November 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉದ್ಯಮ ಕ್ಷೇತ್ರದ ಸಾಧನೆಗೆ ಪ್ರತಿಷ್ಠಿತ ಗೌರವ – ಪಾದೆ ಅಜಿತ್ ರೈ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಪ್ರಶಸ್ತಿ

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನದ 30ನೇ ವಾರ್ಷಿಕ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ಕುಶಲ್ ಎಸ್. ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ನಗರದ ಎ.ಜೆ. ಗ್ರ್ಯಾಂಡ್‌ನ ಸಭಾಂಗಣದಲ್ಲಿ ನಡೆಯಲಿದೆ. ಮಹಾಸಭೆಯ ಬಳಿಕ ನಡೆಯಲಿರುವ ಸಮಾರಂಭದಲ್ಲಿ ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಹಾಗೂ ಉದ್ಯಮಿ ಪಾದೆ ಅಜಿತ್ ರೈ ಅವರಿಗೆ ವಿಶ್ವ ಬಂಟ ಪ್ರತಿಷ್ಠಾನದ ಪ್ರತಿಷ್ಠಿತ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಪ್ರತಿಷ್ಠಾನದ ವಿವಿಧ […]

News

ಸಂಗೀತದಿಂದ ದೈವಿಕ ಆನಂದದ ರಸದೌತಣ – ಮಂಗಳೂರು ರಾಮಕೃಷ್ಣ ಮಠದಲ್ಲಿ ‘ರಾಗ ಸುಧಾ’ ಸಂಗೀತ ಸಂಭ್ರಮ

ಮಂಗಳೂರು: “ಸಂಗೀತ ಎನ್ನುವುದು ಕೇವಲ ಮನರಂಜನೆಯಲ್ಲ, ಅದು ಆಧ್ಯಾತ್ಮಿಕ ಸಾಧನೆ. ಸೃಷ್ಟಿಯ ಆದಿಯಿಂದಲೂ ನಮ್ಮೊಂದಿಗಿರುವ ಸಂಗೀತದ ಮೂಲಕ ದೈಹಿಕ ಹಾಗೂ ಮಾನಸಿಕ ಶಾಂತಿಯ ಜೊತೆಗೆ ದೈವಿಕ ಆನಂದವನ್ನು ಹೊಂದಲು ಸಾಧ್ಯ” ಎಂದು ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಸ್ವಾಮಿ ಜಿತಕಾಮನಂದಜಿ ಅವರು ಅಭಿಪ್ರಾಯಪಟ್ಟರು. ಸೆಪ್ಟೆಂಬರ್ 6ರಂದು ಭಾನುವಾರ ಮಂಗಳೂರಿನ ರಾಮಕೃಷ್ಣ ಮಠದ ಪ್ರಶಾಂತ ವಾತಾವರಣದಲ್ಲಿ ‘ಕಲಾಸಾಧನ’ ಸಂಸ್ಥೆ ಹಾಗೂ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಗ ಸುಧಾ’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಸಂಭ್ರಮಕ್ಕೆ ಚಾಲನೆ ನೀಡಿ […]

News

Teachers, Ethnic Day celebrations at FMCI Kankanady Campus

The programme brought together the constituent educational institutions of Father Muller Charitable Institutions (FMCI) for a combined celebration of National Teachers’ Day, Ethnic Day 2026 and Student Achievement Awards on 5 September 2026 at the Father Muller Convention Centre. The participating institutions included Father Muller Medical College, Father Muller College of Allied Health Sciences, Father […]

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು ಆಚರಿಸುವ ಮೊಸರು ಕುಡಿಕೆ ಉತ್ಸವವು ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಮಾಣಿ ಗಾಂಧಿ ಮೈದಾನದಲ್ಲಿ ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಯೋಜಿಸಲಾಗಿದ್ದ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ಜಾತಿ, […]

News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಪ್ರಕರಣವನ್ನು ತಕ್ಷಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಬೆಂಗಳೂರು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಂತ್ರಸ್ತ ಕುಟುಂಬಸ್ಥರೊಂದಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದರ ಜೊತೆಗೆ, […]

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ. ಆರ್ಯಭಟ ಎಜುಕೇಶನಲ್ ಟ್ರಸ್ಟ್ ಹಾಗೂ ಕರ್ನಾಟಕ ಚೇತನ ಫೌಂಡೇಷನ್, ಧಾರವಾಡ ಇವರ ವತಿಯಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನ ಎನ್.ಆರ್. ಕಾಲೋನಿಯ ಬಿ.ಎಂ. ಶ್ರೀ ಪ್ರತಿಷ್ಠಾನದ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ‘ಸಾಧಕರ ಸಮಾಗಮ’ ಕಾರ್ಯಕ್ರಮದಲ್ಲಿ ಅವರಿಗೆ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮವನ್ನು ಶಿಕ್ಷಕ, ಸಮಾಜಸೇವಕ […]

News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಶಿನೀರ ಬಾನು ಅವರು ಜಿಲ್ಲಾಧ್ಯಕ್ಷೆಯಾಗಿ ಪುನರಾಯ್ಕೆಯಾಗಿದ್ದಾರೆ. ಜಿಲ್ಲಾಧ್ಯಕ್ಷೆ ಶಿನೀರ ಬಾನು ಧ್ವಜಾರೋಹಣ ನೆರವೇರಿಸುವ ಮೂಲಕ ಪ್ರತಿನಿಧಿ ಸಭೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ 2024–2026ರ ಅವಧಿಯಲ್ಲಿ ಸಂಘಟನೆಯ ವತಿಯಿಂದ ಹಮ್ಮಿಕೊಂಡ ವಿವಿಧ ಸಾಮಾಜಿಕ, ಮಹಿಳಾ ಸಬಲೀಕರಣ ಹಾಗೂ ಜನಪರ ಚಟುವಟಿಕೆಗಳ ವರದಿಯನ್ನು ಮಂಡಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಿನೀರ ಬಾನು, […]

News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ ನಿವಾಸಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಪದಾಧಿಕಾರಿಯಾಗಿರುವ 44 ವರ್ಷ ಪ್ರಾಯದ ವಿನೋದ್ ಕುಮಾರ್ ಬಿ. ಅವರು ನೀಡಿದ ದೂರಿನಂತೆ, ಆಗಸ್ಟ್ 25ರಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿದಾಗ ದೇವಸ್ಥಾನದ ಹೊರಗೆ ಇರಿಸಲಾಗಿದ್ದ ಕಾಣಿಕೆ ಡಬ್ಬಿ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ದೇವಸ್ಥಾನದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆಗಸ್ಟ್ 24ರ […]

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion and community service, the Symphony of Hope Team, in association with the Mangalore Round Table Trust and Mangalore Ladies Circle, donated ₹29,00,000 towards paediatric cancer care at Father Muller Charitable Institutions. The cheque was formally […]

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಯನ್ನು ಕೋರುವ ಭಕ್ತನ ಮನದಾಳದ ಭಾವನೆಗಳನ್ನು ಈ  ಗೀತೆಯಲ್ಲಿ ಹೃದಯಸ್ಪರ್ಶಿಯಾಗಿ ಕಟ್ಟಿಕೊಡಲಾಗಿದೆ. ತನ್ನ ತಪ್ಪುಗಳಿಗೆ ಕ್ಷಮೆ ಕೋರುವುದರೊಂದಿಗೆ ಗುರು ರಾಯರ ಮೇಲಿನ ಅಚಲ ವಿಶ್ವಾಸ, ಭಕ್ತಿ ಹಾಗೂ ಸಂಪೂರ್ಣ ಶರಣಾಗತಿಯ ಭಾವವನ್ನು ಗೀತೆಯ ಮೂಲಕ ಮನಮುಟ್ಟುವ ರೀತಿಯಲ್ಲಿ ಅಭಿವ್ಯಕ್ತಿಸಲಾಗಿದೆ. ‘ಮಲ್ತಿ ಪಾಪಗೇ […]

You cannot copy content of this page