ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ
ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ ಸಮುದಾಯದ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹೇಳಿದರು. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೆಕುಡಿಯ ಸಮುದಾಯದ ಮುಖಂಡರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದ ಅವರು ಮಲೆಕುಡಿಯ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಹಾಗೂ ಮಲೆಕುಡಿಯ ಸಂಘದ […]













