೂಡ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ಕಾರುಬಾರು – ಕಡತ ತಿದ್ದುತ್ತಿದ್ದ ವಿಡಿಯೋ ವೈರಲ್

ಸಾರ್ವಜನಿಕರಿಂದ ಭಾರೀ ಆಕ್ರೋಶ ಮಂಗಳೂರು ಮುಡಾ ಕಚೇರಿಯಲ್ಲಿ ಮಧ್ಯವರ್ತಿಗಳದ್ದೇ ಕಾರುಬಾರು ಎನ್ನುವುದಕ್ಕೆ ಸಾಕ್ಷಿ ಎಂಬಂತೆ ಮಧ್ಯವರ್ತಿಯೊಬ್ಬ ಕಡತ ಪರಿಶೀಲಿಸಿ ತನ್ನ ಪೆನ್‌ನಲ್ಲಿ ಕಡತ ತಿದ್ದುತ್ತಿರುವ ವೀಡಿಯೋ ವೈರಲ್ ಆಗಿದೆ. ಜನವರಿ 7ರಂದು ಮಧ್ಯಾಹ್ನ 1.30ಕ್ಕೆ ಸಿಸಿಟಿವಿಯಲ್ಲಿ ರೆಕಾರ್ಡ್ ಆದ ವೀಡಿಯೊದಲ್ಲಿ ಪತ್ತೆಯಾಗಿದೆ. ಮಧ್ಯವರ್ತಿಯೊಬ್ಬ ಮೂಡಾದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಬಂದು, ಮಧ್ಯಾಹ್ನ ಊಟದ ಸಮಯವಾದ ಕಾರಣ ಅಲ್ಲಿ ಯಾರೂ ಇಲ್ಲದೇ ಇರುವುದನ್ನು ಗಮನಿಸಿ ಕಚೇರಿಯ ಒಳಗೆ ನುಗ್ಗಿ ಮೇಜಿನ ಮೇಲಿದ್ದ ಕಡತಗಳಲ್ಲಿ ತನಗೆ ಬೇಕಾದದ್ದನ್ನು ಆರಿಸಿ, ತನ್ನದೇ ಪೆನ್ […]

News

Medical Health Science Exhibition “Prerana 2025” at Father Muller Homoeopathic Medical College

Father Muller Homoeopathic Medical College, Deralakatte is proud to organize Prerana 2025, a Medical Health Science Exhibition on 10th and 11th January 2025 for the High School & Pre University students of in and around Mangalore. This milestone event celebrates the Ruby Jubilee, marking 40 years of the institution’s remarkable legacy in healing, education and […]

News

ಮೂಳೆ ಸಾಂದ್ರತೆ ತಪಾಸಣೆ ಅತೀ ಅಗತ್ಯ – ಡಾ. ಗೋಪಾಲಕೃಷ್ಣ

ಉಜಿರೆ : ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಸಂಭವನೀಯ ಅಪಾಯವನ್ನು ತಡೆಗಟ್ಟಬಹುದು ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.  ಡಾ. ಗೋಪಾಲಕೃಷ್ಣ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸುತ್ತಾ ಮಾತನಾಡುತ್ತಿದ್ದರು. ಮೂಳೆ ಸಾಂದ್ರತೆ ಪರೀಕ್ಷೆಯನ್ನು ಮೂಳೆ ಖನಿಜಾಂಶ ಮತ್ತು ಸಾಂದ್ರತೆಯನ್ನು ಅಳೆಯಲು ಬಳಸಲಾಗುತ್ತದೆ. ಮೂಳೆ ಸಾಂದ್ರತೆಯ ಪರೀಕ್ಷೆಯನ್ನು ಮುಖ್ಯವಾಗಿ ತೆಳುವಾದ, ದುರ್ಬಲ ಮೂಳೆಗಳು ಮತ್ತು ಕಡಿಮೆ ಮೂಳೆ ದ್ರವ್ಯರಾಶಿಯ ಸಮಸ್ಯೆಯನ್ನು ನೋಡಲು ಮಾಡಲಾಗುತ್ತದೆ. […]

News

ಏಮಾಜೆ ಸರಕಾರಿ  ಕಿರಿಯ ಪ್ರಾಥಮಿಕ ಶಾಲಾ “ಪ್ರತಿಭಾ ಪುರಸ್ಕಾರ ” ಹಾಗೂ “ಅಕ್ಷರ ರತ್ನ” ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ

ಜಗತ್ತಿನ ಅಂದಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು  ಶಿಕ್ಷಣಕ್ಕೆ ಮಾತ್ರ – ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಬಂಟ್ವಾಳ :   ಜಗತ್ತಿನ ಅಂಧಕಾರವನ್ನು ಹೋಗಲಾಡಿಸುವ ಶಕ್ತಿ ಇರುವುದು  ಶಿಕ್ಷಣಕ್ಕೆ ಮಾತ್ರ. ಶಿಕ್ಷಕರಲ್ಲಿ ತಾಯಿಯ ಮಮತೆಯನ್ನು ಹೊಂದಿರುವಂತಹ ವಾತ್ಸಲ್ಯ ಗುಣವಿರಬೇಕು ಆಗ ಮಗು ಆಸಕ್ತಿಯಿಂದ ಕಲಿಯುತ್ತದೆ. ತನ್ನೆಲ್ಲ ಉತ್ತಮ ವಿಚಾರಗಳನ್ನು ಮಗುವಿಗೆ ಧಾರೆಯೆರೆಯುವ ಮೂಲಕ ಮಗುವನ್ನು ಮಾನವೀಯ ಮೌಲ್ಯಯುತವಾದ ಸತ್ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇದಕ್ಕೆ  ಜೊತೆಯಾಗಿ ನಿಲ್ಲಬೇಕಾಗಿರುವುದು ಪೋಷಕರ ಕರ್ತವ್ಯವಾಗಿದೆ. ಮಗುವಿಗೆ ಎಲ್ಲರೊಳಗೆ ಒಂದಾಗಿ ಸಂಸ್ಕಾರಯುತ ಜೀವನವನ್ನು […]

News

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ – ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ

ಮಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಇವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ. ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು ಉಚಿತ ಬಸ್ ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಆ ಬಳಿಕ ಆದೇಶ […]

News

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ ‘ಅಲನಿ ಮೆಲೊಡಿ ನೈಟ್’

ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬತ್ತು ಹಾಡುಗಳನ್ನು ಹಾಡಿ ಮನ ರಂಜಿಸಿದಳು. ಕಾರ್ಯಕ್ರಮದಲ್ಲಿ ಮೊದಲಿಗೆ ಮಾಂಡ್ ನಾಟಕ ತಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಆಯೋಜಿಸುವ ಕೊಂಕಣಿ ನಾಟಕ ‘ಸರ್ದಾರ್ ಸಿಮಾಂವ್’ ಇದರ ಬ್ಯಾನರ್ ಬಿಡುಗಡೆಯನ್ನು ಕಲಾಂಗಣ ಚೇರ್ ಮ್ಯಾನ್ […]

News

ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹಬೀಬುಲ್ಲಾ ನಿಧನ

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಕೈಕಂಬ ನಿವಾಸಿ 64 ವರ್ಷ ಪ್ರಾಯದ ಹಬೀಬುಲ್ಲಾ ಅಲ್ಪಕಾಲದ ಅನಾರೋಗ್ಯದಿಂದ ಜನವರಿ 7ರಿಂದ ಬುಧವಾರ  ಬೆಳಗ್ಗೆ ನಿಧನರಾದರು. ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಹಲವಾರು ಧಾರ್ಮಿಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತದೇಹ ಕೈಕಂಬ – ಶಾಂತಿಅಂಗಡಿ ಮನೆಯಲ್ಲಿದ್ದು ಸಂಜೆ ವೇಳೆ ಮಿತ್ತಬೈಲ್ ನಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

News

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ ಮಾಡಿದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನ್ನಿಧ್ಯವನ್ನು ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಜನವರಿ 7ರಂದು ಮಂಗಳವಾರ ಲೋಕಾರ್ಪಣೆ ಮಾಡಿದರು. ಪತ್ನಿ ಡಾ. ಸುದೇಶ್ ಧನ್‌ಕರ್ ಅವರೊಂದಿಗೆ ಆಗಮಿಸಿದ ಉಪರಾಷ್ಟ್ರಪತಿಯವರು ಮೊದಲಿಗೆ ಕ್ಷೇತ್ರಕ್ಕೆ ತೆರಳಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ಬಳಿಕ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಿದರು. ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. […]

News

ಮುಮ್ತಾಝ್ ಆಲಿ ಪ್ರಕರಣದಲ್ಲಿ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಮಂಗಳೂರು : ಉದ್ಯಮಿ ಮುಮ್ತಾಝ್ ಆಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಜನವರಿ 6ರಂದು ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಲಯಕ್ಕೆ 600ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ ಐದನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 […]

You cannot copy content of this page