November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಸೆಂಬರ್ 21 ರಂದು ಕೆ.ಎಫ್.ಸಿ. ಕುಕ್ಕಾಜೆ ವತಿಯಿಂದ ಕ್ರಿಕೆಟ್ ಪಂದ್ಯಾಟ

ಬಂಟ್ವಾಳ : ಕೆ.ಎಫ್.ಸಿ. ಕುಕ್ಕಾಜೆ ವತಿಯಿಂದ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ 8 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಡಿಸೆಂಬರ್ 21 ರಂದು ಕುಕ್ಕಾಜೆ ಶಾಲಾ ಮೈದಾನದಲ್ಲಿ ನಡೆಯಲಿರುವುದು.     ವಿಜೇತ ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ರೂಪಾಯಿ 10,001/-, 6001/-, 2200/-, 2200/- ನಗದು ಮತ್ತು ಕೆ.ಎಫ್.ಸಿ. ಟ್ರೋಫಿಯನ್ನು ನೀಡಲಾಗುವುದು ಎಂದು ಪಂದ್ಯಾಟದ ಮುಖ್ಯ ಸಂಘಟಕ ಕಬೀರ್ ಕುಕ್ಕಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News

ಕ್ರಿಸ್ಮಸ್ ಹಬ್ಬದ ತಯಾರಿಯಲ್ಲಿರುವ ಬಾಲಕ ಸ್ಟೀಫನ್ ವಿದ್ಯುತ್ ಸ್ಪರ್ಶಿಸಿ ಮೃತ್ಯು

ಬೆಳ್ತಂಗಡಿ : ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ‌ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ಡಿಸೆಂಬರ್ 19ರಂದು ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ನಿವಾಸಿ 14ವರ್ಷ ಪ್ರಾಯದ ಸ್ಟೀಫನ್ ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿ. ಕ್ರಿಸ್ಮಸ್ ಪ್ರಯುಕ್ತ ಮನೆಗೆ ಸಾಂತಾಕ್ಲಾಸ್ ಬರುವ ಹಿನ್ನೆಲೆಯಲ್ಲಿ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. […]

News

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಕ್ರೀಡಾಕೂಟ  2024-25

ಕ್ರೀಡೆ ಮನಸ್ಸು ಮತ್ತು ಆರೋಗ್ಯವನ್ನು ವೃದ್ಧಿ ಮಾಡುತ್ತೆ – ಶೈಲಜಾ ರಾಜೇಶ್ ಬಂಟ್ವಾಳ : ಕ್ರೀಡೆ ಅನ್ನೋದು ಮನಸ್ಸು ಮತ್ತು ಆರೋಗ್ಯವನ್ನು ವೃದ್ಧಿ ಮಾಡಲು ಇರುವ ಸುಲಭ ಸಾಧನವಾಗಿದೆ. ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ಕ್ರೀಡೆ ಸಂಸ್ಕೃತಿ ಮೂಲಕ ಮನೆ ಹಾಗೂ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ವಕೀಲೆ ಶೈಲಜ ರಾಜೇಶ್ ಹೇಳಿದರು. ಅವರು ಡಿಸೆಂಬರ್ 18ರಂದು ಗುರುವಾರ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ […]

News

ಮಾಣಿ ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ನಡೆದ ಆಧಾರ್ ಶಿಬಿರ

ಬಂಟ್ವಾಳ : ಆಧಾರ್ ಕಾರ್ಡ್ ಮುಂದಿನ ದಿನಗಳಲ್ಲಿ ಜನರ ಜೀವನಕ್ಕೇ ಆಧಾರ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಜನರು ಈ ಬಗ್ಗೆ ಜಾಗರೂಕರಾಗಬೇಕು ಎಂದು ಅಂಚೆ ಇಲಾಖೆಯ ಅಧಿಕಾರಿ ರಾಜೇಶ್ ಕುಮಾರ್ ಹೇಳಿದರು. ಇವರು ಮಾಣಿ ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ನಡೆದ ಆಧಾರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ […]

News

ಬಾಳೆಪುಣಿ ಕೊರಗರ ಕಾಲನಿಗೆ ಊರಿನ ತ್ಯಾಜ್ಯ – ದಲಿತ ಹೋರಾಟ ಸಮಿತಿಯಿಂದ ಉಗ್ರ ಹೋರಾಟದ ಎಚ್ಚರಿಕೆ

ಮಂಗಳೂರು: “ಬಂಟ್ವಾಳ ತಾಲೂಕು, ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುದಕಟ್ಟೆ ಕೊರಗರ ಕಾಲನಿಯ ಆಸು ಪಾಸಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹಾಗೂ ಸಾರ್ವಜನಿಕರು ವಾಸಿಸುವ ಮನೆಗಳ ಪಕ್ಕದಲ್ಲಿ ಬೇರೆ ಬೇರೆ ಕಡೆಗಳಿಂದ ತ್ಯಾಜ್ಯಗಳನ್ನು ಶೇಖರಿಸಿ 20 ಅಡಿ ಆಳದ ಹೊಂಡದಲ್ಲಿ ಹಾಕುತ್ತಿದ್ದು ಇದರಿಂದಾಗಿ ಪರಿಸರದಲ್ಲಿ ದುರ್ವಾಸನೆ ಹರಡಿ ಮಾರಕ ರೋಗಗಳಾದ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳಿಗೆ ಇಲ್ಲಿಯ ಮಂದಿ ತುತ್ತಾಗುತ್ತಿದ್ದಾರೆ. ತಕ್ಷಣ ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ” ಎಂದು ಕರ್ನಾಟಕ ದಲಿತ ಹೋರಾಟ ಸಮಿತಿ […]

News

ಕಾರ್ಮಿಕ ವರ್ಗಕ್ಕೆ ದ್ರೋಹವೆಸಗಿದ ಯಾವುದೇ ಸರಕಾರಗಳು ಉಳಿದಿಲ್ಲ – ಸುನಿಲ್ ಕುಮಾರ್ ಬಜಾಲ್

ಸಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕ ವರ್ಗದ ಪಾತ್ರವೇ ಪ್ರಧಾನವಾದುದ್ದು. ಅಂತಹ ಕಾರ್ಮಿಕ ವರ್ಗದ ಉತ್ತಮ ಬದುಕಿಗಾಗಿ ಅವಿಶ್ರಾಂತವಾಗಿ ಶ್ರಮಿಸಬೇಕಾದ ಆಳುವ ವರ್ಗಗಳು ನಿತ್ಯ ನಿರಂತರವಾಗಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ಹಾತೊರೆಯುತ್ತಿದೆ. ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಕಾರ್ಮಿಕ ವರ್ಗಕ್ಕೆ ದ್ರೋಹವೆಸಗಿದ ಯಾವುದೇ ಸರಕಾರಗಳು ಇವತ್ತಿನವರೆಗೆ ಉಳಿದಿಲ್ಲ, ಜೊತೆಗೆ ಮಣ್ಣು ಮುಕ್ಕಿದೆ ಎಂದು CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಇವರು ಅಭಿಪ್ರಾಯಪಟ್ಟರು. ಅವರು ಡಿಸೆಂಬರ್ 18ರಂದು ನಗರದಲ್ಲಿ CITU ನೇತ್ರತ್ವದಲ್ಲಿ ಜರುಗಿದ ಪ್ರತಿಭಟನಾ ಪ್ರದರ್ಶನವನ್ನು […]

News

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ – ಬೈಕ್ ಸವಾರ ಮೃತ್ಯು

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿಸೆಂಬರ್ 18ರಂದು ರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಪುನೀತ್ ಸುಳ್ಯ ನಿವಾಸಿಯಾಗಿದ್ದು, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾಣಿಯ ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆಯೇ ಈತ ಮೃತಪಟ್ಟಿದ್ದಾನೆ ಎಂದು […]

News

ಬಂಟ್ವಾಳದಲ್ಲಿ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕೃತಿ ಹಾಗೂ ಸುವರ್ಣ ಕರ್ನಾಟಕ ಸಂಭ್ರಮ

ಬಂಟ್ವಾಳ : ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರ ಲೋಕ ಸೇವಾ ಬಂಧು ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 20ರಿಂದ ಜನವರಿ 26ರ ವರೆಗೆ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕ್ರತಿ ಹಾಗೂ ಸುವರ್ಣ ಕರ್ನಾಟಕ ಸಂಭ್ರಮ ನಡೆಯಲಿದೆ ಎಂದು ಕರಾವಳಿ ಕಲೋತ್ಸವ ಅಧ್ಯಕ್ಷ  ಸುದರ್ಶನ ಜೈನ್ ತಿಳಿಸಿದ್ದಾರೆ. ಬಿ.ಸಿ. ರೋಡಿನ ಪ್ರೆಸ್ ಕ್ಲಬ್ […]

News

ಬಿ.ಸಿ. ರೋಡ್ ನಲ್ಲಿ ಮನೆಗೆ ದಾಳಿ ಮಾಡಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ – ನಸ್ರಿಯಾ ಬೆಳ್ಳಾರೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರನ್ನು  ಭೇಟಿಯಾಗಿ ಒತ್ತಾಯಿಸಿದ  ವಿಮ್ ರಾಜ್ಯ ನಾಯಕಿಯರ ನಿಯೋಗ ಮಂಗಳೂರು ಡಿಸೆಂಬರ್ 17 : ಇತ್ತೀಚೆಗೆ ಬಿ.ಸಿ. ರೋಡ್ ಸಮೀಪದ ಮದ್ದದಲ್ಲಿ ಶಾಹುಲ್ ಹಮೀದ್ ರವರ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮ ಪ್ರವೇಶ ಮಾಡಿ ಮನೆಮಂದಿ ಸೇರಿದಂತೆ ಮಹಿಳೆಯರ ಮೇಲೆ ದಾಳಿ ಮಾಡಿ ಗಂಭೀರ ಹಲ್ಲೆ ನಡೆಸಿ ಹಣ ಮತ್ತು ಸರವನ್ನು ದೋಚಿ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ ಪುರಸಭಾ ಸದಸ್ಯ ಹಸೈನಾರ್ ನೇತೃತ್ವದ ರೌಡಿ […]

News

ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಂಗಮ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಉಪ್ಪಿನಂಗಡಿ : ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಉಪ್ಪಿನಂಗಡಿ ಸಂಗಮ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನವಾಗಿ ರಚಿತವಾದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನವೀನ್ ಬ್ರಾಗ್ಸ್, ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಗೌರವಾಧ್ಯಕ್ಷರಾಗಿ ಉಪಪ್ರಾಂಶುಪಾಲೆ ದೇವಕಿ ಡಿ., ಉಪಾಧ್ಯಕ್ಷರಾಗಿ ಜಯಕುಮಾರ ಪೂಜಾರಿ ಇಳoತಿಲ, ಹಾಗೂ ಚಂದ್ರಶೇಖರ ಮಡಿವಾಳ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಝಕರಿಯ ಕೊಡಿಪಾಡಿ, ಜೊತೆ ಕಾರ್ಯದರ್ಶಿಗಳಾಗಿ ಪ್ರಜ್ಞಾ ಶೆಟ್ಟಿ, ವೈಶಾಲಿ ಕುಂದರ್, ಸವಿತಾ ಮಸ್ಕರೇನಸ್, ಕೋಶಾಧಿಕಾರಿಯಾಗಿ ಹ್ಯಾಪಿ ಟೈಮ್ಸ್ […]

You cannot copy content of this page